Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಪ.ಪಂ ಗ್ರಾಮೀಣ ಭಾಗಗಳನ್ನು ಕೈಬಿಡುವ ಬಗ್ಗೆ ಶೀಘ್ರ ಅನುಮೋದನೆ: ಸಚಿವ ಎಚ್.ಸಿ. ಬಾಲಕೃಷ್ಣ
    ಊರ್ಮನೆ ಸಮಾಚಾರ

    ಬೈಂದೂರು ಪ.ಪಂ ಗ್ರಾಮೀಣ ಭಾಗಗಳನ್ನು ಕೈಬಿಡುವ ಬಗ್ಗೆ ಶೀಘ್ರ ಅನುಮೋದನೆ: ಸಚಿವ ಎಚ್.ಸಿ. ಬಾಲಕೃಷ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಅವೈಜ್ಞಾನಿಕವಾಗಿರುವ ಬೈಂದೂರು ಪಟ್ಟಣ ಪಂಚಾಯತ್‌ ಗ್ರಾಮೀಣ ಭಾಗಗಳನ್ನು ಕೈಬಿಟ್ಟು, ವೈಜ್ಞಾನಿಕವಾಗಿ ಉಳಿದ ಭಾಗಗಳನ್ನು ಮುಂದುವರಿಸುವ ಬಗ್ಗೆ ಶೀಘ್ರ ಕ್ಯಾಬಿನೆಟ್ ಅನುಮೋದನೆ ಪಡೆದು ಮುಂದಿನ 2-3 ತಿಂಗಳೊಳಗೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೌರಾಡಳಿತ ಖಾತೆ ಸಚಿವ ಎಚ್.ಸಿ. ಬಾಲಕೃಷ್ಣ ಹೇಳಿದರು.

    Click Here

    Click Here

    Call us

    Click Here

    ಅವರು ಬೈಂದೂರು ರೈತ ಸಂಘದ ನೇತೃತ್ವದಲ್ಲಿ ಬೈಂದೂರು ಪಟ್ಟಣ ಪಂಚಾಯಿತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವ ಬಗ್ಗೆ 432 ದಿನಗಳಿಂದ ಅನಿರ್ದಿಷ್ಟಾವಧಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಸರಕಾರ ಇರುವುದು ಜನಸಾಮಾನ್ಯರ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಕ್ಕೆ. ಸಣ್ಣ ವಿಷಯಕ್ಕಾಗಿ ಈ ಭಾಗದ ರೈತರು ಕಳೆದ 432 ದಿನಗಳಿಂದ ಹೋರಾಟ ನಡೆಸುತ್ತಿರುವುದು ಆಡಳಿತ ವ್ಯವಸ್ಥೆಗೆ ಅವಮಾನ. ಈ ಬಗ್ಗೆ ವಿಷಾದ ವ್ಯಕ್ತಪಡಿಸುವೆ. ಈ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ತಗ್ಗರ್ಸೆ, ಗಂಗನಾಡು, ಆಲಂದೂರು, ಮದ್ದೋಡಿ ಹಾಗೂ ವಸ್ರೆ ವಾರ್ಡ್‌ಗಳನ್ನು ಕೈಬಿಡಲಾಗುವುದು ಎಂದು ಘೋಷಿಸಿದ ಅವರು, ಈ ಬಗ್ಗೆ ಶೀಘ್ರ ಕ್ಯಾಬಿನೆಟ್ ಅನುಮೋದನೆ ಪಡೆಯಲಾಗುವುದು ಎಂದರು.

    ಈ ಬಗ್ಗೆ ಮಗದೊಮ್ಮೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರ ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ಸಭೆ ಸೇರಿ ಚರ್ಚಿಸಿ ಇನ್ನೊಂದು ವರದಿ ಸಿದ್ದಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ ಎಂದ ಸಚಿವರು, ಗ್ರಾಮೀಣ ಭಾಗಗಳನ್ನು ಕೈಬಿಡುವ ಬಗ್ಗೆ ಯಾರೂ ಆತಂಕ, ಅನುಮಾನ ಪಡುವ ಅಗತ್ಯವಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಇದನ್ನು ಮಾಡಿಯೇ ತೀರುತ್ತೇನೆ. ಇಲ್ಲದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಮ್ಮೊಂದಿಗೆ ಹೋರಾಟದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಘೋಷಿಸಿದರು.

    ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಜನ ಪ್ರತಿನಿಧಿಯ ಆದ್ಯ ಕರ್ತವ್ಯವಾಗಿದ್ದು, ಕಳೆದ 432 ದಿನ ಗಳಿಂದ ಹೋರಾಟ ನಡೆಸುತ್ತಿರುವ ಬಗ್ಗೆ ಈ ಭಾಗದ ಜನಪ್ರತಿನಿಧಿಯಾಗಿ ರೈತರ ಕ್ಷಮೆ ಕೋರಿದ ಅವರು ಶೀಘ್ರ ಗ್ರಾಮೀಣ ಭಾಗಗಳನ್ನು ಕೈಬಿಟ್ಟು ಗ್ರಾಮೀಣ ಜನರಿಗೆ ಸರಕಾರದಿಂದ ದೊರಕುವ ಸವಲತ್ತುಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    https://www.youtube.com/live/cuzBICUwyfM?si=WMOnRWmW8cbx1zn5 .

    ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಕೆಲವೊಮ್ಮೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಎಡವಟ್ಟಿನಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳ ಬೇಕಾಗಿದೆ ಎಂದರು.

    Click here

    Click here

    Click here

    Call us

    Call us

    ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಕಳೆದ 432 ದಿನಗಳಿಂದ ಹೋರಾಟ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸರಕಾರವೇ ಭೇಟಿ ನೀಡಿ ಗ್ರಾಮೀಣ ಭಾಗಗಳನ್ನು ಕೈಬಿಡುವ ಬಗ್ಗೆ ಘೋಷಿಸಿರುವುದನ್ನು ಶ್ಲಾಘಿಸಿದ ಅವರು, ಇದು ಈ ಭಾಗಕ್ಕೆ ದೊರೆತ ಸ್ವಾತಂತ್ರೋತ್ಸವವಾಗಿದೆ ಎಂದರು.

    ಜಯ ದೊರಕಿದೆ ಸಂತೃಪ್ತಿಗಾಗಿ ಬೃಹತ್ ರೈತರೊಂದಿಗೆ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಪಾದಯಾತ್ರೆಯಲ್ಲಿ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದರು.

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿ.ಪಂ. ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಅರವಿಂದ ಪೂಜಾರಿ, ಗ್ಯಾರೆಂಟಿ ಅನುಷ್ಠಾನ ಸಮಿತಿಯ ಕಾಂಗ್ರೆಸ್ ಮುಖಂಡ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷ ಮೋಹನ ಪೂಜಾರಿ, ಸುರೇಶ ಬಟವಾಡಿ, ಕೃಷ್ಣ ದೇವಾಡಿಗ, ಸನ್ನಿ ಪಾದರ್, ವೀರಭದ್ರ ಗಾಣಿಗೆ ಮತ್ತಿತರರು ಉಪಸ್ಥಿತರಿದ್ದರು. ಅರುಣ್‌ ಕುಮಾರ ಶಿರೂರು ನಿರ್ವಹಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಅಮೃತೇಶ್ವರೀ ದೇಗುಲಕ್ಕೆ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಭೇಟಿ

    14/10/2026

    ಗಂಗೊಳ್ಳಿ: ಪೊಲೀಸ್ ಠಾಣೆಗೆ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಅಭಿನಂದನೆ

    14/10/2026

    ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ

    14/10/2026
    Leave A Reply Cancel Reply

    fifteen + eight =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಪ.ಪಂ ಗ್ರಾಮೀಣ ಭಾಗಗಳನ್ನು ಕೈಬಿಡುವ ಬಗ್ಗೆ ಶೀಘ್ರ ಅನುಮೋದನೆ: ಸಚಿವ ಎಚ್.ಸಿ. ಬಾಲಕೃಷ್ಣ
    • ಕೃಷಿಯನ್ನು ಲಾಭದಾಯಕ ಉದ್ಯಮವಾಗಿಸಿ, ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಲಿ: ಡಾ. ಅಶೋಕ್ ದಳವಾಯಿ
    • ಕೋಟ ಅಮೃತೇಶ್ವರೀ ದೇಗುಲಕ್ಕೆ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಭೇಟಿ
    • ಗಂಗೊಳ್ಳಿ: ಪೊಲೀಸ್ ಠಾಣೆಗೆ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಅಭಿನಂದನೆ
    • ಕುಂದಾಪುರ: ಸರಳ ವಿವಾಹಕ್ಕೆ ಪ್ರೋತ್ಸಾಹಧನ – ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.