ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿಐಕ್ಯೂಎಸಿ ಮತ್ತು ವಾಣಿಜ್ಯ ವಿಭಾಗ ಆಶ್ರಯದಲ್ಲಿ ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸ್ಟೀವನ್ ರಾಬರ್ಟ್ ಟೆಲ್ಲಿಸ್ ಅವರು ಹಣಕಾಸು ನಿರ್ವಹಣೆ, ಹೂಡಿಕೆ ಹಾಗೂ ಹೂಡಿಕೆದಾರರ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಹಣಕಾಸು ಯೋಜನೆ ರೂಪಿಸುವುದು, ಉಳಿತಾಯ ಮಹತ್ವ, ಸೂಕ್ತ ಹೂಡಿಕೆ ವಿಧಾನಗಳ ಆಯ್ಕೆ ಮತ್ತು ಆರ್ಥಿಕ ಭವಿಷ್ಯವನ್ನು ಸುರಕ್ಷತೆಗೊಳಿಸಿರುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ನಿರ್ವಹಿಸಿದರು. ಕಾರ್ಯಕ್ರಮ ಸಂಯೋಜಕರಾದ ಡಾ. ರವಿಚಂದ್ರ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ದೀಪಕ್ ಕುಮಾರ್ ಶೆಟ್ಟಿ ಧನ್ಯವಾದಗೈದರು.












