ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅಕ್ಟೋಬರ್ 12 ರಿಂದ 14 ರವರೆಗೆ ಬೆಂಗಳೂರಿನ ಎಂ.ಸಿ. ಬಡಾವಣೆಯಲ್ಲಿರುವ ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪುಸ್ತಕಗಳ ಪಟ್ಟಿಯನ್ನು ಉಡುಪಿ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯಗಳ ಸೂಚನಾ ಫಲಕಗಳಲ್ಲಿ ಹಾಗೂ ಇಲಾಖೆಯ ವೆಬ್ ಸೈಟ್ http://dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಲೇಖಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ತಮ್ಮ ಲಿಖಿತ ಮನವಿಗಳನ್ನು ಅಕ್ಟೋಬರ್ 22 ರೊಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












