ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುನ್ನಡೆಯುವುದರ ಜೊತೆಗೆ ಸಂವೇದನಾಶೀಲತೆಯನ್ನು ಬೆಳೆಸಿಕೊಳ್ಳಬೇಕು. ಆತ್ಮಾವಲೋಕನದ ಮೂಲಕ ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಗುರುತಿಸಿಕೊಂಡು, ಕಲೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ವಿಮರ್ಶಾತ್ಮಕ ಚಿಂತನೆಯೊಂದಿಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಭವಿಷ್ಯದ ಬದುಕು ಅರ್ಥಪೂರ್ಣವಾಗಲು ಸಾಧ್ಯ ಎಂದು ಬ್ರಹ್ಮಾವರದ ಎಸ್ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಅಭಿಲಾಷ ಎಸ್. ಹೇಳಿದರು.
ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ್ದ ‘ಜೀವನ ಮೌಲ್ಯ’ ಸರಣಿ ಉಪನ್ಯಾಸ ಮಾಲಿಕೆ-3ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ವರಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ಸಿಂಚನಾ ಮತ್ತು ನಿರೀಕ್ಷಾ ಪ್ರಾರ್ಥಿಸಿದರು. ಪ್ರಮಿತಾ ಸ್ವಾಗತಿಸಿ, ನವ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯಶ್ರೀ ವಂದಿಸಿದರು.

















