ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್ವರ್ಕ್ ಸಂಬAಧಿತ ಸಮಸ್ಯೆಗಳನ್ನು ಪರಿಹರಿಸಿ ಖಾಸಗಿ ಕಂಪನಿಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಸೇವೆ ಒದಗಿಸಬೇಕೆಂದು ಅಧಿಕಾರಿಗಳಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಬಿ.ಎಸ್.ಎನ್.ಎಲ್ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಾದ್ಯಂತ ಇರುವ ಬಿ.ಎಸ್.ಎನ್.ಎಲ್ ಸ್ಥಾವರಗಳನ್ನು 3ಜಿ ಯಿಂದ 4 ಜಿ ಗೆ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಉತ್ತಮ ರೀತಿಯ ಸೇವೆಗಳನ್ನು ಒದಗಿಸಬೇಕು. ಟವರ್ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವುದರೊಂದಿಗೆ ನೆಟ್ವರ್ಕ್ ಸಮಸ್ಯೆ ಉಂಟಾಗದಂತೆ ನೋಡಿಕೊಂಡು ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ದೊರಕಿಸಿ ಕೊಡಬೇಕು ಎಂದರು.
ಜಿಲ್ಲೆಯ ಎಲ್ಲಾ ಸ್ಥಾವರಗಳಿಗೆ ಡಿ.ಜಿ ಸೆಟ್ಗಳನ್ನು ಅಳವಡಿಸುವುದರೊಂದಿಗೆ ಅವುಗಳು ಕಾರ್ಯಪ್ರವೃತ್ತರಾಗುವಂತೆ ನೋಡಿಕೊಳ್ಳಬೇಕು ಎಂದ ಅವರು ಪವರ್ ಪ್ಲಾö್ಯಂಟ್ಗಳು ನಿರಂತರವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಅವಶ್ಯವಿರುವಲ್ಲಿ ಬ್ಯಾಟರಿ ಅಥವಾ ಸೋಲಾರ್ ಬ್ಯಾಟರಿಗಳ ಅಳವಡಿಸಬೇಕು ಎಂದರು.
ಹೊಸದಾಗಿ ಟವರ್ಗಳನ್ನು ನಿರ್ಮಾಣ ಮಾಡಲು ಜಿಲ್ಲಾಡಳಿತದಿಂದ ಬೇಡಿಕಗನುಗುಣವಾಗಿ 39 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ಕಾರ್ಯವನ್ನು ಶೀಘ್ರದಲ್ಲೇ ಕೈಗೊಳ್ಳಬೇಕು. ಪೆರ್ಡೂರಿನ ಕುಕ್ಕುಂಡಿಯ ನಿವೇಶನದಲ್ಲಿ ಮರತೆರವಿನ ಕಾರ್ಯಗಳನ್ನು ಅರಣ್ಯ ಇಲಾಖೆಯವರು ಅದಷ್ಟು ಶೀಘ್ರದಲ್ಲಿಯೇ ಕೈಗೊಳ್ಳಬೇಕೆಂದರು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಹಾಗೂ ಹತ್ತಿರದ ಆಸ್ಪತ್ರೆಗಳಲ್ಲಿಯೂ ನೆಟ್ವರ್ಕ್ ಸಮಸ್ಯೆ ಕಂಡು ಬರುತ್ತಿದೆ. ಸಮಸ್ಯೆಗಳನ್ನು ಪರಿಹರಿಸಿ ನೆಟ್ವರ್ಕ್ನಲ್ಲಿ ಸುಧಾರಣೆ ತರಬೇಕು. ಜಿಲ್ಲೆಯಲ್ಲಿ ಇನ್ನು ಮುಂದೆ ಪ್ರತಿ ತಿಂಗಳೂ ಈ ಬಗ್ಗೆ ಸಭೆ ನಡೆಸಲಿದ್ದೇನೆ. ಮುಂದಿನ ಸಭೆಯಲ್ಲಿ ಸಮಸ್ಯೆಗಳು ಇತ್ಯರ್ಥವಾಗುವಂತೆ ಕ್ರಮ ವಹಿಸಬೇಕು. ಕಾಪು ಮತ್ತು ಕಮಲಶಿಲೆಯಂತ ಪ್ರೇಕ್ಷಣೀಯ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ನೆಟ್ವರ್ಕ್ ಸಮಸ್ಯೆಯ ದೂರುಗಳು ಬರುತ್ತಿವೆ. ಇದನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಬ್ರಹ್ಮಾವರ ತಾಲೂಕಿನ ಕರ್ಜೆ ಮತ್ತು ಕಾಪುವಿನ ಕಟಪಾಡಿಯಲ್ಲಿ ಟವರ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹಾಗೂ ನಾಡ್ಪಾಲು- ಕಬ್ಬಿನಾಲೆ ಪರಿಸರದಲ್ಲಿ ಮರುಸರ್ವೆ ನಡೆಸಲು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಬಿ.ಎಸ್.ಎನ್.ಎಲ್ ಬೆಂಗಳೂರು ವಿಭಾಗದ ಸಿಜಿಎಂ ಸುಕುಮಾರನ್ ಎನ್.ಕೆ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಪಿಜಿಎಂ ಬಿ ವೆಂಕಟೇಶ್ವರಲು, ಮಂಗಳೂರು ಜಿಎಂ ಹೇಮಂತ್ ಎಸ್ ಬಿ ಉಪಸ್ಥಿತರಿದ್ದರು.

















