Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ.20ರ ವರೆಗೆ ಅವಕಾಶ
    ಉಡುಪಿ ಜಿಲ್ಲೆ

    ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ.20ರ ವರೆಗೆ ಅವಕಾಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ (ಎಎವೈ) ಪಡಿತರ ಚೀಟಿಯಲ್ಲಿರುವ ಅರ್ಹ ಫಲಾನುಭವಿಗಳು, ಈ ಹಿಂದೆ ಇ-ಕೆವೈಸಿ ಮಾಡಿಸಿ 5 ವರ್ಷಗಳು ಪೂರ್ಣಗೊಂಡಿರುವ ಪಡಿತರ ಚೀಟಿದಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರವು ಪ್ರಸ್ತುತ ಅಕ್ಟೋಬರ್ 20ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಿರುತ್ತದೆ.

    Click Here

    Click Here

    Call us

    Click Here

    ಈ ಹಿಂದೆ ಸೆಪ್ಟಂಬರ್ 30ನ್ನು ಕೊನೆಯ ದಿನವಾಗಿ ನಿಗದಿಗೊಳಿಸಲಾಗಿದ್ದು, ಈ ಕುರಿತಾಗಿ ಪತ್ರಿಕೆಯ ಮೂಲಕ ಮತ್ತು ನ್ಯಾಯಬೆಲೆ ಅಂಗಡಿಯವರ ಮೂಲಕ ಪಡಿತರ ಚೀಟಿದಾರರಿಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಆದರೆ, ಈಗ ಸರ್ಕಾರದಿಂದ ಪ್ರಸ್ತುತ ಅಕ್ಟೋಬರ್ 20ರ ವರೆಗೆ ಇ-ಕೆವೈಸಿ ಮಾಡಲು ಕಾಲಾವಕಾಶವನ್ನು ವಿಸ್ತರಿಸಲಾಗಿದ್ದು, ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಇದುವರೆಗೂ ಇ-ಕೆವೈಸಿ ಮಾಡಿಸದೇ ಇರುವ ಅರ್ಹ ಫಲಾನುಭವಿಗಳು ಕೂಡಲೇ ಸದ್ರಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

    ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿಯಿರುವ ಪಡಿತರ ಚೀಟಿದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿಯವರಿಗೆ ನೀಡಲಾಗಿದೆ. ಸದರಿ ಪಟ್ಟಿಯನ್ನು ಪರಿಶೀಲಿಸಿಕೊಂಡು, ಬಾಕಿ ಉಳಿದಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ಬೇರೆಡೆಗೆ ವಲಸೆ ಹೋಗಿರುವ ಅಥವಾ ಊರು ಬಿಟ್ಟು ತೆರಳಿರುವ ಪಡಿತರ ಚೀಟಿದಾರರು ಸಹ ತಮ್ಮ ಇ-ಕೆವೈಸಿ ಸ್ಥಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ಪರಿಶೀಲಿಸಿಕೊಂಡು ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಅಲ್ಲದೇ “ಅನ್ನಸೇವಾ” ಆಪ್ ಅನ್ನು ಮೊಬೈಲ್ ನಲ್ಲಿರುವ ಪ್ರೇಸ್ಟೋರ್‌ನಿಂದ ಡೌನ್ ಲೋಡ್ ಮಾಡಿಕೊಂಡು ಸಹ ಮನೆಯಲ್ಲಿಯೇ ಇ-ಕೆವೈಸಿಯನ್ನು ಪಡಿತರ ಚೀಟಿದಾರರು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

    ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತೆಗೆದುಕೊಂಡು ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಅ.17 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    15/10/2026

    ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

    15/10/2026

    ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

    15/10/2026
    Leave A Reply Cancel Reply

    thirteen − five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
    • ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅನಿಲ್ ಮಸ್ಕರೇನ್ಹಾಸ್ ಭಾಜನ
    • ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ.20ರ ವರೆಗೆ ಅವಕಾಶ
    • ಬೈಂದೂರು ಸ.ಪ್ರ.ದ ಕಾಲೇಜಿನ 2006–07ನೇ ಸಾಲಿನ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
    • ಅಂಪಾರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.