Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅನಿಲ್ ಮಸ್ಕರೇನ್ಹಾಸ್ ಭಾಜನ
    alvas nudisiri

    ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅನಿಲ್ ಮಸ್ಕರೇನ್ಹಾಸ್ ಭಾಜನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ (ಕುಪ್ಮಾ) ವತಿಯಿಂದ ನೀಡಲಾಗುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಳ್ವಾಸ್‌ನ ಅನಿಲ್ ಮಸ್ಕರೇನ್ಹಾಸ್ ಭಾಜನರಾಗಿದ್ದಾರೆ. ಬೆಳ್ತಂಗಡಿಯ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನಿಲ್ ಮಸ್ಕರೇನ್ಹಾಸ್‌ರವರೊಂದಿಗೆ ಜಿಲ್ಲೆಯ ಇತರ ಐವರು ಶಿಕ್ಷಕರೂ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    Click Here

    Click Here

    Call us

    Click Here

    ಪ್ರಸ್ತುತ ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ (ಪಿಯು ವಿಭಾಗ) ಸಿಬಿಎಸ್‌ಇ ವಿಭಾಗದ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಅನಿಲ್ ಮಸ್ಕರೇನ್ಹಾಸ್, ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ರೇಡಿಯೇಷನ್ ಫಿಸಿಕ್ಸ್ನಲ್ಲಿ ಅತ್ಯುತ್ತಮ ಸಾಧನೆಗಾಗಿ ಹೋಮಿ ಜೆ. ಭಾಭಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೇಂಟ್ ಅಲೋಶಿಯಸ್ ಕಾಲೇಜು, ಮಂಗಳೂರು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಗಮನಾರ್ಹ ಅನುಭವ ಹೊಂದಿದ್ದಾರೆ.

    ಸಿಇಟಿ, ನೀಟ್, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನೇಕ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿ ವಿಷಯದ ಕುರಿತ ಗಾಢವಾದ ಪರಿಕಲ್ಪನೆ, ಪರೀಕ್ಷಾ ಕೌಶಲ ಮತ್ತು ಆತ್ಮವಿಶ್ವಾಸ ಬೆಳೆಸುವ ಮೂಲಕ ಅವರ ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದ ಗುರಿ ಸಾಧನೆಗೆ ಪ್ರೇರಣೆ ನೀಡಿದ್ದಾರೆ. ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿರುವ ಅವರು 1996–97ರಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್ ತಂಡವನ್ನು ಪ್ರತಿನಿಧಿಸಿದ್ದರು.

    ಇವರ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಹೋದ್ಯೋಗಿಗಳು ಅಭಿನಂದನೆ ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

    16/10/2026

    ಬೈಂದೂರು ಸ.ಪ್ರ.ದ ಕಾಲೇಜಿನ 2006–07ನೇ ಸಾಲಿನ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

    16/10/2026

    ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಶಿಕ್ಷಕರು ತೆರೆದುಕೊಳ್ಳಬೇಕು: ವಿವೇಕ್ ಆಳ್ವ

    15/10/2026
    Leave A Reply Cancel Reply

    two × four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
    • ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅನಿಲ್ ಮಸ್ಕರೇನ್ಹಾಸ್ ಭಾಜನ
    • ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ.20ರ ವರೆಗೆ ಅವಕಾಶ
    • ಬೈಂದೂರು ಸ.ಪ್ರ.ದ ಕಾಲೇಜಿನ 2006–07ನೇ ಸಾಲಿನ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
    • ಅಂಪಾರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.