ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯುತ್ತಿರುವ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರವನ್ನು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಧನಂಜಯ ಶೆಟ್ಟಿ ಉದ್ಘಾಟಿಸಿದರು.
ಮುಖ್ಯ ಅತಿಥಿ ಪ್ರಗತಿಪರ ಕೃಷಿಕ, ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶೇಡಿಕೊಡ್ಲು ವಿಠ್ಠಲ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಸಮಾಜಮುಖಿಯಾಗಿ ಚಿಂತನೆ ಬೆಳೆಯಬೇಕಾದರೆ ರಾಷ್ಟ್ರಿಯ ಸೇವಾ ಯೋಜನೆ ಸಹಕಾರಿ. ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ ಮತ್ತು ಸಹಬಾಳ್ವೆ ಕಲಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಯೋಜನಕಾರಿಯಾಗಲಿ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂದಾರ್ತಿ ದೇವಳದ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಶೆಟ್ಟಿ ಆಶಯ ನುಡಿಗಳನ್ನಾಡಿದರು. ಕಾಲೇಜು ಆಡಳಿತ ಮಂಡಳಿಯ ಸದಸ್ಯ ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ, ಮಂದಾರ್ತಿ ದೇವಳ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಸುಕೇಶ್ ಹೇರ್ಳೆ, ಅನುದಾನಿತ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಉದಯ್ ಕುಮಾರ್ ಶೆಟ್ಟಿ, ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಎನ್ಎಸ್ಎಸ್ ಸ್ವಯಂಸೇವಕ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಸ್ವಾಗತಿಸಿ, ಪೂಜಾ ಕುಂದರ್ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

















