ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅತಿ ಮುಖ್ಯ. ಯಾವುದೇ ಕ್ಷೇತ್ರದಲ್ಲಿ ಉತ್ತಮ ಉದ್ಯೋಗ ಹೆಸರು ಗಳಿಸಿದ್ದರೂ ಎಲ್ಲಕ್ಕಿಂತ ಹೆಚ್ಚಾಗಿ ಜೀವನದಲ್ಲಿ ಒಳ್ಳೆಯ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಬೇಕು. ಆಗ ಜೀವನ ಹೆಚ್ಚು ಸಾರ್ಥಕ್ಯವನ್ನು ಪಡೆಯುತ್ತದೆ ಎಂದು ಶ್ರೀ ಕುಂದೇಶ್ವರ ದೇವಸ್ಥಾನದ ಅಧ್ಯಕ್ಷರಾದ ವಾಸುದೇವ ಯಡಿಯಾಳ್ ಹೇಳಿದರು.
ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಜೀವನ ಮೌಲ್ಯ ಶಿಕ್ಷಣ” ಕುರಿತ ಒಂದು ದಿನದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಜನಸಾಮಾನ್ಯರೊಂದಿಗೆ ಬದುಕಬೇಕು. ಅಲ್ಲದೇ ಭಂಡಾರ್ಕಾರ್ಸ್ ಕಾಲೇಜು ಶೈಕ್ಷಣಿಕವಾಗಿ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವವನ್ನು ರೂಪಿಸುತ್ತಿದೆ. ಹಾಗಾಗಿ ಈ ಸಂಸ್ಥೆ ತನ್ನ ಹೆಸರನ್ನು ಘನತೆಯನ್ನು ಹೆಚ್ಚಿಸಿಕೊಂಡಿದೆ. ಈ ಸಂಸ್ಥೆಯ ವಿದ್ಯಾರ್ಥಿಗಳು ಸಹ ಜೀವನವನ್ನು ರುಪಿಸಿಕೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು. ಎಸ್ ಶೆಣೈ. ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಮಂಜುನಾಥ ಸ್ವಾಗತಿಸಿದರು. ಸುಷ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

















