Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ ಎಫ್‌ಎಸ್‌ಟಿಪಿ ಯೋಜನೆಗೆ ಹೈಕೋರ್ಟ್ ತಡೆ: ಅಧಿಕಾರ ವ್ಯಾಪ್ತಿ ಮೀರಿದ ಆದೇಶ’– ವಕೀಲ ಪವನ್ ಚಂದ್ರ ಶೆಟ್ಟಿ ವಾದ
    ಉಡುಪಿ ಜಿಲ್ಲೆ

    ಸಾಲಿಗ್ರಾಮ ಎಫ್‌ಎಸ್‌ಟಿಪಿ ಯೋಜನೆಗೆ ಹೈಕೋರ್ಟ್ ತಡೆ: ಅಧಿಕಾರ ವ್ಯಾಪ್ತಿ ಮೀರಿದ ಆದೇಶ’– ವಕೀಲ ಪವನ್ ಚಂದ್ರ ಶೆಟ್ಟಿ ವಾದ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಲತ್ಯಾಜ್ಯ ಸಂಸ್ಕರಣಾ ಘಟಕವನ್ನು (ಎಫ್‌ಎಸ್‌ಟಿಪಿ) ಉಳ್ಳೂರು ಗ್ರಾಮದಲ್ಲಿ ಸ್ಥಾಪಿಸಲು ಜಿಲ್ಲಾಡಳಿತ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರ್ಜಿದಾರರ ಪರವಾಗಿ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಪವನ್ ಚಂದ್ರಶೆಟ್ಟಿ, “ಯೋಜನೆಗೆ ಅನುಮೋದನೆ ನೀಡುವಾಗ ಕಾನೂನುಬದ್ಧ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದ್ದು, ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಆದೇಶಿಸಿದ್ದಾರೆ” ಎಂದು ಪ್ರಬಲವಾಗಿ ಪ್ರತಿಪಾದಿಸಿದರು.

    Click Here

    Click Here

    Call us

    Click Here

    ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ ಪ್ರಸಾದ್ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಾಪೀಠವು, ಅರ್ಜಿದಾರರ ವಾದವನ್ನು ಪುರಸ್ಕರಿಸಿ ಕಾಮಗಾರಿ ಹಾಗೂ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.

    ವಕೀಲ ಪವನ್ ಚಂದ್ರ ಶೆಟ್ಟಿ ಮಂಡಿಸಿದ ಪ್ರಮುಖ ವಾದಗಳು:

    ಅಧಿಕಾರ ವ್ಯಾಪ್ತಿ ಹಾಗೂ ನಿಯಮಗಳ ಉಲ್ಲಂಘನೆ (No Delegation of Power):
    ಯೋಜನೆಗಾಗಿ ಜಮೀನಿನ ಮೂಲ ಉದ್ದೇಶವನ್ನು ಬದಲಾಯಿಸಿ ಅನುಮೋದನೆ ನೀಡುವ ಪೂರ್ಣ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಮಾತ್ರ ಇರುತ್ತದೆ. ಆದರೆ, ಜಿಲ್ಲಾಧಿಕಾರಿಗಳ ಪರವಾಗಿ ಯೋಜನಾ ನಿರ್ದೇಶಕರು (ಜಿಲ್ಲಾ ನಗರಾಭಿವೃದ್ಧಿ ಕೋಶ) ಈ ಆದೇಶ ಹೊರಡಿಸಿರುವುದು ಕಾನೂನುಬಾಹಿರ ಹಾಗೂ ನಿಯಮಬಾಹಿರ ಅಧಿಕಾರ ಚಲಾವಣೆ (Delegation of Power) ಎಂದು ನ್ಯಾಯಾಲಯದ ಗಮನಕ್ಕೆ ತಂದರು.

    ತಾಲ್ಲೂಕು ಹಾಗೂ ಪಂಚಾಯಿತಿ ವ್ಯಾಪ್ತಿ ಪ್ರಶ್ನೆ:
    ಸಾಲಿಗ್ರಾಮ ಪಟ್ಟಣ ಪಂಚಾಯಿತಿಯು ಬ್ರಹ್ಮಾವರ ತಾಲ್ಲೂಕಿನ ವ್ಯಾಪ್ತಿಗೆ ಬಂದರೆ, ಪ್ರಸ್ತಾವಿತ ಘಟಕ ನಿರ್ಮಿಸಲು ಉದ್ದೇಶಿಸಿರುವ ಉಳ್ಳೂರು ಗ್ರಾಮವು ಕುಂದಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿದೆ. ಒಂದು ತಾಲ್ಲೂಕಿನ ಸ್ಥಳೀಯ ಸಂಸ್ಥೆಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಮತ್ತೊಂದು ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬಲವಂತವಾಗಿ ಹೇರುವುದು ಅಧಿಕಾರ ವ್ಯಾಪ್ತಿಯ ಸ್ಪಷ್ಟ ಉಲ್ಲಂಘನೆ ಎಂದು ವಾದಿಸಿದರು.

    Click here

    Click here

    Click here

    Call us

    Call us

    ಮೂಲ ಉದ್ದೇಶದ ಬದಲಾವಣೆ ಮತ್ತು ಕೋರ್ಟ್ ಆದೇಶದ ಅಸಡ್ಡೆ:
    ಉಳ್ಳೂರು ಗ್ರಾಮದ ಸರ್ವೆ ನಂಬರ್ 219/2 ರ 2.17 ಎಕರೆ ಜಮೀನನ್ನು 2011ರಲ್ಲಿ ಖರೀದಿಸಿದ್ದು ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕಾಗಿ. ಈ ಹಿಂದೆ ಸ್ಥಳೀಯರ ತೀವ್ರ ಆಕ್ಷೇಪ ಹಾಗೂ ಸಿವಿಲ್ ನ್ಯಾಯಾಲಯದ (O.S. No. 259/2013) ತೀರ್ಪಿನ ಹಿನ್ನೆಲೆಯಲ್ಲಿ ಅಲ್ಲಿ ಘನತ್ಯಾಜ್ಯ ಘಟಕ ಕೈಬಿಡಲಾಗಿತ್ತು. ಈಗ ಅದೇ ಜಾಗದಲ್ಲಿ ನಿಯಮಬಾಹಿರವಾಗಿ ಉದ್ದೇಶ ಬದಲಿಸಿ ಮಲತ್ಯಾಜ್ಯ ಸಂಸ್ಕರಣಾ ಘಟಕ (FSTP) ನಿರ್ಮಿಸಲು ಹೊರಟಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

    ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದ ಆತಂಕ:
    ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಮಾರ್ಗಸೂಚಿಗಳು ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಷರತ್ತುಗಳನ್ನು ಗಾಳಿಗೆ ತೂರಿ, ಸೂಕ್ತ ಬಫರ್ ವಲಯ ಹಾಗೂ ಪರಿಸರ ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ವಾದ ಮಂಡಿಸಿದರು.

    ಈ ಎಲ್ಲಾ ಅಂಶಗಳನ್ನು ಆಲಿಸಿದ ನ್ಯಾಯಮೂರ್ತಿ ಶ್ಯಾಮ ಪ್ರಸಾದ್ ಅವರ ಪೀಠವು, ಜಿಲ್ಲಾಡಳಿತದ ನಡವಳಿಯ ಮುಂದುವರಿದ ಕ್ರಮಗಳಿಗೆ ಮಧ್ಯಂತರ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ

    17/10/2026

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    17/10/2026

    ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ.20ರ ವರೆಗೆ ಅವಕಾಶ

    16/10/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ
    • ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ
    • ಸಾಲಿಗ್ರಾಮ ಎಫ್‌ಎಸ್‌ಟಿಪಿ ಯೋಜನೆಗೆ ಹೈಕೋರ್ಟ್ ತಡೆ: ಅಧಿಕಾರ ವ್ಯಾಪ್ತಿ ಮೀರಿದ ಆದೇಶ’– ವಕೀಲ ಪವನ್ ಚಂದ್ರ ಶೆಟ್ಟಿ ವಾದ
    • ಮೈಸೂರು ದಸರಾ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಸುರೇಶ ಬಿ. ಪೂಜಾರಿಗೆ ಚಿನ್ನದ ಪದಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.