Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ
    ಊರ್ಮನೆ ಸಮಾಚಾರ

    ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಶುಕ್ರವಾರದಂದು ನಡೆಯಿತು.

    Click Here

    Click Here

    Call us

    Click Here

    ಅಂಕಗಳಾಚೆಗೆ ಜ್ಞಾನ, ಪಠ್ಯಕ್ರಮದಾಚೆಗೆ ಗುರಿ, ಶಿಕ್ಷಣದಾಚೆಗೆ ಬದುಕಿನ ಸಾಧನೆ ಎಂಬ ಆಶಯಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕಲಿಕಾ ಸಾಮರ್ಥ್ಯ, ಶಿಸ್ತು, ಭವಿಷ್ಯದ ಗುರಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಶಿಕ್ಷಣದ ಈ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಅವರ ಉನ್ನತ ಶಿಕ್ಷಣ ಮತ್ತು ವೃತ್ತಿಜೀವನಕ್ಕೆ ದಾರಿದೀಪವಾಗುತ್ತವೆ. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಉನ್ನತ ಶಿಕ್ಷಣದ ಪ್ರವೇಶ ಪರೀಕ್ಷೆಗಳಲ್ಲಿಯೂ ಯಶಸ್ಸು ಸಾಧಿಸಲು ಅಗತ್ಯವಾದ ಮಾರ್ಗದರ್ಶನವನ್ನು ನೀಡುತ್ತಿದೆ. ಅಲ್ಲದೇ  ಪಿಯುಸಿ ಪಠ್ಯಕ್ರಮದೊಂದಿಗೆ JEE ,KCET, NDA ಹಾಗೂ NEET ಸೇರಿದಂತೆ ಹಲವಾರು ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ಸವಾಲುಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದು ಪೋಷಕರನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

    ಪಿಯು ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಸಮನ್ವಯವೇ ಕ್ರಿಯೇಟಿವ್‌ ಕಾಲೇಜಿನ ಶೈಕ್ಷಣಿಕ ದೃಷ್ಟಿಕೋನದ ಪ್ರಮುಖ ಅಂಶವಾಗಿದೆ. ಪಿಯುಸಿ ಪಠ್ಯಕ್ರಮದ ಪರಿಕಲ್ಪನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳುವುದರ ಜೊತೆಗೆ, ಅಗತ್ಯವಾದ ಪರಿಕಲ್ಪನಾತ್ಮಕ ಸ್ಪಷ್ಟತೆ, ಸಮಸ್ಯೆ ಪರಿಹರಿಸುವ ಕೌಶಲ್ಯ, ಹಾಗೂ ಪರೀಕ್ಷಾ ತಂತ್ರಗಳನ್ನು ಬೆಳೆಸುವತ್ತ  ವಿಶೇಷ ಗಮನ ಹರಿಸಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕ ಉನ್ನತ ಶಿಕ್ಷಣದ ಆಯ್ಕೆಗಳನ್ನು ಗುರುತಿಸಿಕೊಂಡು, ಗುರಿ ಸಾಧನೆಯತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಇಡುವಂತೆ ಇಲ್ಲಿ  ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು.

    ವೇದಿಕೆಯಲ್ಲಿ ಆಂಗ್ಲ ಭಾಷೆ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಪ್ರಜ್ವಲ್ ನಡೆಸಿಕೊಟ್ಟರು, ಭೋದಕ-ಬೋಧಕೇತರ ಸಿಬ್ಬಂದಿಗಳು ಹಾಗೂ  ಪೋಷಕ ವರ್ಗದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯಮಟ್ಟದ ದಸರಾ ಸಿಎಂ ಕಪ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ

    17/10/2026

    ಮೈಸೂರು ದಸರಾ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಸುರೇಶ ಬಿ. ಪೂಜಾರಿಗೆ ಚಿನ್ನದ ಪದಕ

    17/10/2026

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಜೀವನ ಮೌಲ್ಯ ಶಿಕ್ಷಣʼ ಶಿಬಿರದ ಉದ್ಘಾಟನೆ

    16/10/2026
    Leave A Reply Cancel Reply

    sixteen − 15 =

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯಮಟ್ಟದ ದಸರಾ ಸಿಎಂ ಕಪ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ
    • ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ
    • ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ
    • ಸಾಲಿಗ್ರಾಮ ಎಫ್‌ಎಸ್‌ಟಿಪಿ ಯೋಜನೆಗೆ ಹೈಕೋರ್ಟ್ ತಡೆ: ಅಧಿಕಾರ ವ್ಯಾಪ್ತಿ ಮೀರಿದ ಆದೇಶ’– ವಕೀಲ ಪವನ್ ಚಂದ್ರ ಶೆಟ್ಟಿ ವಾದ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.