Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬೆಳಕಿನ ಹಬ್ಬವಾದ ದೀಪಾವಳಿ ಹಬ್ಬ ಆಚರಣೆಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯನ್ನು ಜಾಗೃತಿಯಿಂದ ಮಾಡುವುದರೊಂದಿಗೆ ಆಚರಣೆ ಮಾಡಬೇಕು. ಇವುಗಳ ಮಾರಾಟಕ್ಕೆ ಪರವಾನಿಗೆ ನೀಡುವಾಗ ಸುರಕ್ಷತಾ ದೃಷ್ಠಿಯಿಂದ ನಿಯಮಾನುಸಾರ ತಪ್ಪದೇ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Click Here

    Call us

    Click Here

    ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದರು.

    ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಪಟಾಕಿ ಮಾರಾಟದ 10*10 ವಿಸ್ತೀರ್ಣದ ಜಿಂಕ್ ಶೀಟ್ ಅಥವಾ ಅಗ್ನಿ ನಿರೋಧಕ ವಸ್ತುಗಳಿಂದ ಮಳಿಗೆಗಳನ್ನು ನಿರ್ಮಿಸಬೇಕು. ಮಳಿಗೆಗಳನ್ನು ಹರಾಜುಗಳ ಮೂಲಕ ಹಂಚಿಕೆ ಮಾಡಬೇಕು. ಈ ಪ್ರದೇಶದಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಚಲನವಲನಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಪಟಾಕಿ ಮಾರಾಟ ಮಳಿಗೆಗಳಿಗೆ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ, ಹಸಿರು ಪಟಾಕಿಗಳ ಮಾರಾಟ, ಸುರಕ್ಷತೆಗಳ ಕುರಿತು ಪರಿಶೀಲನೆ ಮಾಡಬೇಕು. ಸುಡುಮದ್ದುಗಳನ್ನು ಅಧಿಕೃತ ಸಾಗಾಟ ಮಾರಾಟದ ಪರವಾನಿಗೆ ದಾರರಿಂದ ಹೊರತು ಇತರ ಅಕ್ರಮ ಚಿಲ್ಲರೆ ಸುಡುಮದ್ದು ಮಾರಾಟಗಾರರಿಂದ ಖರೀದಿಸುವುದನ್ನು ನಿಷೇಧಿಸಿದೆ. ಈ ಬಗ್ಗೆಯೂ ಸಹ ಎಚ್ಚರ ವಹಿಸಬೇಕು ಎಂದರು.

    ಪಟಾಕಿ ಮಾರಾಟ ಮಳಿಗೆಗಳಲ್ಲಿ ಅಗ್ನಿ ನಂದಕ ಸುಸ್ಥಿತಿಯಲ್ಲಿಡಬೇಕು. ನಿಯಮಾನುಸಾರ ನೀರುಗಳ ಸಂಗ್ರಹಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರವಾನಿಗೆಯ ಅವಧಿ ನಂತರ ಮಳಿಗೆಯಲ್ಲಿ ಉಳಿದ ತ್ಯಾಜ್ಯವನ್ನು ಸುಡುಮದ್ದುಗಳಿಂದ ಬೇರ್ಪಡಿಸಿ ಮಾರಾಟಗಾರರೇ ತ್ಯಾಜ್ಯ ವಿಲೇವಾರಿ ಸಂಗ್ರಹಣಾ ಘಟಕಕ್ಕೆ ನೀಡಬೇಕು ಎಂದರು. 

    Click here

    Click here

    Click here

    Call us

    Call us

    ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ತಹಶೀಲ್ದಾರರ ನೇತೃತ್ವದ ಸಮಿತಿಯು ಖುದ್ದು ಸ್ಥಳ ಪರಿಶೀಲನೆ ನಡೆಸುವುದರೊಂದಿಗೆ, ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ, ಜನನಿಬಿಡ ಪ್ರದೇಶಗಳಲ್ಲಿ, ಸಂಚಾರ ವ್ಯವಸ್ಥೆಗೆ ಅಡಚಣೆಯಾಗುವ ಕಡೆಗಳಲ್ಲಿ, ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದ ಅವರು ಸಾರ್ವಜನಿಕರು ಆರೋಗ್ಯಕ್ಕೆ ಹಾಗೂ ಪರಿಸರ ಮಾಲಿನ್ಯಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

    ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ ಆರ್ ಕೋಡ್ ಇದ್ದು, ಸದ್ರಿ ಚಿಹ್ನೆ ಹೊಂದಿರುವ ಬಗ್ಗೆ ಪರಿಸರ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಹಸಿರು ಪಟಾಕಿಯ ಚಿಹ್ನೆ ಇಲ್ಲದೇ ಇದ್ದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಬೇಕು ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತಾ, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    17/10/2026

    ಸಾಲಿಗ್ರಾಮ ಎಫ್‌ಎಸ್‌ಟಿಪಿ ಯೋಜನೆಗೆ ಹೈಕೋರ್ಟ್ ತಡೆ: ಅಧಿಕಾರ ವ್ಯಾಪ್ತಿ ಮೀರಿದ ಆದೇಶ’– ವಕೀಲ ಪವನ್ ಚಂದ್ರ ಶೆಟ್ಟಿ ವಾದ

    17/10/2026

    ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ.20ರ ವರೆಗೆ ಅವಕಾಶ

    16/10/2026
    Leave A Reply Cancel Reply

    two × four =

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯಮಟ್ಟದ ದಸರಾ ಸಿಎಂ ಕಪ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ
    • ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ
    • ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ
    • ಸಾಲಿಗ್ರಾಮ ಎಫ್‌ಎಸ್‌ಟಿಪಿ ಯೋಜನೆಗೆ ಹೈಕೋರ್ಟ್ ತಡೆ: ಅಧಿಕಾರ ವ್ಯಾಪ್ತಿ ಮೀರಿದ ಆದೇಶ’– ವಕೀಲ ಪವನ್ ಚಂದ್ರ ಶೆಟ್ಟಿ ವಾದ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.