ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ. ಬಿ. ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಶ್ರಮದಾನವನ್ನು ಪ್ರಗತಿಪರ ಕೃಷಿಕರಾದ ಶ್ರೀ ಕೆ. ಶಂಭುಶಂಕರ್ ರಾವ್ ಹೆಗ್ಗುಂಜೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ವಾರ್ಷಿಕ ವಿಶೇಷ ಶಿಬಿರದ ಶಿಬಿರಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್, ಪ್ರಾಧ್ಯಾಪಕ ಹರೀಶ್ ಕಾಂಚನ್ ಹಾಗೂ ಎನ್ಎಸ್ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.
ಎನ್ಎಸ್ಎಸ್ ಸ್ವಯಂಸೇವಕರಾದ ಸನ್ನಿಧಿ ಬಿ.ಎಸ್. ಸ್ವಾಗತಿಸಿ, ಮಣಿಕಂಠ ಅಥಿತಿಗಳನ್ನು ಪರಿಚಯಿಸಿ, ಕೃತಿ ಕಾರ್ಯಕ್ರಮ ನಿರೂಪಿಸಿದರು.












