Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್‌ಪಾಲ್ ಸುವರ್ಣ
    ಉಡುಪಿ ಜಿಲ್ಲೆ

    ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್‌ಪಾಲ್ ಸುವರ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಕುಂದು ಕೊರತೆಯ ಅಹವಾಲು ಹಾಗೂ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರಗಳನ್ನು ಕೈಗೊಂಡಲ್ಲಿ ಮಾತ್ರ ಸರಕಾರದ ಇಂತಹ ಕಾರ್ಯಕ್ರಮಗಳು ಯಶಸ್ಸು ಸಾಧಿಸುತ್ತವೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಪ್ರವೃತ್ತರಾಗೋಣ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

    Click Here

    Click Here

    Call us

    Click Here

    ಅವರು ಶನಿವಾರ ಉಪ್ಪೂರು ಗ್ರಾಮದ ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ನ ಸೌಹಾರ್ದ ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಬ್ರಹ್ಮಾವರ ಇವರ ಸಹಯೋಗದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಜ್ಯ ಸರ್ಕಾರದ ನೂತನ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಯ ಮೂಲಕ ಜನರ ಬಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಅವರ ಸಮಸ್ಯೆಗಳಿಗೆ ಅವರಿರುವಲ್ಲಿಯೇ ಪರಿಹಾರ ನೀಡುವ ಕಾರ್ಯಕ್ರಮ ಇದಾಗಿದ್ದು, ಆಡಳಿತ ಯಂತ್ರಗಳಿಗೆ ಚುರುಕು ನೀಡಿ, ಜನರ ಸಮಸ್ಯೆಗಳಿಗೆ ತುರ್ತು ಸ್ಪಂದಿಸಿ, ಅವರುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರತೀ ಶನಿವಾರಗಳಂದು ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಿಲ್ಲೆಯಾದ್ಯಂತ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

    ಉಡುಪಿ ಬುದ್ದಿವಂತರ ಜಿಲ್ಲೆಯಾಗಿದ್ದು, ಜನರು ತಮಗೆ ಸಮಸ್ಯೆಗಳು ಬಂದಾಗ ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬಳಿಗೆ ತೆರಳಿ ತಮ್ಮ ಕೆಲಸಗಳನ್ನು ಮಾಡಿಸಿಕೊಂಡು ಬರುತ್ತಿದ್ದಾರೆ. ಜಿಲ್ಲೆಯು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಇರಲು ಇದೂ ಒಂದು ಕಾರಣ ಎಂದ ಅವರು, ಪ್ರಸ್ತುತ ವಿವಿಧ ಇಲಾಖೆಗಳಲ್ಲಿರುವ ಸಿಬ್ಬಂದಿಗಳ ಕೊರತೆ ನೀಗಿಸುವುದರೊಂದಿಗೆ ಅವುಗಳನ್ನು ಭರ್ತಿ ಮಾಡುವ ಮೂಲಕ ಜನರ ಸೇವೆಗೆ ಅನುಕೂಲ ಮಾಡಿಕೊಡಬೇಕು ಎಂದರು.

    ಸರಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಸರಕಾರವು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸುತ್ತಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಗಳಲ್ಲಿ ನಡೆಯುವ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಹೆಚ್ಚಿನ ಭಾಗವಹಿಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.

    Click here

    Click here

    Click here

    Call us

    Call us

    ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಮಾತನಾಡಿ, ಪ್ರಜಾಸೇವೆ ಎನ್ನುವುದು ಜನರ ಸೇವೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಒಂದು ಉತ್ತಮ ಅವಕಾಶವಾಗಿದೆ. ಸಾರ್ವಜನಿಕರ ಎಲ್ಲಾ ರೀತಿಯ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ಸಿಗುವ ಈ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. 

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರಿಕರ ಸೇವೆಗಳನ್ನು ನಿಗಧಿತ ಕಾಲಾವಧಿಯಲ್ಲಿ ಅವರ ಮನೆ ಬಾಗಿಲಿಗೆ ತಲುಪಿಸಲು ಹಾಗೂ ಅವರ ಅಹವಾಲುಗಳಿಗೆ ಗುಣಾತ್ಮಕ ಸ್ಪಂದನೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರವು ಸೆಪ್ಟಂಬರ್ 5 ರಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರತೀ ಶನಿವಾರ ರಾಜ್ಯದಾದ್ಯಂತ ನಡೆಸುತ್ತಿದ್ದು, ತಿಂಗಳ ಒಂದನೇ ಮತ್ತು ಮೂರನೇ ಶನಿವಾರದಂದು ಜಿಲ್ಲಾ ಹಂತದ ಪ್ರಜಾಸೇವಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಎರಡು ಮತ್ತು ನಾಲ್ಕನೇ ಶನಿವಾರದಂದು ತಾಲೂಕು ಮಟ್ಟದ ಸಭೆಯನ್ನು ಹೋಬಳಿ ಮಟ್ಟದಲ್ಲಿ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ಸಭೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.

    ಸೇವೆಯೇ ನಮ್ಮ ಧರ್ಮ. ಸರಕಾರಿ ಕೆಲಸಕ್ಕೆ ಸೇರಿರುವುದು ಜನಸಾಮಾನ್ಯರ ಸೇವೆಗಳನ್ನು ಪೂರೈಸಲು ಎಂಬುದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸೇವೆ ಸಲ್ಲಿಸುವುದರೊಂದಿಗೆ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಲ್ಲಿಕೆಯಾಗುವ ಅಹವಾಲುಗಳ ಅರ್ಜಿಗಳನ್ನು ಆದ್ಯತೆಯ ಮೇಲೆ ಇತ್ಯರ್ಥಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.  

    ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಶೇ.25 ರ ಅನುದಾನದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 43 ಅಹವಾಲುಗಳು ಸಲ್ಲಿಕೆಯಾಗಿದ್ದವು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಉಪ್ಪೂರು ಗ್ರಾಮ ಪಂಚಾಯತ್‌ನ ಆಡಳಿತಾಧಿಕಾರಿ ಸುಧೀರ್ ಕುಮಾರ್ ಕೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಸಿದ್ದೇಶ್ ಸ್ವಾಗತಿಸಿ, ಬ್ರಹ್ಮಾವರ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ

    19/10/2026

    ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ

    17/10/2026

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    17/10/2026
    Leave A Reply Cancel Reply

    3 × 1 =

    Call us

    Click Here

    Call us

    Call us

    Call us
    Highest Viewed Recently
    • ಅಮೃತೇಶ್ವರೀ ದೇಗುಲದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ದುರ್ಗಾಹೋಮ
    • ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ
    • ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್‌ಪಾಲ್ ಸುವರ್ಣ
    • ಬರಗೂರು ರಾಮಚಂದ್ರಪ್ಪ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ
    • ಆಳ್ವಾಸ್ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ಕುಂಭಾಶಿ ವಿಶ್ವಕರ್ಮ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.