ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಂಸ್ಕಾರವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಿದರೆ, ಶಿಸ್ತು ಆ ವ್ಯಕ್ತಿತ್ವಕ್ಕೆ ಘನತೆಯನ್ನು ತಂದುಕೊಡುತ್ತದೆ. ಉತ್ತಮ ಸಂಸ್ಕಾರ ಮತ್ತು ಶಿಸ್ತಿನ ಜೀವನವು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಲು ಸಹಕಾರಿಯಾಗಿದೆ”ಎಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ರವಿಚಂದ್ರ ಬಾಯರಿ ಹೇಳಿದರು.
ಅವರು ಮಂದಾರ್ತಿಯಲ್ಲಿ ನಡೆಯುತ್ತಿರುವ ಡಾl ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ” ಸಂಸ್ಕಾರದ ಬೆಳಕಿನಲ್ಲಿ ಶಿಸ್ತಿನ ಪಯಣ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.
ಇದೇ ಸಂದರ್ಭ ಅವರು ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸುವಲ್ಲಿ ಕುಟುಂಬ, ಶಾಲೆ ಹಾಗೂ ಸಮಾಜದ ಪಾತ್ರ ಮಹತ್ವದ್ದಾಗಿದೆ. ಸಂಸ್ಕಾರವೇ ಶಿಸ್ತಿನ ಬದುಕಿಗೆ ಭದ್ರಬುನಾದಿ ಎಂದರು.
ಮಂದಾರ್ತಿ ಲಕ್ಷ್ಮೀ ಗ್ರೂಪ್ ನ ದೇವದಾಸ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದುರ್ಗಾಪರಮೇಶ್ವರಿ ದೇವಳದ ಪದವಿ-ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಹಾಗೂ ಎಸ್.ವಿ. ಕಾಂಪ್ಲೆಕ್ಸ್ ಮಾಲಕ ಶಿರೂರು ಹಂದಿಗದ್ದೆಮನೆ ಶೇಖರ್ ಶೆಟ್ಟಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಶಿಬಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂಸೇವಕರಾದ ದೀಪಿಕಾ ಅತಿಥಿಗಳನ್ನು ಪರಿಚಯಿಸಿ, ಅಮೂಲ್ಯ ಸ್ವಾಗತಿಸಿ, ನಿಶಾ ವಂದಿಸಿ, ನಿರೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು.

















