ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ತಾಲೂಕಿನ ಪಾರಂಪಳ್ಳಿ ಗ್ರಾಮದ ಮಸೀದಿ ಬಳಿಯ ಬೀಚ್ ಹತ್ತಿರದ ಪತ್ನಿ ಮನೆಯಲ್ಲಿ ವಾಸವಿದ್ದ ಮೊಹಮ್ಮದ್ ಇಕ್ಬಾಲ್ (47) ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದು ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೋಟ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೋಟತಟ್ಟು ಗ್ರಾಮದ ನಿವಾಸಿ ಆಟೋ ಹಾಗೂ ಲ್ಯಾಂಡ್ ಲಿಂಕ್ ಕೆಲಸ ನಿರ್ವಹಿಸುತ್ತಿದ್ದ ಮೊಹಮ್ಮದ್ ಇಕ್ಸಾಲ್ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು. ಅ.19ರಂದು ಬೆಳಗಿನ ಜಾವ ಇಟ್ಬಾಲ್ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗಿನ ಜಾವ ಅವರು ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಇಕ್ಬಾಲ್ ಮತ್ತು ಪತ್ನಿ ಸಫ್ರಾಭಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿರುವುದಾಗಿ ಇನ್ಸಾಲ್ ಮನೆಗೆ ಬಂದಾಗ ಹೇಳಿಕೊಳ್ಳುತ್ತಿದ್ದರು. ಅದೇ ರೀತಿ ಅವರ ಪತ್ನಿ ಹಾಗೂ ಪತ್ನಿಯ ಮನೆಯವರು ಹಿಂದಿನಂತೆ ಗಲಾಟೆ ಮಾಡಿರುವ ಸಾಧ್ಯತೆಯಿದ್ದು, ಅವರ ಸಾವಿನಲ್ಲಿ ಸಂಶಯವಿದೆ ಎಂದು ಇಕ್ಸಾಲ್ ಅವರ ಸಹೋದರಿ ಬಲ್ಕಿಸ್ ಅವರು ಕೋಟ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆ ಆಧಾರದಲ್ಲಿ ಹಾಗೂ ಪ್ರಾಥಮಿಕ ಮಾಹಿತಿ ಆಧಾರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

















