Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಶಮಂತ್ ಜೆ. ಹಾಗೂ ಮಾನ್ಯ ಪೂಜಾರಿಗೆ ಚಾಂಪಿಯನ್ ಪಟ್ಟ
    ಊರ್ಮನೆ ಸಮಾಚಾರ

    ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಶಮಂತ್ ಜೆ. ಹಾಗೂ ಮಾನ್ಯ ಪೂಜಾರಿಗೆ ಚಾಂಪಿಯನ್ ಪಟ್ಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೋಸ್ಟಾ ಬ್ಯಾಡ್ಮಿಂಟನ್ ಸೆಂಟರ್, ಕೋಸ್ಟಾ ಸ್ಪೋರ್ಟ್ಸ್ ಫೌಂಡೇಷನ್ ಹಾಗೂ ಸುಜ್ಞಾನ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ 17 ವರ್ಷ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಬಾಲಕರ ವಿಭಾಗದಲ್ಲಿ ಶಮಂತ್ ಜೆ. ಹಾಗೂ ಬಾಲಕಿಯರ ವಿಭಾಗದಲ್ಲಿ ಮಾನ್ಯ ಪೂಜಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

    Click Here

    Click Here

    Call us

    Click Here

    ಬಾಲಕರ ವಿಭಾಗದ ಫೈನಲ್ ಪಂದ್ಯದಲ್ಲಿ ಶಮಂತ್ ಜೆ. ಅವರು ಶಯನ್ ಶೆಟ್ಟಿ ವಿರುದ್ಧ 18-16, 15-13 ಅಂತರದ ನೇರ ಗೇಮ್‌ಗಳ ಜಯ ದಾಖಲಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಚಾಂಪಿಯನ್ ಶಮಂತ್ ಅವರಿಗೆ ₹5,000 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ಪ್ರದಾನ ಮಾಡಲಾಯಿತು. ರನ್ನರ್‌ಅಪ್ ಸ್ಥಾನ ಪಡೆದ ಶಯನ್ ಶೆಟ್ಟಿ ₹3,000 ನಗದು ಬಹುಮಾನ ಹಾಗೂ ಟ್ರೋಫಿ ಪಡೆದರು.

    ಬಾಲಕರ ವಿಭಾಗದ ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಗಂಗೊಳ್ಳಿಯ ಆರ್ಯನ್ ಅವರು ಕುಂದಾಪುರದ ಮೆಲ್ರಾನ್ ಕೋಥಾ ಅವರನ್ನು ಮಣಿಸಿ ಮೂರನೇ ಸ್ಥಾನ ಗಳಿಸಿದರು. ಅವರಿಗೆ ₹1,000 ನಗದು ಬಹುಮಾನ ಹಾಗೂ ಟ್ರೋಫಿ ನೀಡಿ ಗೌರವಿಸಲಾಯಿತು.

    ಬಾಲಕಿಯರ ವಿಭಾಗದ ಫೈನಲ್ ಪಂದ್ಯದಲ್ಲಿ ಮಾನ್ಯ ಪೂಜಾರಿ ಅವರು ಅನುಭವಿ ಆಟಗಾರ್ತಿ ಸಿರಿ ಎಸ್. ಅವರನ್ನು 15-10, 15-13 ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದರು. ಪ್ರಶಸ್ತಿ ವಿಜೇತೆ ಮಾನ್ಯ ಪೂಜಾರಿ ₹5,000 ನಗದು ಬಹುಮಾನ ಹಾಗೂ ಟ್ರೋಫಿ ಪಡೆದರೆ, ರನ್ನರ್‌ಅಪ್ ಸಿರಿ ಎಸ್. ₹3,000 ನಗದು ಬಹುಮಾನ ಹಾಗೂ ಟ್ರೋಫಿಗೆ ಭಾಜನರಾದರು. ಈ ವಿಭಾಗದಲ್ಲಿ ವಿಲ್ಷಾ ಅಲ್ಮೇಡಾ ಮೂರನೇ ಸ್ಥಾನ ಪಡೆದು ₹1,000 ನಗದು ಬಹುಮಾನ ಹಾಗೂ ಟ್ರೋಫಿ ತಮ್ಮದಾಗಿಸಿಕೊಂಡರು.

    ಕಾರ್ಯಕ್ರಮದಲ್ಲಿ ಉದ್ಯಮಿ ವಿಲ್ಸನ್ ಅಲ್ಮೇಡಾ ಅವರು ವಿಜೇತ ಆಟಗಾರರಿಗೆ ಬಹುಮಾನ ವಿತರಿಸಿದರು. ಕೋಸ್ಟಾ ಬ್ಯಾಡ್ಮಿಂಟನ್ ಸೆಂಟರ್‌ನ ಪ್ರಥಮ್ ಶ್ರೀಯಾನ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಾರದೋತ್ಸವದ ಮೂಲಕ ಶೈಕ್ಷಣಿಕ ಸೇವೆ ಶ್ಲಾಘನೀಯ – ಎಸ್. ಮಯ್ಯ

    22/10/2026

    ಶಂಕರನಾರಾಯಣ: ಬೈಕ್‌ ಡಿಕ್ಕಿಯಾಗಿ ಪಾದಚಾರಿ ಸಾವು

    22/10/2026

    ಪಾರಂಪಳ್ಳಿಯ ಪತ್ನಿ ಮನೆಯಲ್ಲಿ ಪತಿ ಸಾವು – ಮನೆಯವರಿಂದ ಸಂಶಯ ವ್ಯಕ್ತಪಡಿಸಿ ದೂರು

    20/10/2026
    Leave A Reply Cancel Reply

    12 + 12 =

    Call us

    Click Here

    Call us

    Call us

    Call us
    Highest Viewed Recently
    • ಶಾರದೋತ್ಸವದ ಮೂಲಕ ಶೈಕ್ಷಣಿಕ ಸೇವೆ ಶ್ಲಾಘನೀಯ – ಎಸ್. ಮಯ್ಯ
    • ಶಂಕರನಾರಾಯಣ: ಬೈಕ್‌ ಡಿಕ್ಕಿಯಾಗಿ ಪಾದಚಾರಿ ಸಾವು
    • ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಶಮಂತ್ ಜೆ. ಹಾಗೂ ಮಾನ್ಯ ಪೂಜಾರಿಗೆ ಚಾಂಪಿಯನ್ ಪಟ್ಟ
    • ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್
    • ಪಾರಂಪಳ್ಳಿಯ ಪತ್ನಿ ಮನೆಯಲ್ಲಿ ಪತಿ ಸಾವು – ಮನೆಯವರಿಂದ ಸಂಶಯ ವ್ಯಕ್ತಪಡಿಸಿ ದೂರು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.