ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಗುರುವಾರ ರೋಟರಾಕ್ಟ್ ಕ್ಲಬ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿಯ ಜಿಲ್ಲಾ ಸಲಹೆಗಾರರಾದ ಅಭಿನಂದನ್ ಎ. ಶೆಟ್ಟಿ ಅವರು ಕ್ಲಬ್ ಅನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ರೋಟರಾಕ್ಟ್ ಕ್ಲಬ್ನ ಮಹತ್ವ, ಉದ್ದೇಶ ಹಾಗೂ ಸಮಾಜಮುಖಿ ಚಟುವಟಿಕೆಗಳ ಕುರಿತು ಅಮೂಲ್ಯ ಸಂದೇಶ ನೀಡಿದರು.
ಕೋಟೇಶ್ವರ ರೋಟರಿ ಕ್ಲಬ್ನ ಅಧ್ಯಕ್ಷರಾದ ಅಕ್ಷತಾ ಗಿರೀಶ್ ಐತಾಳ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಕೋಟೇಶ್ವರ ರೋಟರಿ ಕ್ಲಬ್ನ ಕಾರ್ಯದರ್ಶಿ ಅರುಣ್ ದೇವಾಡಿಗ, ವಿಜಯ ನಾಯಕ್, ಗಣೇಶ್ ಶೆಟ್ಟಿ ಮೊಳಹಳ್ಳಿ, ಸುಧಾಕರ ಶೆಟ್ಟಿ ತೆಕ್ಕಟ್ಟೆ, ಕಾಲೇಜಿನ ರೋಟರಾಕ್ಟ್ ಕ್ಲಬ್ನ ಸಂಯೋಜಕಿ ಸುನಿತಾ ಹಾಗೂ ವಿದ್ಯಾರ್ಥಿ ಸಂಯೋಜಕಿ, ತೃತೀಯ ಬಿ.ಬಿ.ಎ. ವಿದ್ಯಾರ್ಥಿನಿ ಸುಹಾನಿ ಬಿ. ನಾಯಕ್ ಉಪಸ್ಥಿತರಿದ್ದರು.
ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಸ್ಮೃತಿ ಅವರು ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ವರ್ಷದ ಬಿ.ಬಿ.ಎ. ವಿದ್ಯಾರ್ಥಿನಿ ಸುಹಾ ಅವರು ವಂದನಾರ್ಪಣೆ ನೆರವೇರಿಸಿದರು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ, ಸಮಾಜ ಸೇವಾ ಮನೋಭಾವ ಮೂಡಿಸುವ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವದ್ದಾಗಿತ್ತು.

















