ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಬೈಂದೂರಿನ ಜೆಎನ್ಆರ್ ಕಲಾಮಂದಿರದಲ್ಲಿ ಅದ್ಧೂರಿಯಾಗಿ ಜರುಗಿತು.


ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಒಕ್ಕೂಟವನ್ನು ಉದ್ಘಾಟಿಸಿ, ಸಮುದಾಯ ಒಗ್ಗಟ್ಟಿನ ಮಹತ್ವವನ್ನು ಒತ್ತಿ ಹೇಳಿದರು. ಯುವ ಪೀಳಿಗೆಯನ್ನು ಅಭಿವೃದ್ಧಿ ಮತ್ತು ಕಲ್ಯಾಣದತ್ತ ಕೊಂಡೊಯ್ಯಲು ವೈಚಾರಿಕ ಬದಲಾವಣೆ ಅಗತ್ಯ ಎಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಾಡೋಜ ಡಾ. ಕೂಡ್ಲು ಕೃಷ್ಣಪ್ರಸಾದ್, ವೈದ್ಯಕೀಯ ನಿರ್ದೇಶಕರು, ಪ್ರಸಾದ್ ನೇತ್ರಾಲಯ ಮಾತನಾಡಿ, ಕೋಟೆಗಾರ ಎಂದರೆ ಸತ್ಯ, ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಇನ್ನೊಂದು ಹೆಸರು ಎಂದು ಅವರು ಬಣ್ಣಿಸಿದರು. ಯುವಕರು ಸಮುದಾಯದ ಸಂಸ್ಕೃತಿ, ಸಂಪ್ರದಾಯಗಳನ್ನು ಅರಿತು ಸಮಾಜದ ಉನ್ನತಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.

ನೂತನ ಅಧ್ಯಕ್ಷ ಕೊತ್ತಾಲ್ ಪದ್ಮನಾಭ ಶೇರುಗಾರ್ ಗಂಗೊಳ್ಳಿ ಅವರು ಸ್ವೀಕಾರ ಭಾಷಣದಲ್ಲಿ, ಜನರ ಅಗತ್ಯಗಳಿಗೆ ಸ್ಪಂದಿಸುವ ಕಾರ್ಯತಂತ್ರದ ಯೋಜನೆಗಳನ್ನು ತಂಡವಾಗಿ ರೂಪಿಸುವುದಾಗಿ ತಿಳಿಸಿದರು.

ಕಾರ್ಯಾಧ್ಯಕ್ಷ ಶ್ರೀನಿವಾಸ್ ಶೇರೇಗಾರ್ ಹೆಬ್ರಿ ಸ್ವಾಗತಿಸಿದರು. ಡಾ. ರಾಜೇಂದ್ರ ಕೆ. ಕೋಟೆಗಾರ ರಾಮಕ್ಷತ್ರಿಯ ಸಮುದಾಯದ ಇತಿಹಾಸ ಮತ್ತು ಪರಂಪರೆ ಬಗ್ಗೆ ವಿವರಿಸಿದರು.

ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ:
ಪಿ. ಶ್ರೀಧರ್, ಡಿಎಫ್ಒ ಗೋಡಂಬಿ ಅಭಿವೃದ್ಧಿ ಮಂಡಳಿ, ಕೆ. ಶ್ರೀಕಾಂತ್, ಎಸಿಪಿ ಮಂಗಳೂರು, ಸತೀಶ್ ಬಟವಾಡಿ, ಸಹಾಯಕ ಕಮಿಷನರ್ ವಾಣಿಜ್ಯ ತೆರಿಗೆ, ಮಂಜುಳಾ ಜೈಕರ್ ಸೇರಿದಂತೆ ಹಲವರನ್ನು ಗೌರವಿಸಲಾಯಿತು. SSLC, PUC ಮತ್ತು ವೃತ್ತಿಪರ ಕೋರ್ಸ್ನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೋಟೆಗಾರ ರಾಮಕ್ಷತ್ರಿಯ ಸಮಾಜದ ಮುಖಂಡರಾದ ಸುರೇಶ ಬಟ್ವಾಡಿ, ಸದಾಶಿವ ಡಿ, ಗಣಪತಿ ಹೋಬಳಿದಾರ್, ಗಣಪತಿ ಹೋಬಳಿದಾರ್, ಮಂಜುನಾಥ್ ಎನ್. ರಾಮಕ್ಷತ್ರಿಯ ಮತ್ತು ಕೋಟೆಗಾರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಡಾ. ಬಾಲಕೃಷ್ಣ ಎಸ್. ಮದ್ದೋಡಿ ವಂದನಾರ್ಪಣೆ ಮಾಡಿದರು. ಒಕ್ಕೂಟದ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ಶಿಕ್ಷಕರಾದ ರಾಘವೇಂದ್ರ ದಡ್ಡು, ಭಾಸ್ಕರ ಬಾಡ ನಿರೂಪಣೆ ಮಾಡಿದರು. ಉಡುಪಿ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ಕಲಾವಿದರಿಂದ ಸಾಂಸ್ಕೃತಿಕ ಸಂಗೀತ-ನೃತ್ಯ ಕಾರ್ಯಕ್ರಮ ನಡೆಯಿತು.

















