Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 21 ವಿದ್ಯಾರ್ಥಿಗಳು ಉತ್ತೀರ್ಣ
    alvas nudisiri

    ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 21 ವಿದ್ಯಾರ್ಥಿಗಳು ಉತ್ತೀರ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಸೆಪ್ಟೆಂಬರ್ 2026ರಲ್ಲಿ ನಡೆದ ಚಾರ್ಟರ್ಡ್ ಅಕೌಂಟೆನ್ಸಿ (ಸಿಎ) ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ  ವೃತ್ತಿಪರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ.  

    Click Here

    Click Here

    Call us

    Click Here

    ರಕ್ಷಾ ರಾಮಚಂದ್ರ ನಾಯ್ಕ್ ಎರಡೂ ಗ್ರೂಪ್‌ಗಳಲ್ಲಿ ಮೊದಲ ಪ್ರಯತ್ನದಲ್ಲೇ 435 ಅಂಕಗಳೊಂದಿಗೆ ಉತ್ತೀರ್ಣಳಾಗಿ, ರಾಷ್ಟ್ರೀಯ ಮಟ್ಟದಲ್ಲಿ 49ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.  ಒಟ್ಟು ಸಿಎ ಇಂಟರ್‌ಮಿಡಿಯೇಟ್ ಪರೀಕ್ಷೆಯಲ್ಲಿ ಒಟ್ಟು 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

    ಸಿಎ ಇಂಟರ್‌ಮೀಡಿಯೇಟ್ ಗ್ರೂಪ್-1 ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದ ಉತ್ತೀರ್ಣತಾ ಪ್ರಮಾಣ ಶೇ.23.14ರಷ್ಟಿದ್ದರೆ, ಆಳ್ವಾಸ್ ಪದವಿ ಕಾಲೇಜಿನ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 54.54ರ ಫಲಿತಾಂಶ ದಾಖಲಿಸಿದ್ದಾರೆ.

    ಗ್ರೂಪ್-2ರಲ್ಲಿ ರಾಷ್ಟ್ರೀಯ ಉತ್ತೀರ್ಣತಾ ಪ್ರಮಾಣ ಶೇ.18.92ರಷ್ಟಿದ್ದರೆ, ಕಾಲೇಜಿನ ಒಂಬತ್ತು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.31.03ರ ಫಲಿತಾಂಶ ಸಾಧಿಸಿದ್ದಾರೆ. ಎರಡೂ ಗ್ರೂಪ್‌ಗಳ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದ ಉತ್ತೀರ್ಣತಾ ಪ್ರಮಾಣ ಶೇ.13.21ರಷ್ಟಿದ್ದರೆ, ಆಳ್ವಾಸ್‌ನ ಆರು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.23.08ರ ಫಲಿತಾಂಶ ದಾಖಲಿಸಿದ್ದಾರೆ.

    ಎರಡೂ ಗ್ರೂಪ್‌ಗಳಲ್ಲಿ ಗಮನಾರ್ಹ ಸಾಧನೆ:
    ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯ ಗ್ರೂಪ್-1 ಮತ್ತು ಗ್ರೂಪ್-2 ಎರಡರಲ್ಲೂ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದ ವಿದ್ಯಾರ್ಥಿಗಳ ಪೈಕಿ ರಕ್ಷಾ ರಾಮಚಂದ್ರ ನಾಯ್ಕ್ (435), ಅವನಿ ಉಮೇಶ್ ರಾವ್ (415), ಫಾತಿಮಾ ಅಸ್ನಾ (388), ಅಂಕಿತಾ ರಾವ್ (372), ಜೈಶ್ನವ್ ಜಿ. (318) ಹಾಗೂ ಪ್ರಜ್ವಲ್ ಕೆ. (307) ಗಮನಾರ್ಹ ಸಾಧನೆ ಮಾಡಿದ್ದಾರೆ.

    ಗ್ರೂಪ್-2ರಲ್ಲಿ ಪ್ರಸಿದ್ಧ್ ಎಂ. ಪೂಜಾರಿ (172), ಸಾಕ್ಷಿ ಆರ್. ಪೈ (170) ಹಾಗೂ ಸುಮುಖ್ ವೇಲಂಕರ್ (162) ಉತ್ತಮ ಅಂಕಗಳೊAದಿಗೆ ಉತ್ತೀರ್ಣರಾಗಿದ್ದಾರೆ.

    Click here

    Click here

    Click here

    Call us

    Call us

    ಗ್ರೂಪ್-1ರಲ್ಲಿ ಪ್ರತೀಶ್ ಆಂಟೋನಿ ಡಿಸೋಜಾ (184), ಸ್ವಾತಿ (183), ಅಪರ್ಣಾ ಸುಧಿ (164), ಭಟ್ ಅಮಿಷಾ (163), ಹರ್ಷಿತಾ ಪೂಜಾರಿ (163), ತೇಜಸ್ವಿನಿ ಕೆ.ಎಸ್. (163), ಜೆ. ಬಸವರಾಜ್ (160), ಪ್ರಜ್ಞಾ ಎನ್. (159), ಸಹನಾ ಕುಮಾರಿ (151), ಮಿಜ್ಬಾ ಶೇಖ್ (150), ನಿಶಾ ಯು. ಶೆಟ್ಟಿ (150) ಹಾಗೂ ಚೈತನ್ಯ ಶ್ರೀರಂಗ (150) ಉತ್ತೀರ್ಣರಾಗಿದ್ದಾರೆ.

    ಆಳ್ವಾಸ್‌ನ ಶೈಕ್ಷಣಿಕ ಬೆಂಬಲ ಸಾಧನೆಗೆ ಪೂರಕ: ರಕ್ಷಾ
    ಆಳ್ವಾಸ್ ಪದವಿ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ವರ್ಷದ ಬಿಕಾಂನೊಂದಿಗೆ ಸಿಎ ವ್ಯಾಸಂಗ ಮಾಡುತ್ತಿರುವ ರಕ್ಷಾ ರಾಮಚಂದ್ರ ನಾಯ್ಕ ಸಿಎ ಇಂಟರ್‌ಮಿಡಿಯೇಟ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 49ನೇ ರ‍್ಯಾಂಕ್‌ಗಳಿಸಿ ಸಾಧನೆ ಮೆರೆದಿದ್ದಾರೆ.

    ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಆರು ಅಣಕು ಪರೀಕ್ಷೆಗಳು (ಮಾಕ್ ಟೆಸ್ಟ್ಗಳು) ಹಾಗೂ ಅದಕ್ಕೂ ಮುನ್ನ ನಡೆಸಿದ್ದ ಸರಣಿ ಪರೀಕ್ಷೆಗಳು ಸಿಎ ಪರೀಕ್ಷೆಯ ಸಿದ್ಧತೆಯಲ್ಲಿ ಮಹತ್ವದ ಪಾತ್ರ ವಹಿಸಿವೆ. ಕಳೆದ ಮೂರು ತಿಂಗಳುಗಳಿಂದ ಪ್ರತಿದಿನ 10ರಿಂದ 12 ಗಂಟೆಗಳ ಕಾಲ ನಿರಂತರ ಅಧ್ಯಯನ ನಡೆಸಿದ್ದು, ಈ ಪರಿಶ್ರಮದ ಜೊತೆಗೆ ಆಳ್ವಾಸ್‌ನಲ್ಲಿ ದೊರೆತ ಶೈಕ್ಷಣಿಕ ಬೆಂಬಲ ಮತ್ತು ಪರೀಕ್ಷಾ ಸಿದ್ಧತೆಗೆ ಪೂರಕವಾದ ವ್ಯವಸ್ಥೆಗಳು ಉತ್ತಮ ಫಲಿತಾಂಶಗಳಿಸಲು ಸಹಕಾರಿಯಾಗಿದೆ.  ಮುಂದಿನ ಸಿಎ ಅಂತಿಮ ಪರೀಕ್ಷೆಯಲ್ಲಿಯೂ ಉತ್ತಮ ರ‍್ಯಾಂಕ್‌ನೊಂದಿಗೆ ಉತ್ತೀರ್ಣರಾಗುವ ಹಂಬಲವನ್ನು ರಕ್ಷಾ  ವ್ಯಕ್ತಪಡಿಸಿದ್ದಾರೆ.

    ವೃತ್ತಿಪರ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುವಂತೆ ಆಳ್ವಾಸ್ ಶಿಕ್ಷಣ ಸಂಸ್ಥೆ ಒದಗಿಸುತ್ತಿರುವ ನಿರಂತರ ಮಾರ್ಗದರ್ಶನ, ಪರೀಕ್ಷಾ ಸಿದ್ಧತೆಯ ವ್ಯವಸ್ಥೆ ಮತ್ತು ವಿದ್ಯಾರ್ಥಿಕೇಂದ್ರಿತ ಶೈಕ್ಷಣಿಕ ಬೆಂಬಲವು ಈ ಫಲಿತಾಂಶದಲ್ಲಿ ಪ್ರತಿಫಲಿತವಾಗಿದೆ: ಡಾ ಎಮ್ ಮೋಹನ ಆಳ್ವ

    ವಿದ್ಯಾರ್ಥಿಗಳ ಈ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿ ಸಮಿತ್ ಶೆಟ್ಟಿ ಕುಸ್ತಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ

    22/10/2026

    ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್

    20/10/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸರಸ್ವತಿ ಹಾಗೂ ಶಾರದಾ ಪೂಜೆ

    20/10/2026
    Leave A Reply Cancel Reply

    sixteen − nine =

    Call us

    Click Here

    Call us

    Call us

    Call us
    Highest Viewed Recently
    • ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಸಂಪನ್ನ
    • ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 21 ವಿದ್ಯಾರ್ಥಿಗಳು ಉತ್ತೀರ್ಣ
    • ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ ಉದ್ಘಾಟನೆ
    • ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ: ಶ್ರೀ ರಾಘವೇಶ್ವರ
    • ಐಎಂಜೆಐಎಸ್‌ಸಿಯಲ್ಲಿ ರೋಟರಾಕ್ಟ್ ಕ್ಲಬ್ ಉದ್ಘಾಟನೆ       

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.