Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ – ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ – ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೊಂಕಣ ರೈಲ್ವೆ ನಿಗಮದಲ್ಲಿ ಅನುದಾನದ ಕೊರತೆಯಿದೆ. ಇದರೊಂದಿಗೆ ಆದಾಯವೂ ಇಲ್ಲದಿರುವುದರಿಂದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯವಾಗಿದೆ. ಆದ್ದರಿಂದ ರಾಜ್ಯ ಕೇಂದ್ರ ಸರಕಾರಗಳಿಂದ ನಿಲ್ದಾಣದ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    Click Here

    Click Here

    Call us

    Click Here

    ಅವರು ಗುರುವಾರ ಇಲ್ಲಿನ ಮೂಡ್ಲಕಟ್ಟೆ ರೈಲು ನಿಲ್ದಾಣದಲ್ಲಿ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು.

    ಕುಂದಾಪುರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ರೈಲು ನಿಲ್ದಾಣದ ಮೂಲಭೂತ ಸೌಕರ್ಯದ ನಿಟ್ಟಿನಲ್ಲಿ ಈ ತಂಗುದಾಣ ಅಗತ್ಯ ವಿತ್ತು. ಈ ಹಿಂದೆ ಲಯನ್ಸ್‌ನವರು ಕೂಡ ಕೊಡುಗೆ ನೀಡಿದ್ದರು. ಮುಂದಿನ ದಿನಗಳಲ್ಲಿ ಇಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಆಗಲಿ. ಇದರೊಂದಿಗೆ ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಪ್ರಯತ್ನ ನಡೆಯುತ್ತಿದೆ. ರಾಜ್ಯ- ಕೇಂದ್ರ ಸರಕಾರದ ಸಹಕಾರದಿಂದ ಇದು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್ ಮಾತನಾಡಿ, ರೈಲು ಪ್ರಯಾಣಿಕರಿಗೆ ರೋಟರಿಯಿಂದ ಉತ್ತಮ ಸೌಕರ್ಯ ಒದಗಿಸಿದ್ದಾರೆ. 4-5 ವರ್ಷದಿಂದ ಇಲ್ಲಿ ಕೆಲವು ರೈಲುಗಳ ನಿಲುಗಡೆ, ಹೊಸ ರೈಲಿಗಾಗಿ ಹೋರಾಟ ನಡೆಯುತ್ತಿದೆ. ಶಾಸಕರು, ಸಂಸದರ ಪ್ರಯತ್ನದಿಂದ ಕೆಲವು ಈಡೇರಿದೆ. ಇನ್ನಷ್ಟು ಆಗಬೇಕಿದೆ. ಖಾಸಗಿ ಸಹಭಾಗಿತ್ವದಲ್ಲಿ ನಿಲ್ದಾಣದ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುತ್ತಿದೆ ಎಂದರು.

    ರೋಟರಿ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಮಾತನಾಡಿ, ರೋಟರಿ ಅಂತಾರಾಷ್ಟ್ರೀಯ ಅಧ್ಯಕ್ಷರು ಈ ವರ್ಷ ಶಾಶ್ವತ ಹಾಗೂ ಪರಿಣಾಮಕಾರಿ ಯೋಜನೆ ಅನುಷ್ಠಾನಕ್ಕೆ ಕರೆ ನೀಡಿದ್ದು, ಅದರಂತೆ ರೋಟರಿ ದಕ್ಷಿಣದವರು ಸಾರ್ವಜನಿ ಕರಿಗೆ ಪ್ರಯೋಜನ ಆಗುವಂತಹ ಕೊಡುಗೆ ನೀಡಿದ್ದಾರೆ. ನಮ್ಮ 89 ಕ್ಲಬ್‌ಗಳಿಂದಲೂ ಇಂತಹ ಯೋಜನೆಗಳು ಸಾಕಾರಗೊಳ್ಳಲಿದೆ ಎಂದರು.

    Click here

    Click here

    Click here

    Call us

    Call us

    ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಅಧ್ಯಕ್ಷ ಡಾ. ಆದರ್ಶ ಹೆಬ್ಬಾ‌ರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣ್ ರೈಲ್ವೆಯ ಡಿವಿಷನಲ್‌ ಕಮರ್ಶಿಯಲ್ ಮ್ಯಾನೇಜ‌ರ್ ಜಿ.ಡಿ.ಮೀನ, ರೆಡ್‌ಕ್ರಾಸ್‌ ಅಧ್ಯಕ್ಷ ಜಯಕರ ಶೆಟ್ಟಿ, ಸತ್ಯ ನಾರಾಯಣ ಪುರಾಣಿಕ್, ವಕೀಲರ ಸಂಘದ ಅಧ್ಯಕ್ಷ ಶ್ರೀನಾಥ್ ಜೆ. ರಾವ್, ರೈಲು ಪ್ರಯಾಣಿಕರ ಹಿತ ರಕ್ಷಣಾ ಸಮಿತಿಯ ಸಂಚಾಲಕ ವಿವೇಕ್ ನಾಯಕ್, ಕಾರ್ಯದರ್ಶಿ ಪ್ರವೀಣ್ ಕುಮಾರಂ, ಕೋಶಾಧಿಕಾರಿ ಉದಯ ಭಂಡಾರ್ಕರ್, ಸದಸ್ಯರಾದ ನಾಗರಾಜ್ ಆಚಾರ್, ರಾಘವೇಂದ್ರ ಶೇಟ್, ಕಂದಾವರ ಗ್ರಾಪಂ ಪಿಡಿಒ ಸುನೀಲ್, ರೋಟರಿ ದಕ್ಷಿಣದ ಪದಾಧಿಕಾರಿ ಗಳು ಉಪಸ್ಥಿತರಿದ್ದರು.

    ರೋಟರಿ ಕಾರ್ಯದರ್ಶಿ ಮನೋಹರ ಭಟ್ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಶಿಹಾನ್ ಸುಬ್ರಹ್ಮಣ್ಯ ಪಿ. ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    23/10/2026

    ಏಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ಶರನ್ನವರಾತ್ರಿಯ ಕಾರ್ಯಕ್ರಮಗಳು ಸಂಪನ್ನ

    23/10/2026

    ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಸಂಪನ್ನ

    22/10/2026
    Leave A Reply Cancel Reply

    seven + twelve =

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲಕಟ್ಟೆ – ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ
    • ಡಾ. ಶಿಹಾನ್ ಸುಬ್ರಹ್ಮಣ್ಯ ಪಿ. ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ನ 11 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
    • ಏಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ಶರನ್ನವರಾತ್ರಿಯ ಕಾರ್ಯಕ್ರಮಗಳು ಸಂಪನ್ನ
    • ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.