ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಮಣೂರು ಗ್ರಾಮದ ಕಿರಿ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕುಂದಾಪುರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ 407 ಟೆಂಪೊ ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ತನ್ನ ವಾಹನವನ್ನು ರಸ್ತೆಯ ಮಧ್ಯಭಾಗದಲ್ಲಿ ನಿಲ್ಲಿಸಿದ್ದಾನೆ. ಇದರಿಂದಾಗಿ ಅದೇ ದಿಕ್ಕಿನಲ್ಲಿ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಸಚಿನ್ (42) ನಿಯಂತ್ರಣ ಕಳೆದುಕೊಂಡು ಟೆಂಪೊಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದ ತೀವ್ರತೆಗೆ ಸವಾರ ಸಚಿನ್ ಅವರ ಎದೆ, ತಲೆ ಹಾಗೂ ಹೊಟ್ಟೆಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















