Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮತದಾರರ ಹಕ್ಕುಗಳ ರಕ್ಷಣೆಗಾಗಿ ಕುಂದಾಪುರದಲ್ಲಿ ಸಮಾನಮನಸ್ಕ ಸಂಘಟನೆಗಳ ಪ್ರತಿಭಟನೆ
    ಊರ್ಮನೆ ಸಮಾಚಾರ

    ಮತದಾರರ ಹಕ್ಕುಗಳ ರಕ್ಷಣೆಗಾಗಿ ಕುಂದಾಪುರದಲ್ಲಿ ಸಮಾನಮನಸ್ಕ ಸಂಘಟನೆಗಳ ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮತದಾರರ ಹಕ್ಕುಗಳ ರಕ್ಷಣೆ, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ಖಾತರಿಪಡಿಸುವಂತೆ ಆಗ್ರಹಿಸಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಮಾನಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು. ಇವಿಎಂ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆಸುವುದು ಸೇರಿದಂತೆ ಒಂಬತ್ತು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    Click Here

    Click Here

    Call us

    Click Here

    ಕುಂದಾಪುರದ ನೆಹರೂ ಮೈದಾನದಿಂದ ಮಧ್ಯಾಹ್ನ ಸುಮಾರು 2 ಗಂಟೆಗೆ ಆರಂಭಗೊಂಡ ವಾಹನ ಜಾಥಾ ಟೆಕ್ಕಟ್ಟೆ, ಕೋಮೆ, ಕೋಡಿ ಹಾಗೂ ವಿನಾಯಕ ಮಾರ್ಗವಾಗಿ ಸಾಗಿತು. ಬಳಿಕ ಶಾಸ್ತ್ರಿ ವೃತ್ತದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಸಭೆಯ ನಂತರ ಪ್ರತಿಭಟನಾಕಾರರು ಪಾದಯಾತ್ರೆಯ ಮೂಲಕ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲರಿಗೆ ಉದ್ದೇಶಿಸಿದ ಮನವಿಯನ್ನು ಸಹಾಯಕ ಆಯುಕ್ತರ ಮೂಲಕ ಸಲ್ಲಿಸಿದರು.

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಕುಂದಾಪುರ, I.N.D.I.A. ಒಕ್ಕೂಟದ ವಿವಿಧ ಪಕ್ಷಗಳು, ಸಿಪಿಐ(ಎಂ), ಸಿಐಟಿಯು, ದಲಿತ ಸಂಘರ್ಷ ಸಮಿತಿ (DSS), ಮುಸ್ಲಿಂ ಒಕ್ಕೂಟ, ಕ್ರೈಸ್ತ ಸಂಘಟನೆಗಳು ಹಾಗೂ ಇತರ ಸಮಾನಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.

    ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:
    ಇವಿಎಂ ಬಳಕೆಯನ್ನು ರದ್ದುಗೊಳಿಸಿ ಮತಪತ್ರಗಳ ಮೂಲಕ ಮತದಾನ ವ್ಯವಸ್ಥೆಯನ್ನು ಮರುಜಾರಿಗೊಳಿಸಬೇಕು; ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆ, 2023ರ ಸೆಕ್ಷನ್ 16 ಅನ್ನು ರದ್ದುಗೊಳಿಸಬೇಕು; ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಇದರೊಂದಿಗೆ, SIR ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಪಾಡಬೇಕು, ಅರ್ಹ ಮತದಾರರ ಹೆಸರುಗಳನ್ನು ಅನ್ಯಾಯವಾಗಿ ಮತದಾರರ ಪಟ್ಟಿಯಿಂದ ಕೈಬಿಡುವುದನ್ನು ತಡೆಯಬೇಕು, ಆಕ್ಷೇಪಣೆ ಮತ್ತು ಮೇಲ್ಮನವಿಗಳಿಗೆ ಪರಿಣಾಮಕಾರಿ ಅವಕಾಶ ಕಲ್ಪಿಸಬೇಕು ಹಾಗೂ ಮತದಾರರ ದೂರುಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿದರು.

    Click here

    Click here

    Click here

    Call us

    Call us

    ಗ್ರಾಮೀಣ ಪ್ರದೇಶದ ಜನರು, ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ಅಗತ್ಯ ನೆರವು ಒದಗಿಸಬೇಕು. ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿ, ಮತದಾರರಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬಲಪಡಿಸಲು ಸೂಕ್ತ ಸುಧಾರಣೆಗಳನ್ನು ಕೈಗೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿತ್ತು.

    ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೇದೂರು ಸದಾನಂದ ಶೆಟ್ಟಿ, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ, ಸಿಪಿಐ (ಎಂ) ನಾಯಕ ಚಂದ್ರಶೇಖರ್, ಸಹಬಾಳ್ವೆ ಕುಂದಾಪುರದ ಅಧ್ಯಕ್ಷ ರಾಮಕೃಷ್ಣ ಹೆರಳೆ, ವಕೀಲ ಮಂಜುನಾಥ ಗಿಳಿಯಾರು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಸಭೆಯಲ್ಲಿ ಮಾತನಾಡಿದರು.

    ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕೃಷ್ಣ ಪೂಜಾರಿ ಅಮಾಸೆಬೈಲು, ಸುರೇಶ್ ಶೆಟ್ಟಿ ಹೈಕಾಡಿ, ಅಶೋಕ್ ಶೆಟ್ಟಿ ಚೊರಾಡಿ, ಇಚ್ಚಿತಾರ್ಥ ಶೆಟ್ಟಿ ಹಾಗೂ ರಿಯಾಜ್ ಕೋಡಿ, ಸಿಪಿಐ(ಎಂ)ನ ವಿ. ನರಸಿಂಹ ಮತ್ತು ಎಚ್. ನರಸಿಂಹ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರಿಗಾರ್, ಮಾಜಿ ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ ಮತ್ತು ಅಬು ಮೊಹಮ್ಮದ್, ನಾಮನಿರ್ದೇಶಿತ ಸದಸ್ಯರಾದ ಅಶೋಕ್ ಸುವರ್ಣ ಮತ್ತು ಶಶಿಧರ್ ಕೋಟೆ, ಪ್ರಮುಖರಾದ ಶೇಖರ್ ಚಾತ್ರಬೆಟ್ಟು ಹಾಗೂ ಸದಾರಾಮ ಶೆಟ್ಟಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಪದಾಧಿಕಾರಿಗಳು, ಮಾಜಿ ಜನಪ್ರತಿನಿಧಿಗಳು, ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಟೆಂಪೊ, ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರನಿಗೆ ಗಾಯ

    24/10/2026

    ಕುಂದಾಪುರ: ಕ್ರೆಡಿಟ್ ಕಾರ್ಡ್‌ನಿಂದ ಸೈಬರ್ ವಂಚನೆ – 2.24 ಲಕ್ಷ ರೂ. ವರ್ಗಾವಣೆ

    24/10/2026

    ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಶ್ರೀ ವಿನಾಯಕ ಸಾಧನಶ್ರೀ ಪ್ರಶಸ್ತಿ ಪ್ರದಾನ

    24/10/2026
    Leave A Reply Cancel Reply

    10 + 7 =

    Call us

    Click Here

    Call us

    Call us

    Call us
    Highest Viewed Recently
    • ಮತದಾರರ ಹಕ್ಕುಗಳ ರಕ್ಷಣೆಗಾಗಿ ಕುಂದಾಪುರದಲ್ಲಿ ಸಮಾನಮನಸ್ಕ ಸಂಘಟನೆಗಳ ಪ್ರತಿಭಟನೆ
    • ಕೋಟ: ಟೆಂಪೊ, ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರನಿಗೆ ಗಾಯ
    • ಕುಂದಾಪುರ: ಕ್ರೆಡಿಟ್ ಕಾರ್ಡ್‌ನಿಂದ ಸೈಬರ್ ವಂಚನೆ – 2.24 ಲಕ್ಷ ರೂ. ವರ್ಗಾವಣೆ
    • ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಶ್ರೀ ವಿನಾಯಕ ಸಾಧನಶ್ರೀ ಪ್ರಶಸ್ತಿ ಪ್ರದಾನ
    • ನಿರೂಪಣೆಯಲ್ಲಿ ಜ್ಞಾನ, ಆತ್ಮವಿಶ್ವಾಸ, ಸಿದ್ಧತೆ ಮತ್ತು ಸ್ವಂತ ಶೈಲಿ ಮುಖ್ಯ: ನಿತೇಶ್ ಪೂಜಾರಿ ಮಾರ್ನಾಡ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.