ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಗಳನ್ನು ಕೊಲೆಗೈದ ಬಳಿಕ ತಾಯಿಯು ನೇಣಿಗೆ ಶರಣಾದ ಘಟನೆ ತಾಲೂಕಿನ ಶಾನಾಡಿ ಕೊರಗ ಕಾಲೋನಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಕೊರಗ ಕಾಲನಿ ನಿವಾಸಿ ಸುಧಾಕರ ಕೊರಗ ಅವರ ಪುತ್ರಿಯಾದ ಸುಪ್ರತಿ (14) ವಿಶೇಷ ಚೇತನೆಯಾಗಿದ್ದು ಆಕೆಯನ್ನು ಕೊಲೆಗೈದು ಪತ್ನಿ ನೇತ್ರಾವತಿ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುಧಾಕರ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದರು. ಸುಪ್ರತಿ ಹುಟ್ಟಿನಿಂದಲೇ ಅಂಗವಿಕಲೆಯಾಗಿದ್ದು, ನಡೆಯಲು ಅಥವಾ ಕುಳಿತುಕೊಳ್ಳಲು ಲ, ಮಾತನಾಡಲು ಸಾಧ್ಯವಾಗದೆ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿಯಲ್ಲಿದ್ದರು. ಮಗಳ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು. ದಂಪತಿಗೆ ಒಂದು ವರ್ಷದ ಗಂಡು ಮಗುವಿದೆ.
ರವಿವಾರ ಬೆಳಗ್ಗೆ ಸುಧಾಕರ ಅವರು ಕೆಲಸಕ್ಕೆ ತೆರಳಿದ ಬಳಿಕ ನೇತ್ರಾವತಿ ಮನೆಯ ಕೆಲಸಗಳನ್ನು ಮುಗಿಸಿದ ಬಳಖ ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಉಡುಪಿ ಹೆಚ್ಚುವರಿ ಎಸ್ಪಿ ಸುಧಾಕರ್ ಎಸ್., ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು., ಬ್ರಹ್ಮಾವರ ವೃತ್ತನಿರೀಕ್ಷಕ ಗೋಪಿಕೃಷ್ಣ, ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

















