Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ
    ಊರ್ಮನೆ ಸಮಾಚಾರ

    ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ (ಸುಜ್ಞಾನ  ಎಜುಕೇಶನಲ್ ಟ್ರಸ್ಟ್) ಇವುಗಳ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು.

    Click Here

    Click Here

    Call us

    Click Here

    ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು, ಪಂದ್ಯಾಟಗಳಲ್ಲಿ ಭಾಗವಹಿಸಿ ವಿಜೇತರಾದ ಎಲ್ಲಾ ಕ್ರೀಡಾಪಟುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಇಲಾಖೆಯು ಹಮ್ಮಿಕೊಳ್ಳುವ ಇಂತಹ ಯಾವುದೇ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಸಂಸ್ಥೆಯ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡಲು ಸದಾ ಸಿದ್ಧ ಎಂದು ಶುಭ ಹಾರೈಸಿದರು.

    ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಹಾಲಾಡಿ ವೃತ್ತ ಪಡೆದುಕೊಂಡಿತು. 17ರ ವಯೋಮಾನದ ಬಾಲಕರ ಸಮಗ್ರ ಪ್ರಶಸ್ತಿಯನ್ನು ಹಾಲಾಡಿ ವೃತ್ತ ಪಡೆದುಕೊಂಡಿತು. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೋಟೇಶ್ವರ ವೃತ್ತ ಪಡೆದುಕೊಂಡಿತು. ಕ್ರೀಡಾಕೂಟದ ಸಮಗ್ರ ತಂಡ ಪ್ರಶಸ್ತಿಯನ್ನು ಕೋಟೇಶ್ವರ ವೃತ್ತ ಪಡೆದುಕೊಂಡಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಅವರು ಮಾತನಾಡಿ, ಕ್ರೀಡಾಕೂಟವನ್ನು ಅತ್ಯಂತ ಅದ್ದೂರಿಯಾಗಿ ಮತ್ತು ಶಿಸ್ತುಬದ್ಧವಾಗಿ ಆಯೋಜಿಸಿದ ವಿದ್ಯಾರಣ್ಯ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸರ್ವ ಸಿಬ್ಬಂದಿ ವರ್ಗದವರ ಶ್ರಮವನ್ನು ಶ್ಲಾಘಿಸಿ ಅಭಿನಂದಿಸಿದರು.

    ಈ ಶುಭ ಸಮಾರಂಭದಲ್ಲಿ ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ, ಕುಂದಾಪುರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಜಿ., ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಸುಮಕರ ಶೆಟ್ಟಿ, ಕುಂದಾಪುರ ತಾಲೂಕು ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಉದಯ ಮಡಿವಾಳ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ  ಕಿಶನ್ ರಾಜ್ ಶೆಟ್ಟಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ  ರಾಜಾರಾಮ್ ಸೇರ್ವೇಗಾರ್, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ  ಶರತ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷರಾದ  ಉಷಾಲತಾ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸಮಾರೋಪ ಸಮಾರಂಭವನ್ನು ವಿಜಯಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರು ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಮತ್ತು ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು. ಸುಜ್ಞಾನ ಸಮೂಹ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾಕೂಟವನ್ನು ಸಂಘಟಿಸಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು

    26/10/2026

    ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಮೇಕಪ್ ಕಾರ್ಯಾಗಾರ

    26/10/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಜನತಾ ಜೈತ್ರಯಾತ್ರೆ

    26/10/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು
    • ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಮೇಕಪ್ ಕಾರ್ಯಾಗಾರ
    • ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಜನತಾ ಜೈತ್ರಯಾತ್ರೆ
    • ಕೆದೂರು: ಮಗಳ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.