Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು
    ಊರ್ಮನೆ ಸಮಾಚಾರ

    ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೈಕಲ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.

    Click Here

    Click Here

    Call us

    Click Here

    ಮೃತರನ್ನು ಕೋಟ ಮಣೂರು ನಿವಾಸಿ, ಹಿರಿಯ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ (68)ಎಂದು ಗುರುತಿಸಲಾಗಿದೆ.

    ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬರುತ್ತಿದ್ದ ಕಾರು ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್‌ನಲ್ಲಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು.

    ಇವರ ಪಾರ್ಥಿವ ಶರೀರದ ಕಾರ್ಯ ಇಂದು ಸಾಯಂಕಾಲ 4.00 ಗಂಟೆಗೆ ಕೋಟ ಹಾಲಿನ ಡೈರಿ ಹಿಂಭಾಗದಲ್ಲಿ ಇರುವ ವೆಂಕಟೇಶ ಮನೆಯಲ್ಲಿ ನಡೆಯಲಿದೆ.

    Click here

    Click here

    Click here

    Call us

    Call us

    36 ವರ್ಷಗಳ ಕಾಲ ಕಾರ್ಪೊರೇಷನ್ ಬ್ಯಾಂಕ್ ಈಗಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಹಲವಾರು ಶಾಖೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಅಪಾರ ದೈವ ಭಕ್ತರಾಗಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸಿದ್ದರು ಇವರು ಪತ್ನಿ, ಇಬ್ಬರು ಗಂಡು ಮಕ್ಕಳು, ಕುಟುಂಬ ವರ್ಗ ಮತ್ತು ಅಪಾರ ಸ್ವಯಂ ಸೇವಕರನ್ನು ಅಗಲಿದ್ದಾರೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್: ಅಶಕ್ತರಿಗೆ ಸಹಾಯಧನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    26/10/2026

    ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಮೇಕಪ್ ಕಾರ್ಯಾಗಾರ

    26/10/2026

    ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ

    26/10/2026
    Leave A Reply Cancel Reply

    18 + ten =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್: ಅಶಕ್ತರಿಗೆ ಸಹಾಯಧನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು
    • ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಮೇಕಪ್ ಕಾರ್ಯಾಗಾರ
    • ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಜನತಾ ಜೈತ್ರಯಾತ್ರೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.