ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಹಾಗೂ ಯೋಗ ತರಬೇತುದಾರರಾದ ಭಾರತಿ ಎಂ. ಬಿಜೂರು ಅವರಿಗೆ ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ರಾಷ್ಟ್ರಮಟ್ಟದ ಯೋಗ ಜ್ಯೋತಿ ಅವಾರ್ಡ್ 2026 ಲಭಿಸಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಕೆಪಿಎಸ್ ಶಾಲೆಯ ಸಹ ಶಿಕ್ಷಕಿ ಹಾಗೂ ಯೋಗ ಶಿಕ್ಷಕಿ ಭಾರತಿ ಎಂ. ಬಿಜೂರು ಅವರಿಗೆ ಬೆಂಗಳೂರಿನ ಪುಟ್ಟಣ್ಣ ಶೆಟ್ಟಿ ಟೌನ್ ಹಾಲ್‌ನಲ್ಲಿ ಆಯೋಜಿಸಿದ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ 2026 ಇದರಲ್ಲಿ ಇವರು ಶಾಲೆಯ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ನೀಡಿದ ಯೋಗ ಸಾಧನೆಯನ್ನು ಗುರುತಿಸಿ ಯೋಗ ಜ್ಯೋತಿ ಅವಾರ್ಡ್ ನೀಡಿ ಗೌರವಿಸಲಾಯಿತು.












