ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ “ಹೆಚ್.ಐ.ವಿ.ಏಡ್ಸ್ ಜಾಗೃತಿ” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರದ ಸರಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ನಳಿನಾಕ್ಷಿ ಹೆಚ್.ಐ.ವಿ. ಏಡ್ಸ್ ಕುರಿತು ವಿದ್ಯಾರ್ಥಿಗಳಲ್ಲಿ ವಿಶೇಷ ಜಾಗೃತಿ ಮೂಡಿಸಿದರು.

ನಂತರ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡೊಮಿನಿಕ್ ಬ್ರಿಗಾಂಝ್, ಸ್ಮಿತಾ, ವಿದ್ಯಾಧರ, ಡಾ. ಸುಮಲತಾ, ಚೈತ್ರ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಗೀತಾ ಪ್ರಭು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

















