Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿ.ಎಚ್‌.ಡಿ. ಪದವಿ ಪ್ರದಾನ
    alvas nudisiri

    ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿ.ಎಚ್‌.ಡಿ. ಪದವಿ ಪ್ರದಾನ

    Updated:27/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿ, ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರು ಪದವಿ ಪ್ರದಾನ ಮಾಡಿದರು.

    Click Here

    Click Here

    Call us

    Click Here

    ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
    ರಶ್ಮಿ ಶೆಟ್ಟಿ ಅವರು ‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ–2013ರ ಅನುಷ್ಠಾನ: ಕರ್ನಾಟಕದ ಗ್ರಾಮೀಣ ರಾಮನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಅನುಭವಗಳ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿದ್ದಾರೆ. ಆಹಾರ ಭದ್ರತೆಗೆ ಸಂಬಂಧಿಸಿದ ಕಾನೂನಿನ ಅನುಷ್ಠಾನವು ಗ್ರಾಮೀಣ ಪ್ರದೇಶಗಳ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ಬೀರುವ ಪರಿಣಾಮಗಳು, ಕಾಯ್ದೆಯ ಅನುಷ್ಠಾನದ ಅನುಭವಗಳು ಹಾಗೂ ಅದರ ಸಾಮಾಜಿಕ ಆಯಾಮಗಳನ್ನು ಅಧ್ಯಯನ ಮಾಡಿರುವುದು ಈ ಸಂಶೋಧನೆಯ ಪ್ರಮುಖ ಅಂಶವಾಗಿದೆ.

    ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಪ್ರೊ. ಸರಸು ಎಸ್ತರ್ ಥಾಮಸ್‌ರವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಪೂರ್ಣಗೊಳಿಸಿದ್ದಾರೆ.

    ಎರಡು ದಶಕಗಳಿಗೂ ಅಧಿಕ ಶೈಕ್ಷಣಿಕ ಅನುಭವ:
    ಸಂಶೋಧನೆ, ಬೋಧನೆ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಎರಡು ದಶಕಗಳಿಗೂ ಅಧಿಕ ಅನುಭವ ಹೊಂದಿರುವ ರಶ್ಮಿ ಶೆಟ್ಟಿಯವರು ಕಾನೂನು ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿರುವ ಅವರು, ಬೆಂಗಳೂರಿನ ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಕಾನೂನು ಮತ್ತು ನೀತಿ ಆಯ್ಕೆಯಲ್ಲಿ ಸ್ನಾತಕೋತ್ತರ ಕಾನೂನು ಪದವಿ ಪಡೆದಿದ್ದಾರೆ. ಹೈದರಾಬಾದ್ ವಿಶ್ವವಿದ್ಯಾಲಯದಿಂದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪಡೆದಿದ್ದು, ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿಯೂ ಉತ್ತೀರ್ಣರಾಗಿದ್ದಾರೆ.

    ಕಾನೂನು ಕ್ಷೇತ್ರದ ಅಧ್ಯಯನದ ಜೊತೆಗೆ ಸಾಮಾಜಿಕ ನ್ಯಾಯ ಹಾಗೂ ಮಾನವರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿಯೂ ರಶ್ಮಿ ಶೆಟ್ಟಿಯವರು ಆಸಕ್ತಿ ಹೊಂದಿದ್ದಾರೆ. ಅವರ ‘ಸಾಮಾಜಿಕ ನ್ಯಾಯ ಮತ್ತು ಕಾರ್ಮಿಕ ನ್ಯಾಯಶಾಸ್ತ್ರ’ ಕೃತಿಯನ್ನು ಪ್ರತಿಷ್ಠಿತ ಸೇಜ್ ಪ್ರಕಾಶನ ಸಂಸ್ಥೆ ಪ್ರಕಟಿಸಿದೆ.

    Click here

    Click here

    Click here

    Call us

    Call us

    ರಶ್ಮಿ ಶೆಟ್ಟಿ ಅವರು ಕಾರ್ಕಳ ನಂದಳಿಕೆಯ ಕಾನಬೆಟ್ಟಿನ ಸುಗಂಧಿ ಜೆ. ಶೆಟ್ಟಿ ಹಾಗೂ ದಿವಂಗತ ನ್ಯಾಯವಾದಿ ಬೋಳ ಪರ್ತಿಮಾರುಗುತ್ತು ಜಯರಾಮ ಶೆಟ್ಟಿ ಅವರ ಪುತ್ರಿ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ

    27/10/2026

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಹೆಚ್.ಐ.ವಿ. ಏಡ್ಸ್ʼ ಜಾಗೃತಿ ಕಾರ್ಯಕ್ರಮ

    27/10/2026

    ಡಾ. ಬಿ.ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರದಲ್ಲಿ ಕೆಸರಲ್ಲೊಂದಿನ ಕಾರ್ಯಕ್ರಮ

    27/10/2026
    Leave A Reply Cancel Reply

    3 + 13 =

    Call us

    Click Here

    Call us

    Call us

    Call us
    Highest Viewed Recently
    • ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ
    • ಯೋಗ ಸಂಘಟಕ ಮಂಜುನಾಥ್ ಬಿಜೂರು ಅವರಿಗೆ ಲೈಫ್ ಟೈಮ್ ಅಚಿವ್‌ಮೆಂಟ್‌ ಇನ್ ಯೋಗ ಅವಾರ್ಡ್
    • ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿ.ಎಚ್‌.ಡಿ. ಪದವಿ ಪ್ರದಾನ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಹೆಚ್.ಐ.ವಿ. ಏಡ್ಸ್ʼ ಜಾಗೃತಿ ಕಾರ್ಯಕ್ರಮ
    • ಆಲೂರು ಸರಕಾರಿ ಪ್ರೌಢಶಾಲೆ – ಬೈಂದೂರು ಶೈಕ್ಷಣಿಕ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.