ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ದಿನಾಂಕ 22-10-2026ರಂದು “ಪದವಿಯನ್ನು ಮೀರಿ: ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕ್ರಮದ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ನಂತರ ಸಂಪನ್ಮೂಲ ವ್ಯಕ್ತಿಯಾದ ದಯಾನಂದ ಶೆಟ್ಟಿ, ಡೈರೆಕ್ಟರ್ ಅಂಡ್ ಸೀನಿಯರ್ ಕಂಸಲ್ಟೆಂಟ್, ಪ್ರೊಜಿನಿ ಟೆಕ್, ಬೆಂಗಳೂರು ಅವರು ಉಪನ್ಯಾಸವನ್ನು ಪ್ರಾರಂಭಿಸಿ, ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ಭವಿಷ್ಯದ ನಾಯಕರು ಹೊಂದಿರಬೇಕಾದ ಕೌಶಲ್ಯಗಳು, ನಾಯಕತ್ವದ ಗುಣಗಳು, ಸಂವಹನ ಕೌಶಲ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಸಾಮರ್ಥ್ಯ ಹಾಗೂ ಪದವಿಯ ಜೊತೆಗೆ ಪ್ರಾಯೋಗಿಕ ಜ್ಞಾನ ಮತ್ತು ವೈಯಕ್ತಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮಹತ್ವದ ಕುರಿತು ಮಾಹಿತಿ ನೀಡಿದರು.
ಉಪನ್ಯಾಸದ ಮಧ್ಯೆ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ, ತಮ್ಮ ಪ್ರಶ್ನೆಗಳನ್ನು ಕೇಳುವ ಮೂಲಕ ಸಕ್ರಿಯವಾಗಿ ಭಾಗವಹಿಸಿದರು. ಶ್ರೀ ದಯಾನಂದ ಶೆಟ್ಟಿ ಅವರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಅವರ ವೃತ್ತಿಜೀವನದ ಬೆಳವಣಿಗೆಗೆ ಅಗತ್ಯವಾದ ಮಾರ್ಗದರ್ಶನ ನೀಡಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾಕ್ಟರ್ ರಾಮಕೃಷ್ಣ ಹೆಗ್ಡೆ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಸುಚಿತ್ರಾ ದಿನೇಶ್ ಪೂಜಾರಿ ಅವರು, ವಿಭಾಗದ ಎಲ್ಲಾ ಬೋಧಕ ವರ್ಗದವರು ಹಾಗೂ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












