Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ
    ಊರ್ಮನೆ ಸಮಾಚಾರ

    ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಗ್ರಾಮೀಣ ಪ್ರದೇಶದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಬಾರ್ಕೂರು ಎಜುಕೇಶನ್ ಸೊಸೈಟಿ ರಿ. ಮತ್ತು ಕುಂದಾಪುರದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ನವೆಂಬರ್ 1ರಂದು ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ.

    Click Here

    Click Here

    Call us

    Click Here

    ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಪಿಯು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪಿಯುಸಿಗೆ ದಾಖಲಾದ 100 ವಿದ್ಯಾರ್ಥಿಗಳಲ್ಲಿ 45 ಮಂದಿಗೆ ಒಟ್ಟು ₹9.40 ಲಕ್ಷ ವಿದ್ಯಾರ್ಥಿವೇತನ ನೀಡಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ತರಬೇತಿ ನೀಡುವ ವ್ಯವಸ್ಥೆಯಿದೆ ಎಂದು ತಿಳಿಸಿದರು.

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, ಕಳೆದ ವರ್ಷ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದಾರೆ.ಉಚಿತ ಶಿಕ್ಷಣದಡಿ ದಾಖಲಾದ ಸಮೀದ್ ಪ್ಯಾರೀಸ್ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿದ್ದಾನೆ. ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುವುದರ ಜೊತೆಗೆ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವ ಉದ್ದೇಶವನ್ನೂ ಹೊಂದಿದೆ ಎಂದರು.

    ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮಗಳಲ್ಲಿ ಕನ್ನಡ ಅಥವಾ ಇಂಗ್ಲಿಷ್ ಮಾಧ್ಯಮದಲ್ಲಿ ಓದುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು. ಮಧ್ಯಂತರ ಪರೀಕ್ಷೆಯವರೆಗಿನ ಪಠ್ಯಕ್ರಮದ ಆಧಾರದಲ್ಲಿ ಒಎಂಆರ್ ಹಾಗೂ ವಿವರಣಾತ್ಮಕ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ.

    ನವೆಂಬರ್ 1ರಂದು ವಿದ್ಯಾರ್ಥಿಗಳು ಬೆಳಿಗ್ಗೆ 10.30ಕ್ಕೆ ಕಾಲೇಜು ಆವರಣಕ್ಕೆ ಆಗಮಿಸಬೇಕು. ಪರೀಕ್ಷೆಗೆ ಮುನ್ನ ಹೆಸರು, ವಿಳಾಸ, ಶಾಲೆಯ ಹೆಸರು ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಸಂಸ್ಥೆ ಸೂಚಿಸಿರುವ ಮೊಬೈಲ್ ಸಂಖ್ಯೆಗೆ ವಾಟ್ಸ್ಆ್ಯಪ್ ಮೂಲಕ ಕಳುಹಿಸಿ ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ ಗೂಗಲ್ ಫಾರ್ಮ್ ವ್ಯವಸ್ಥೆಯೂ ಇರಲಿದೆ ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಪತ್ರಿಕಾಗೋಷ್ಠಿಯಲ್ಲಿ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ ಉಪಸ್ಥಿತರಿದ್ದರು.

    ನೋಂದಣಿಗಾಗಿ ಸಂಪರ್ಕಿಸಿ:
    6366976744 9964291755 8217527362

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ

    28/10/2026

    ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ

    27/10/2026

    ಕೋಟದಲ್ಲಿ ಭೀಕರ ಅಪಘಾತ – ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು

    27/10/2026
    Leave A Reply Cancel Reply

    2 × 4 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ
    • ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಅನುಷ್ಠಾನ ಮಾಡಿ: ಅಶೋಕ್ ಕುಮಾರ್
    • ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ
    • ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ
    • ಕೋಟದಲ್ಲಿ ಭೀಕರ ಅಪಘಾತ – ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.