ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇವರು ಏರ್ಪಡಿಸಿದ್ದ ಅಂತರ್ ಶಾಲಾ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಇತಿಹಾಸಿನಿ ಪಡುಕೋಣೆ ತೃತೀಯ ಸ್ಥಾನ ಗಳಿಸಿದ್ದಾಳೆ.
ಇವಳು ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇವಳಿಗೆ ಮುಖ್ಯ ಶಿಕ್ಷಕರು, ಅಧ್ಯಾಪಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ಅಭಿನಂದಿಸಿದ್ದಾರೆ.












