ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಕಾಲೇಜಿನಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಸ್ರೂರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ದೇವಾನಂದ ಶೆಟ್ಟಿ, ಕುಂದಾಪುರ ಕಲಾ ಕ್ಷೇತ್ರ ಟ್ರಸ್ಟ್ ಇದರ ಅಧ್ಯಕ್ಷರಾದ ಕಿಶೋರ ಕುಮಾರ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಲೇಜಿನ ವಿಶ್ವಸ್ಥ ಮಂಡಳಿಯ ಖಜಾಂಚಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹೆಬ್ರಿ ಸರ್ಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮನೋಜ್ ಎಂ. ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಸ್ಥ ಮಂಡಳಿಯ ಸದಸ್ಯರಾದ ಗಣೇಶ ಶೆಟ್ಟಿ ಮೊಳಹಳ್ಳಿ ವಹಿಸಿದರು. ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಆಳ್ವಾಸ ಕಾಲೇಜು ಮೂಡುಬಿದ್ರೆ ದ್ವಿತೀಯ ಸ್ಥಾನವನ್ನು ಶ್ರೀ ಶಾರದಾ ಕಾಲೇಜು ಬಸ್ರೂರು, ತೃತೀಯ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ, ಚತುರ್ಥ ಸ್ಥಾನವನ್ನು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ತಮ್ಮದಾಗಿಸಿಕೊಂಡಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ವಿಜೇತ ತಂಡಗಳಿಗೆ ಶುಭ ಹಾರೈಸಿದರು. ಉಪನ್ಯಾಸಕ ಅಕ್ಷಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಕುಮಾರ್ ಶೆಟ್ಟಿ ಬಿ., ವಂದಿಸಿದರು.

















