ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ರೋಬೊಸಾಫ್ಟ್ ಟೆಕ್ನಾಲಜೀಸ್ ಇವರ ಸಿಎಸ್ಆರ್ ನಿಧಿಯಿಂದ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕೊಠಡಿಗಳ ಉದ್ಘಾಟನೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ರೋಬೋಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಸಿಇಒ ರಾನ್ ಮಹಾನ್ ಅವರು ನೆರವೇರಿಸಿದರು.

ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿಶೇಷ ಮುತುವರ್ಜಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಗೆ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಸುಸಜ್ಜಿತ ಶಾಲಾ ಕೊಠಡಿಗಳು, ಶುದ್ದ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರಾಕ್ಟಿವ್ ಬೋರ್ಡ್, ಶಾಲೆಗೆ ಇಂಟರ್ಲಾಕ್ ಅಳವಡಿಕೆ, ಶಾಲಾ ಪೈಂಟಿಂಗ್, ಸುಸ್ಸಜಿತ ಗ್ರಂಥಾಲಯ, ಪೀಠೋಪಕರಣಗಳನ್ನು ಸಿಎಸ್ಆರ್ ನಿಧಿಯ ಮೂಲಕ ಒದಗಿಸಿ ಮಾದರಿ ಶಾಲೆಯನ್ನಾಗಿ ನಿರ್ಮಿಸಲಾಗಿದ್ದು ಇಂದು ಈ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಅದ್ದೂರಿಯಾಗಿ ನೆರವೇರಿತು.
ರೋಬೋಸಾಫ್ಟ್ ಸಂಸ್ಥೆಯ ಸಿಇಓ ರಾನ್ ಮಹಾನ್ ಹಾಗೂ ಅವರ ಧರ್ಮಪತ್ನಿ ಸಾಂಡ್ರ, ಸಂಸ್ಥೆಯ ಮಾನವ ಸಂಪನ್ಮೂಲ ಮುಖ್ಯಸ್ಥೆ ರೀನಾ ಮಲಿಕ್ ಅವರನ್ನು ಮೆರವಣಿಗೆ ಮೂಲಕ ಶಾಲೆಗೆ ಸ್ವಾಗತಿಸಲಾಯಿತು.
ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಹಾಗೂ ಭೂಮಿ ಟ್ರಸ್ಟ್ ಸಹಕಾರದಿಂದ ಶಾಲೆಯ ಸಭಾಂಗಣಕ್ಕೆ ಅಳವಡಿಸಿದ ಇಂಟರ್ಲಾಕನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು.
ರೋಬೊಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ನಿರ್ಮಿಸಿದ ಕೊಠಡಿಗಳ ಹಾಗೂ ಗ್ರಂಥಾಲಯಯದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಸರಕಾರಿ ಶಾಲೆಯ ಅಭಿವೃದ್ಧಿಗೆ ಇಷ್ಟು ದೊಡ್ಡಮಟ್ಟದಲ್ಲಿ ಕೊಡುಗೆ ನೀಡಿದ ರೋಬೋಸಾಫ್ಟ್ ಸಂಸ್ಥೆ, ಶಾಲೆಯನ್ನು ಮಾದರಿಯಾಗಿ ನಿರ್ಮಿಸಿದೆ, ಬೈಂದೂರಿನ ಜನತೆಯ ಪರವಾಗಿ ಪ್ರೀತಿಯ ಅಭಿನಂದನೆಯನ್ನು ಸಲ್ಲಿಸಿದರು.
ಸಂಸ್ಥೆಯ ಮುಖ್ಯಸ್ಥ ರಾನ್ ಮಹಾನ್ ಮಾತನಾಡಿ ವಿದ್ಯಾರ್ಥಿಗಳ ಅವಶ್ಯಕತೆಯನ್ನು ನಾವು ಪೂರೈಸಲು ಪ್ರಯತ್ನಿಸಿದ್ದೇವೆ. ನಿಮ್ಮ ಪ್ರೀತಿಗೆ ಹಾಗೂ ಶಾಸಕರ ಶಾಲೆಯ ಮೇಲಿನ ಕಾಳಜಿಗೆ ಅಭಾರಿಯಾಗಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ರೋಬೋಸಾಫ್ಟ್ ಪದಾಧಿಕಾರಿಗಳಾದ ಚಕ್ರಿ ಹೆಗ್ಡೆ, ಗೋಪಾಲ್ ಕಾಮತ್, ಶರತ್ ಹಾಗೂ ಕಾರ್ತಿಕ್ ಅವರನ್ನು ಸನ್ಮಾನಿಸಲಾಯಿತು.
ಬೈಂದೂರು ವಲಯ ಶಿಕ್ಷಣಾಧಿಕಾರಿಯಾದ ನಾಗೇಶ್ ನಾಯ್ಕ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಜು ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ್ ಬಟವಾಡಿ, ಯಡ್ತರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಆಡಳಿತ ಮಂಡಳಿಯ ಮಾಜಿ ಸದಸ್ಯ ಜಯಾನಂದ್ ಹೋಬಳಿದಾರ್, ಬೈಂದೂರು ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ ದೇವಾಡಿಗ, ಬೈಂದೂರು ಸರ್ಕಾರಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ಬೈಂದೂರಿನ ಪ್ರಾಂಶುಪಾಲರಾದ ವೆಂಕಟರಮಣ ಬಿ., ಬೈಂದೂರು ಗುತ್ತಿಗೆದಾರ ಸೂಲಿಯಣ್ಣ ಶೆಟ್ಟಿ, ಬೈಂದೂರು ಗುತ್ತಿಗೆದಾರರಾದ ಜಗನ್ನಾಥ ಶೆಟ್ಟಿ, ಬೈಂದೂರು ಸುಬ್ರಾಯ ಶೇರುಗಾರ್ ಉಪಸ್ಥಿತರಿದ್ದರು.
ಬೈಂದೂರು ಸ.ಮಾ.ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯರಾದ ಗಣಪತಿ ಹೋಬಳಿದಾರ್ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಅಭಿವೃದ್ಧಿ ಮತ್ತು ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವೆಂಕಟರಮಣ ಎಚ್. ಧನ್ಯವಾದ ಸಲ್ಲಿಸಿದರು. ಸರಸ್ವತಿ ಕೆಎ ಮತ್ತು ವೀಣಾ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು. ಸುಜಾತ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು .

















