Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ‘ಕನ್ನಡ ಸಿರಿನುಡಿ ಸಂಭ್ರಮ’
    ಊರ್ಮನೆ ಸಮಾಚಾರ

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ‘ಕನ್ನಡ ಸಿರಿನುಡಿ ಸಂಭ್ರಮ’

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಿರಿನುಡಿ ಸಂಭ್ರಮ’ಕಾರ್ಯಕ್ರಮವು ಅತ್ಯಂತ ಸಂಭ್ರಮ-ಸಂಭ್ರಮದಿಂದ ಜರುಗಿತು.

    Click Here

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡವನ್ನು ಕೇವಲ ಒಂದು ಭಾಷೆಯಾಗಿ ಕಲಿಯದೆ, ಪ್ರೀತಿಸಿ, ಗೌರವಿಸಿ, ದೈನಂದಿನ ಬದುಕಿನಲ್ಲಿ ಹೆಮ್ಮೆಯಿಂದ ಬಳಸಬೇಕು” ಎಂದು ಕರೆ ನೀಡಿದರು.

    ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, “ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವರ್ಷವಿಡೀ ಭಾಷೆಯ ಬೆಳವಣಿಗೆ ಹಾಗೂ ಪ್ರಚಾರಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದರು.

    ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ ಮಾತನಾಡಿ, “ನಮ್ಮ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ. ಮುಂದಿನ ಪೀಳಿಗೆಗೂ ಕನ್ನಡದ ಮಹತ್ವವನ್ನು ತಲುಪಿಸುವ ಕೆಲಸವಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸೌರಭ:
    ಕಾರ್ಯಕ್ರಮದ ಭಾಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿಯ ಅಭಿಮಾನವನ್ನು ಬಿಂಬಿಸುವ ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರಸ್ತುತಿಗಳು ಜರುಗಿದವು. ಕನ್ನಡದ ಸೊಗಡು ಮತ್ತು ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಸಭಿಕರ ಮೆಚ್ಚುಗೆ ಪಾತ್ರವಾಯಿತು.

    Click here

    Click here

    Click here

    Call us

    Call us

    ಕಾಲೇಜಿನ ಕನ್ನಡ ಉಪನ್ಯಾಸಕಿ ನೈನಾ ಜೆ. ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಪ್ರಗತಿ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳಾದ ನಿಖಿತಾ, ಗಾಯತ್ರಿ, ಮುಝಮ್ಮಿಲ್, ಸುಪ್ರೀತ್ ಹಾಗೂ ಆದಿತ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

    02/11/2026

    ಹಂಗಾರಕಟ್ಟೆ ಕಲಾಕೇಂದ್ರದಲ್ಲಿ ಯಕ್ಷ ಸಪ್ತಾಹ ಕಾಳಗೋತ್ಸವ

    02/11/2026

    ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ ‘ನವೋನ್ಮೇಶ’ ರಾಜ್ಯ ಮಟ್ಟದ ಫೆಸ್ಟ್ ಸಮಾರೋಪ: ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

    02/11/2026
    Leave A Reply Cancel Reply

    one × 2 =

    Call us

    Click Here

    Call us

    Call us

    Call us
    Highest Viewed Recently
    • ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ
    • ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ
    • ಹಂಗಾರಕಟ್ಟೆ ಕಲಾಕೇಂದ್ರದಲ್ಲಿ ಯಕ್ಷ ಸಪ್ತಾಹ ಕಾಳಗೋತ್ಸವ
    • ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ ‘ನವೋನ್ಮೇಶ’ ರಾಜ್ಯ ಮಟ್ಟದ ಫೆಸ್ಟ್ ಸಮಾರೋಪ: ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
    • ವಿವಿಧ ಯೋಜನೆ: ಪ.ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.