Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಸಾಮಾನ್ಯರ ಕುಂದು ಕೊರತೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಒತ್ತು ನೀಡಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
    ಉಡುಪಿ ಜಿಲ್ಲೆ

    ಜನಸಾಮಾನ್ಯರ ಕುಂದು ಕೊರತೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಒತ್ತು ನೀಡಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಆಡಳಿತವನ್ನು ಜನರ ಮನೆಬಾಗಿಲಿಗೆ ಕರೆದೊಯ್ಯುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರಾರಂಭಿಸಿದೆ. ಜನಸಾಮಾನ್ಯರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

    Click Here

    Click Here

    Call us

    Click Here

    ಅವರು ಮಣಿಪುರ ಗ್ರಾಮದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಉಡುಪಿ ಇವರ ವತಿಯಿಂದ ನಡೆದ ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರ ಸೇವೆಯನ್ನು ಮಾಡುವುದರೊಂದಿಗೆ ಸಮಾಜದ ಋಣ ತೀರಿಸಲು ಭಗವಂತ ಅವಕಾಶ ಮಾಡಿಕೊಟ್ಟಿದ್ದಾನೆ. ಸಮಾಜದಲ್ಲಿ ನೊಂದವರು, ಬೆಂದವರು, ಅಸಹಾಯಕರು ಇರುತ್ತಾರೆ. ಅವರುಗಳ ಸಮಸ್ಯೆಗಳನ್ನು ಹಗುರವಾಗಿ ಭಾವಿಸದೇ ಪ್ರಜೆಗಳ ಸೇವೆಯೇ ಪರಮಾತ್ಮನ ಸೇವೆ ಎಂಬ ಭಾವನೆಯಿಂದ ಕೆಲಸ ಮಾಡೋಣ ಎಂದರು.

    ಈವರೆಗೆ ನಡೆದ ಸಭೆಗಳಲ್ಲಿ ಸಾಮಾನ್ಯವಾಗಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ನಿಂತು ಹೋಗಿದೆ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನಗಳು ಬರುತ್ತಿಲ್ಲ ಎಂಬ ದೂರುಗಳು ನಾಗರಿಕರಿಂದ ಕೇಳಿ ಬರುತ್ತಿದೆ, ಸಾಮಾಜಿಕ ಪಿಂಚಣಿ ಯೋಜನೆಗಳಿಗೆ ಸಂಬಂಧಿಸಿದಂತೆ ಅನರ್ಹರನ್ನು ಯೋಜನೆಗಳಿಂದ ಕೈಬಿಡುವ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನೆಗೆ ಸಂಬಂಧಿಸಿದಂತೆ ಸರ್ವೇ ಕಾರ್ಯಗಳು ನಡೆಯುತ್ತಿದ್ದು, ಮುಂದಿನ 15 ದಿನಗಳ ಒಳಗಾಗಿ ಪಿಂಚಣಿ ಸೌಲಭ್ಯಗಳು ದೊರೆಯಲಿದ್ದು, ಇದಕ್ಕೆ ಆತಂಕ ಪಡಬೇಕಿಲ್ಲ ಎಂದರು.

    ಸಭೆಗಳಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸೇರಿದಂತೆ ಮತ್ತಿತರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವುದರೊಂದಿಗೆ ಅವರುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯರು ಸರಕಾರದ ಆಡಳಿತ ವ್ಯವಸ್ಥೆ ಹಾಗೂ ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವೇ ಇಲ್ಲದೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ಕಚೇರಿಗಳಿಗೆ ಪದೇ ಪದೇ ಅಲೆಯುತ್ತಾರೆ. ಈ ಸಮಸ್ಯೆಯನ್ನು ಹೋಗಲಾಡಿಸುವುದರೊಂದಿಗೆ ಸರಕಾರಿ ಸೌಲಭ್ಯಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸಲು ಹಾಗೂ ಅವರುಗಳ ಕುಂದು ಕೊರತೆಯ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸಿಕೊಂಡು ಬರಲಾಗುತ್ತಿದೆ.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯುತ್ತಿದ್ದು, ಈವರೆಗೆ ಸುಮಾರು 2400 ಕ್ಕೂ ಹೆಚ್ಚು ಕುಂದು ಕೊರತೆಗಳ ಅಹವಾಲುಗಳು ಸಾರ್ವಜನಿಕರಿಂದ ಸ್ವೀಕಾರವಾಗಿದ್ದು, ಶೇ. 80 ರಷ್ಟು ಪರಿಹರಿಸಲಾಗಿರುತ್ತದೆ. ಸದರಿ ಸಭೆಗಳಲ್ಲಿ ಇಲಾಖಾವಾರು ಕೌಂಟರ್‌ಗಳನ್ನು ತೆರೆದು ಜನರಿಂದ ಅಹವಾಲುಗಳನ್ನು ಸ್ವೀಕರಿಸುವುದರೊಂದಿಗೆ ಸರಕಾರದಿಂದ ಜಾರಿಗೊಳಿಸಲಾದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಅವರುಗಳನ್ನು ಯೋಜನೆಗಳ ಫಲಾನುಭವಿಗಳನ್ನಾಗಿಸುವ ಕಾರ್ಯವನ್ನು ಮಾಡಲಾಗುವುದು ಎಂದ ಅವರು, ಸಭೆಯಲ್ಲಿ ಸ್ವೀಕರಿಸಲಾಗುವ ಎಲ್ಲಾ ಅರ್ಜಿಗಳನ್ನು ಐ.ಪಿ.ಜಿ.ಆರ್.ಎಸ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಇದರಿಂದ ಅರ್ಜಿಗಳ ಸ್ಥಿತಿಗತಿಗಳ ಬಗ್ಗೆ ಸೂಕ್ತ ಮಾಹಿತಿ ದೊರೆಯಲಿದೆ ಎಂದರು.

     ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಗುಣಾತ್ಮಕ ಪರಿಹಾರ ನೀಡಲು ವೈಯಕ್ತಿಕ ಗಮನಹರಿಸಬೇಕು. ಸರಕಾರಿ ಸೇವೆ ದೇವರ ಸೇವೆ, ಸಾರ್ವಜನಿಕರೇ ದೇವರು ಎಂಬ ಮನೋಭಾವದೊಂದಿಗೆ ಜನರು ಪುನಃ ಅದೇ ಸಮಸ್ಯೆಯನ್ನು ಹೊತ್ತು ಅಧಿಕಾರಿಗಳ ಬಳಿಗೆ ಬಾರದ ಹಾಗೆ ಪರಿಹಾರ ನೀಡಲು ಮುಂದಾಗಬೇಕು ಎಂದ ಅವರು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಸಮೀಪದ ಗ್ರಾಮ ಪಂಚಾಯತ್‌ಗೆ ತಲುಪಿಸಿದ್ದಲ್ಲಿ, ಅಲ್ಲಿನ ಸಿಬ್ಬಂದಿಗಳು ಅಹವಾಲುಗಳನ್ನು ಗ್ರಾಮ ಒನ್‌ನಲ್ಲಿ ಸ್ಕಾö್ಯನ್ ಮಾಡಿ, ಟೋಕನ್ ಅನ್ನು ನೀಡಲಿದ್ದಾರೆ. ಇದರಿಂದ ಸಭೆಗಳು ನಡೆಯುವ ದಿನದಂದು ಅಹವಾಲುಗಳನ್ನು ಸಲ್ಲಿಸಲು ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಲಿದೆ ಎಂದರು.

    ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಮೇವಿನ ಬೀಜದ ಕಿಟ್‌ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 47 ಅಹವಾಲುಗಳು ಸ್ವೀಕೃತವಾಗಿದ್ದವು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್ಪಿ ಸುಧಾಕರ್ ನಾಯಕ್, ಸಹಾಯಕ ಕಮಿಷನರ್ ಮಹೇಶ್ ಪಿ.ಎಸ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಸಹಾಯಕ ಆರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ವಿಭುದೆ, ಉಡುಪಿ ತಹಶೀಲ್ದಾರ್ ಗುರುರಾಜ್, ಇ.ಓ ವಿಜಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

    02/11/2026

    ವಿವಿಧ ಯೋಜನೆ: ಪ.ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    02/11/2026

    ಹಿರಿಯ ಭಾಗವತ ಹೆರಂಜಾಲು ಗೋಪಾಲ ಗಾಣಿಗರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    30/10/2026
    Leave A Reply Cancel Reply

    three + two =

    Call us

    Click Here

    Call us

    Call us

    Call us
    Highest Viewed Recently
    • ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ
    • ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ
    • ಹಂಗಾರಕಟ್ಟೆ ಕಲಾಕೇಂದ್ರದಲ್ಲಿ ಯಕ್ಷ ಸಪ್ತಾಹ ಕಾಳಗೋತ್ಸವ
    • ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ ‘ನವೋನ್ಮೇಶ’ ರಾಜ್ಯ ಮಟ್ಟದ ಫೆಸ್ಟ್ ಸಮಾರೋಪ: ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
    • ವಿವಿಧ ಯೋಜನೆ: ಪ.ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.