Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ
    ಉಡುಪಿ ಜಿಲ್ಲೆ

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರುಗಳಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

    Click Here

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ-66 ರ ಕೋಟ, ಪಡುಬಿದ್ರೆ, ತೆಕ್ಕಟ್ಟೆ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಸರಣಿ ಅಪಘಾತಗಳು ನಡೆಯುತ್ತಿರುವ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾವು-ನೋವುಗಳು ಉಂಟಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರು ಟೋಲ್ ಸಂಗ್ರಹವನ್ನು ಮಾಡುವುದೊಂದೆ ತಮ್ಮ ಗುರಿಯಾಗಿಸಿಕೊಂಡರೆ ಸಾಲದು. ಟೋಲ್ ವಸೂಲಿಯೊಂದಿಗೆ ನಿಯಮಾನುಸಾರ ರಾ. ಹೆದ್ದಾರಿಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರೊಂದಿಗೆ ಅಪಘಾತಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ರಾ.ಹೆ. ಯಲ್ಲಿ ನಿರ್ವಹಣೆಯ ಕೊರತೆಯಿಂದ ಅಪಘಾತಗಳು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

    ರಾಷ್ಟ್ರೀಯ ಹೆದ್ದಾರಿಯ ಟೋಲ್ ಗುತ್ತಿಗೆ ನೀಡುವ ಸಂದರ್ಭದಲ್ಲಿ ಗುತ್ತಿಗೆದಾರರು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ನಿಖರವಾಗಿ ತಿಳಿಸಿರುತ್ತಾರೆ. ಆದರೆ, ಜಿಲ್ಲೆಯಲ್ಲಿ ಸರಕಾರದ ಮಾರ್ಗಸೂಚಿಯನ್ವಯ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ. ಇದೇ ರೀತಿ ಮುಂದುವರೆದಲ್ಲಿ ಜನರು ಟೋಲ್‌ನ ಹಣವನ್ನು ಪಾವತಿಸದೇ ಇರುವ ಸಾಧ್ಯತೆಗಳು ಇರುತ್ತವೆ. ಈ ಬಗ್ಗೆ ಎಚ್ಚರವಹಿಸಬೇಕು ಎಂದರು.

    ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ 22 ಕಪ್ಪು ಚುಕ್ಕೆ (ಬ್ಲಾಕ್ ಸ್ಪಾಟ್ಸ್) ಪ್ರದೇಶಗಳನ್ನು ಗುರುತಿಸಲಾಗಿದ್ದು, ಸದರಿ ಸ್ಥಳಗಳು ಸೇರಿದಂತೆ ಪ್ರಮುಖ ಜಂಕ್ಷನ್‌ಗಳಲ್ಲಿ ದಾರಿದೀಪ, ಸೂಚನಾ ಫಲಕ, ಬ್ಯಾರಿಕೇಡ್, ಬ್ಲಿಂರ‍್ಸ್ ಅಳವಡಿಕೆ ಸೇರಿದಂತೆ ಮತ್ತಿತರ ವೈಜ್ಞಾನಿಕ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವುದರೊಂದಿಗೆ ಅಪಘಾತ ಮುಕ್ತ ವಲಯವನ್ನಾಗಿಸಲು ಮುಂದಾಗಬೇಕು ಎಂದು ರಾಷ್ಟ್ರೀಯ ಹೆದ್ದಾರಿಯ ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ನಗರದ ಅಂಬಾಗಿಲು ನಿಂದ ಎಲ್.ವಿ.ಟಿ ವರೆಗೆ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಈಗಾಗಲೇ ಮರಗಳ ತೆರವು, ಚರಂಡಿ ನಿರ್ಮಾಣ ಕೆಲಸಗಳು ಆರಂಭವಾಗಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಂಬಾಗಿಲು ಪ್ರಮುಖ ಜಂಕ್ಷನ್ ಆಗಿರುವ ಹಿನ್ನೆಲೆ, ವಾಹನಗಳ ದಟ್ಟಣೆಯಿಂದ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

    ಜಿಲ್ಲೆಯ ನಿಟ್ಟೂರು, ತೆಕ್ಕಟ್ಟೆ, ಕುಂಭಾಶಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಕೈಗೆತ್ತಿಕೊಂಡಿದ್ದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಈ ಭಾಗದಲ್ಲಿ ಅಪಘಾತಗಳು ಆಗಿಂದಾಗ್ಗೆ ಸಂಭವಿಸುತ್ತಿವೆ ಎಂದರು.

    ಕಲ್ಯಾಣಪುರ – ಸಂತೆಕಟ್ಟೆ ಅಂಡರ್‌ಪಾಸ್ ನಲ್ಲಿ ಅಳವಡಿಸಿರುವ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರುಗಳಿಗೆ ತೊಂದರೆ ಉಂಟಾಗುತ್ತಿದೆ. ಮೆಸ್ಕಾಂ ಹಾಗೂ ಎನ್.ಹೆಚ್.ಎ.ಐ ಅಧಿಕಾರಿಗಳು ಸಮನ್ವಯ ಹೊಂದಿ ರಾತ್ರಿ ವೇಳೆ ನಿರಂತರ ದೀಪಗಳು ಉರಿಯುತ್ತಿರುವಂತೆ ನೋಡಿಕೊಳ್ಳಬೇಕು ಎಂದರು. 

    ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳ 20ಕಿ.ಮೀ ವ್ಯಾಪ್ತಿಯ ಒಳಗೆ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳಿಗೆ ನವೆಂಬರ್ 01 ರಿಂದ ರಿಯಾಯಿತಿ ದರದಲ್ಲಿ ಸ್ಥಳೀಯ ಫಾಸ್ಟ್ ಟ್ಯಾಗ್ ನೀಡುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರು ಅಗತ್ಯ ಕ್ರಮವನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

    ತೆಂಕ ಎರ್ಮಾಳಿನಲ್ಲಿ ನಿರ್ಮಾಣವಾಗುತ್ತಿರುವ ಸ್ಕೆöÊವಾಕ್ ಕಾಮಗಾರಿಗೆ ಸ್ಥಳೀಯರಿಂದ ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಅಂಬಾಗಿಲು, ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಸೇರಿದಂತೆ ಇತರೆ ಜನದಟ್ಟಣೆ ಇರುವ ಸ್ಥಳಗಳಲ್ಲಿ ಸ್ಕೆöÊವಾಕ್ ನಿರ್ಮಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು, ಕೇರಳ ಮಾದರಿ ರೀತಿಯಲ್ಲಿಯೇ ಕುಂದಾಪುರದಿಂದ ತಲಪಾಡಿಯವರೆಗೆ ಅಪಘಾತ ರಹಿತ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಡಿ.ಪಿ.ಆರ್ ಆಗುತ್ತಿದೆ ಎಂದರು.

    ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಗಳು ಇಲ್ಲದಿದ್ದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ಜನರು ವ್ಯಕ್ತಪಡಿಸುತ್ತಾರೆ.  ಪಡುಬಿದ್ರೆಯಲ್ಲಿ ವಾಹನಗಳ ಹೆಚ್ಚಿನ ಸಂಚಾರದಿಂದ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವು-ನೋವಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಸ್ಥಳದಲ್ಲಿ ಮೇಲ್ಸೇತುವೆ ಅಥವಾ ಅಂಡರ್‌ಪಾಸ್ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತ ಪ್ರಕರಣಗಳನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು.

    ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಬಲೈಪಾದೆಯಿಂದ ಕೊರಂಗ್ರಪಾಡಿವರೆಗಿನ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಬೇಕು. ಅಪಘಾತವಾಗುವಂತಹ ವಲಯಗಳಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ರಸ್ತೆ ಸುರಕ್ಷತಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

    ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮೀಷನರ್ ಮಹೇಶ್ ಪಿ.ಎಸ್, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಜ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಗುತ್ತಿಗೆದಾರರುಗಳು, ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿವಿಧ ಯೋಜನೆ: ಪ.ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    02/11/2026

    ಜನಸಾಮಾನ್ಯರ ಕುಂದು ಕೊರತೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಒತ್ತು ನೀಡಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

    02/11/2026

    ಹಿರಿಯ ಭಾಗವತ ಹೆರಂಜಾಲು ಗೋಪಾಲ ಗಾಣಿಗರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    30/10/2026
    Leave A Reply Cancel Reply

    4 × three =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ
    • ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಅದ್ಧೂರಿಯಾಗಿ ನಡೆದ ವಾರ್ಷಿಕ ಕ್ರೀಡಾಕೂಟ – ʼವಿಕ್ಟರಿ 2026ʼ
    • ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ
    • ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
    • ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.