ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು (ಯು.ಪಿ.ಎಂ.ಸಿ) ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದಿಗ್ವಿಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರು.
ತಂಡದ ಈ ಅಮೋಘ ಗೆಲುವು ಕಾಲೇಜಿನ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಗೌರವದ ಗರಿಯನ್ನು ತಂದುಕೊಟ್ಟಿದೆ. ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.












