Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.

    Click Here

    Click Here

    Call us

    Click Here

    ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ, ಪ್ರಶಸ್ತಿಗಳನ್ನು ಸ್ಥಾಪಿಸಿವೆ.

    ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ಪರಿಣಾಮಕಾರಿ ವರದಿಗೆ “ಅಭಿಮನ್ಯು ಪ್ರಶಸ್ತಿ”, ಬೆಂಗಳೂರಿನ ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ”, ಹಾಗೂ ಹಿರಿಯ ಪತ್ರಕರ್ತರ ಹೆಸರಿನ ಸ್ಥಾಪಿಸಲಾದ ಕೃಷಿವಲಯದಲ್ಲಿ ಅತ್ಯುತ್ತಮ ವರದಿ/ಅಂಕಣ/ಲೇಖನ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ” ಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ ನಗದು ಬಹುಮಾನ ಒಳಗೊಂಡಿವೆ.

    ಈ ಪ್ರಶಸ್ತಿಗಳಿಗೆ ಆಸಕ್ತ ಪತ್ರಕರ್ತರು 01-01-2026 ರಿಂದ 30-10-2026ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ-ವರದಿಯನ್ನು ಕಳುಹಿಸಬಹುದು.

    ಕನ್ನಡ ದೈನಿಕ-ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.

    Click here

    Click here

    Click here

    Call us

    Call us

    ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ-2026’, ‘ಮೈಸೂರು ದಿಗಂತ ಪ್ರಶಸ್ತಿ-2026’, “ಅಭಿಮನ್ಯು ಪ್ರಶಸ್ತಿ-2026* “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ-2026” ಹಾಗೂ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ-2026” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ 21-11-2026ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಪ್ರಶಸ್ತಿಗಳ ಆಯ್ಕೆ ಸಂಬಂಧ ಅಕಾಡೆಮಿಯು ಕೈಗೊಳ್ಳುವಾ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

    02/11/2026

    ವಿವಿಧ ಯೋಜನೆ: ಪ.ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    02/11/2026

    ಜನಸಾಮಾನ್ಯರ ಕುಂದು ಕೊರತೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಒತ್ತು ನೀಡಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

    02/11/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ
    • ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    • ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ
    • ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಅದ್ಧೂರಿಯಾಗಿ ನಡೆದ ವಾರ್ಷಿಕ ಕ್ರೀಡಾಕೂಟ – ʼವಿಕ್ಟರಿ 2026ʼ
    • ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.