Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ
    ಕ್ಯಾಂಪಸ್ ಕಾರ್ನರ್

    ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕಲಾವಿದರು ಇನ್ನಷ್ಟು  ಸಾಧನೆಯನ್ನು ಮಾಡುವುದಕ್ಕೆ  ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಈ ಪುರಸ್ಕಾರವನ್ನು ನೀಡಿ ಗೌರವಿಸುವುದು ಎಂದು ಸ್ವಪ್ನ ಶಿಲ್ಪಿ ಶಿಕ್ಷಣ ತಜ್ಞ ಡಾ. ಹೆಚ್.ಶಾಂತಾರಾಮ್ ಹೇಳಿದರು.

    Click Here

    Click Here

    Call us

    Click Here

    ಅವರು ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ನಡೆದ “51ನೇ ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ” ಕಾರ್ಯಕ್ರಮದಲ್ಲಿ ಈ ವರ್ಷದ ಡಾ.ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ-2026 ನ್ನು ಮಹಾಬಲೇಶ್ವರ ಭಟ್ಟ ಕ್ಯಾದಗಿ ಅವರಿಗೆ ಪುರಸ್ಕರಿಸಿ ಮಾತನಾಡಿದರು.

    ಪ್ರಶಸ್ತಿ ಪುರಸ್ಕಾರಗಳು  ಕಲಾವಿದನಲ್ಲಿ ಕಲೆಯನ್ನು ಉಳಿಸಿ ಬೆಳೆಸುವ ಮತ್ತು ಅದನ್ನು ಮುಂದಿನ ಪೀಳಿಗೆಗೆ ಹಂಚುವ ಗುರುತರ ಜವಾಬ್ದಾರಿಯನ್ನು ಕೊಡುತ್ತದೆ. ಅಂತೆಯೇ ಶ್ರೇಷ್ಠ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಯಕ್ಷಗಾನ ಪುರಸ್ಕಾರವನ್ನು ಆರಂಭಿಸಿದ್ದೇವೆ. ಉದಯೋನ್ಮುಖ ಕಲಾವಿದರನ್ನು ಗುರುತಿಸಿ ಅವರ ಸಾಧನೆಯನ್ನು ಬೆಂಬಲಿಸಿ ಪ್ರೋತ್ಸಾಹಿಸುವ  ಮೂಲಕ ಈ ಕಲೆಯನ್ನು ಬೆಳೆಸುವುದಾಗಿದೆ. ಈ ಯಕ್ಷಗಾನ ಪುರಸ್ಕಾರವನ್ನು ಪಡೆದ ಕಲಾವಿದರಿಗೂ ಸಹ ಯಕ್ಷಗಾನ ಕಲೆಯನ್ನು ಉಳಿಸುವ ಜವಾಬ್ದಾರಿ ಹೆಚ್ಚುತ್ತದೆ ಎಂದು ಹೇಳಿದರು.

    ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದ ಮಹಾಬಲೇಶ್ವರ ಭಟ್ಟ ಕ್ಯಾದಗಿ ಅವರು ಮನಸು ತುಂಬಿ ಬಂದಿದೆ. ಕಲಾವಿದರ ಕಲಾ ಪೋಷಣೆಗೆ ಈ ಪುರಸ್ಕಾರ ನೆರವಾಗುತ್ತದೆ. ಹಾಗೆ ಕಲೆಯನ್ನು ಬೆಳೆಸುವಲ್ಲಿನ ಜವಾಬ್ದಾರಿ ಹೆಚ್ಚಿಸಿದೆ ಎಂದು ಹೇಳಿದರು.

    ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿ ಡಾ. ಶ್ರೀಧರ ರಂಗನಾಥ ಪೈ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ. ಶಾಂತಾರಾಮ್ ಪ್ರಭು ವಹಿಸಿದ್ದರು. “ಯಕ್ಷರಂಗ” ಯಕ್ಷಗಾನ ಕೇಂದ್ರದ ಅಧ್ಯಕ್ಷರಾದ ಕಿಶನ್ ಹೆಗ್ಡೆ ಪಳ್ಳಿ  ಅಭಿನಂದನಾ ಮಾತುಗಳನ್ನಾಡಿದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ದೇವದಾಸ ಕಾಮತ್, ಆಡಳಿತ ಮಂಡಳಿಯ ಕಾರ್ಯದರ್ಶಿ ಯು ಎಸ್ ಶೆಣೈ ಉಪಸ್ಥಿತರಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್. ವಂದಿಸಿದರು. ಆವರ್ತ ಯಕ್ಷಗಾನ ವೇದಿಕೆಯ ಸಂಯೋಜಕ ಶಶಾಂಕ್ ಪಟೇಲ್, ಕೆಳಮನೆ ಸ್ವಾಗತಿಸಿದರು. ಉಪನ್ಯಾಸಕಿ ಶೃತಿ ಕಾಶಿ ಅಭಿನಂದನಾ ಪತ್ರ ವಾಚಿಸಿದರು. ರೇಡಿಯೋ ಕುಂದಾಪ್ರ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ

    02/11/2026

    ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ

    02/11/2026

    ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

    02/11/2026
    Leave A Reply Cancel Reply

    twenty − 18 =

    Call us

    Click Here

    Call us

    Call us

    Call us
    Highest Viewed Recently
    • ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ
    • ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಆರ್ಯ – 2026 ವಲಯ ಸಮ್ಮೇಳನದಲ್ಲಿ ಪ್ರಶಸ್ತಿಗಳ ಗರಿ
    • ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ
    • ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.