Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

    Click Here

    Click Here

    Call us

    Click Here

    ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸು, ಅಂಗಾಂಶ ಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂತನ್, ಡ್ರಾö್ಯಗನ್ ಫೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ.40 ಸಹಾಯಧನ, ಸಣ್ಣ ಸಸ್ಯಾಗಾರಗಳ/ ನರ್ಸರಿಗಳ ಸ್ಥಾಪನೆಗೆ ಶೇ.50 ರ ದರದಲ್ಲಿ (ಗರಿಷ್ಠ ರೂ. 10 ಲಕ್ಷಗಳು) ಸಹಾಯಧನ, ಸಸ್ಯಾಗಾರಗಳ ಉನ್ನತೀಕರಣಕ್ಕಾಗಿ ಶೇ.50 ರಂತೆ ಪ್ರತಿ ಹೆಕ್ಟೇರಿಗೆ ರೂ. 2 ಲಕ್ಷಗಳಂತೆ 2 ಹೆಕ್ಟೇರಿಗೆ ರೂ.4 ಲಕ್ಷಗಳ ಸಹಾಯಧನ, ಅಂಗಾAಶ ಕೃಷಿ ಘಟಕ ಸ್ಥಾಪನೆಗೆ ಶೇ.40 ರಂತೆ (ಗರಿಷ್ಠ ರೂ. 100 ಲಕ್ಷಗಳು) ಸಹಾಯಧನ, ನೀರು ಸಂಗ್ರಹಣ ಘಟಕ (28*27*3 ಮೀ.ಅಳತೆ) ನಿರ್ಮಾಣಕ್ಕೆ ಗರಿಷ್ಠ 0.90 ಲಕ್ಷ ರೂಪಾಯಿಗಳ ಸಹಾಯಧನ, ಎರೆಹುಳ ಘಟಕ ನಿರ್ಮಾಣಕ್ಕೆ ಗರಿಷ್ಠ 0.50 ಲಕ್ಷ ಸಹಾಯಧನ ಲಭ್ಯವಿದೆ.

    ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಪ್ರತಿ ಹೆಕ್ಟೇರಿಗೆ ರೂ.1500, ವಿವಿಧ ಜಾತಿಯ ಅಣಬೆ ಉತ್ಪಾದನೆಗಾಗಿ ಅಣಬೆ ಉತ್ಪಾದನಾ ಘಟಕ, ಸ್ಪಾನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಶೇ.40 ರ ಗರಿಷ್ಠ 8 ರಿಂದ 12 ಲಕ್ಷ ರೂ.ಗಳ ಸಹಾಯಧನ, ರೈತರ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ಸಂಸ್ಥೆಗಳು ಸ್ಥಾಪಿಸುವ ಗ್ರಾಮೀಣ ಮಾರುಕಟ್ಟೆ/ ರೈತ ಸಂತೆ/ ನೇರ ಮಾರುಕಟ್ಟೆ ಸ್ಥಾಪಿಸಲು ಶೇ.40 ರ ಗರಿಷ್ಠ ರೂ.10 ಲಕ್ಷಗಳ ಸಾಲ ಆಧಾರಿತ ಸಹಾಯಧನಕ್ಕೆ ಅವಕಾಶವಿರುತ್ತದೆ.

    ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ.35ರ ದರದಲ್ಲಿ (ಗರಿಷ್ಠ 12.25 ಲಕ್ಷಗಳವರೆಗೆ) ಸಹಾಯಧನ, ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಗರಿಷ್ಠ 2.40 ಲಕ್ಷಗಳವರೆಗೆ ಶೇ.50 ಸಹಾಯಧನ ಲಭ್ಯವಿದೆ.

    ರೈತರ ಯಾಂತ್ರೀಕರಣ ಅವಶ್ಯಕತೆಗೆ 20 ಹೆಚ್.ಪಿ ಗಿಂತ ಕಡಿಮೆ ಸಾಮರ್ಥ್ಯದ ಟ್ರ‍್ಯಾಕ್ಟರ್ ಖರೀದಿಗೆ ಗರಿಷ್ಠ 0.75 ಲಕ್ಷ ರೂ.ವರೆಗೆ ಸಹಾಯಧನ, ತೋಟಗಾರಿಕೆ ಬೆಳೆಗಳಿಗೆ ಬಳಸುವ ಪ್ಲಾಸ್ಟಿಕ್ ಹೊದಿಕೆ/ಮಲ್ಚಿಂಗ್ ಗಳಿಗೆ ಶೇ.50 ರ ದರದಲ್ಲಿ, ಪ್ರತಿ ಹೆಕ್ಟೇರ್‌ಗೆ ರೂ. 20,000 ಸಹಾಯಧನ, ತೋಟಗಳಲ್ಲಿ ಕಳೆ ನಿಯಂತ್ರಣಕ್ಕಾಗಿ ವೀಡ್ ಮ್ಯಾಟ್ ಬಳಕೆಗೆ ಶೇ.50 ರ ದರದಲ್ಲಿ ರೂ. 25,000 ಪ್ರತಿ ಹೆಕ್ಟೇರ್‌ಗೆ ಸಹಾಯಧನ ಲಭ್ಯವಿದೆ.

    Click here

    Click here

    Click here

    Call us

    Call us

    ಕೃಷಿ ಯಾಂತ್ರೀಕರಣ ಉಪ ಅಭಿಯಾನ ಯೋಜನೆಗಳಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ.50 ರ ಸಹಾಯಧನ, ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ಶೇ.90 ರಷ್ಟು ಸಹಾಯಧನ ಲಭ್ಯವಿದ್ದು ಕಛೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್‌ಗಳ ಮೂಲಕ ರೈತರು ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಬಹುದಾಗಿದೆ.

    ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕು ಅರಣ್ಯವಾಸಿ ಹಕ್ಕು ಪತ್ರ ಪಡೆದ ಧಾರ್ತಿ ಆಭಾ ಫಲಾನುಭವಿಗಳಿಗೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ನಿಗದಿತ ಎಲ್ಲಾ ಯೋಜನೆಗಳಲ್ಲಿ, ಶೇ. 90ರ ಸಹಾಯಧನ ಪಡೆಯಲು ಅವಕಾಶವಿದ್ದು ಅರಣ್ಯವಾಸಿ ಹಕ್ಕು ಪತ್ರ ಇರುವವರು ಪ್ರಯೋಜನ ಪಡೆಯಬಹುದಾಗಿದೆ.

    ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ಫಾರ್ಮ್ ಗೇಟ್ ಸಹಾಯಧನಕ್ಕೆ ಅವಕಾಶವಿದ್ದು, ರೂ. 1 ಲಕ್ಷ ಸಹಾಯಧನ ಪಡೆಯಲು ಅವಕಾಶವಿದೆ. ಸೋಲಾರ್ ಪಂಪ್‌ಸೆಟ್‌ಗಳ ಖರೀದಿಗೆ ಇಲಾಖೆಯಿಂದ ಶೇ. 50 ರ ಸಹಾಯಧನ, 3 ಹೆಚ್.ಪಿ ಪಂಪ್‌ಸೆಟ್‌ಗೆ ಒಟ್ಟು ವೆಚ್ಚ 2 ಲಕ್ಷ ಗಳಿದ್ದು, ರೂ. 1 ಲಕ್ಷ ಸಹಾಯಧನ ಹಾಗೂ 5 ಹೆಚ್.ಪಿ ಮೇಲ್ಪಟ್ಟ ಪಂಪ್‌ಸೆಟ್‌ಗೆ ಒಟ್ಟು ವೆಚ್ಚ 3 ಲಕ್ಷ ಗಳಿಗೆ ರೂ. 1.50 ಲಕ್ಷ ಸಹಾಯಧನ ಲಭ್ಯವಿದೆ.

    ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಅಡಿ ಅಡಿಕೆ, ತೆಂಗು, ಕಾಳುಮೆಣಸು, ರಾಂಬೂತಾನ್ ಮುಂತಾದ ಬೆಳೆಗಳಿಗೆ ತೋಟ ನಿರ್ಮಾಣ ಮಾಡಬಹುದಾಗಿದೆ.

    ಈ ಎಲ್ಲಾ ಯೋಜನೆಗಳ ಪ್ರಯೋಜನ ಪಡೆಯಲು ಆಸಕ್ತ ಅರ್ಹ ರೈತರು ಪ್ರಥಮ ಹಂತದಲ್ಲಿ ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

    02/11/2026

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

    02/11/2026

    ವಿವಿಧ ಯೋಜನೆ: ಪ.ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    02/11/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ನ.05ರಂದು ಹೆಮ್ಮಾಡಿ ಜನತಾ ಪಿಯ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2026
    • ಉಪ್ಪುಂದ ಶ್ರೀ ದುರ್ಗಾ ಟೈಗರ್ಸ್ ಸಂಯೋಜನೆಯಲ್ಲಿ ಹುಲಿ ಪರ್ವ 2026 ಸಂಪನ್ನ
    • ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ
    • ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ
    • ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.