Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಐ ಯುಗದಲ್ಲಿ ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ ಅಗತ್ಯ: ಸುಯೋಗ್ ಶೆಟ್ಟಿ
    alvas nudisiri

    ಎಐ ಯುಗದಲ್ಲಿ ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ ಅಗತ್ಯ: ಸುಯೋಗ್ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಕೃತಕ ಬುದ್ಧಿಮತ್ತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು ಉದ್ಯಮ ಹಾಗೂ ನಿರ್ವಹಣಾ ಕ್ಷೇತ್ರವನ್ನು ವೇಗವಾಗಿ ಪರಿವರ್ತಿಸುತ್ತಿದ್ದು, ವಿದ್ಯಾರ್ಥಿಗಳು ಬದಲಾವಣೆಗಳನ್ನು ಧನಾತ್ಮಕವಾಗಿ ಸ್ವೀಕರಿಸಬೇಕು ಎಂದು ಉದ್ಯಮಿ ಹಾಗೂ ಸ್ಟಾçಟೆಜಿಕ್ ಅಡ್ವೈಸರ್ ಸುಯೋಗ್ ಶೆಟ್ಟಿ ಹೇಳಿದರು.

    Click Here

    Click Here

    Call us

    Click Here

    ಆಳ್ವಾಸ್ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ವಿಭಾಗದ 2026–28ನೇ ಸಾಲಿನ ಎಂಬಿಎ ವಿದ್ಯಾರ್ಥಿಗಳಿಗಾಗಿ ಸೋಮವಾರ ಆಯೋಜಿಸಿದ್ದ ‘ಎಂಬಿಎ ಆಗಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವ್ಯವಹಾರ ಕ್ಷೇತ್ರದಲ್ಲಿ ಯಶಸ್ಸಿನಷ್ಟೇ ವೈಫಲ್ಯಗಳಿಂದ ಕಲಿಯುವ ಸಾಮರ್ಥ್ಯವೂ ಮಹತ್ವದ್ದಾಗಿದೆ. ಉದ್ಯಮ ನಡೆಸುವಾಗ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸ್ಥೈರ್ಯ ಯಶಸ್ಸಿಗೆ ಅಗತ್ಯವಾದ ಪ್ರಮುಖ ಗುಣವಾಗಿದೆ.  ಮುಂದಿನ ಐದಾರು ವರ್ಷಗಳ ವೃತ್ತಿಜೀವನವನ್ನು ವಿದ್ಯಾರ್ಥಿ ನೆಲೆಯಿಂದಲೇ ಯೋಚಿಸಬೇಕು.  ನೀವು ಆಯ್ಕೆ ಮಾಡುವ ಕ್ಷೇತ್ರಗಳ ಮೇಲೆ ಎಐ ಮತ್ತು ಹೊಸ ನಿರ್ವಹಣಾ ತಂತ್ರಜ್ಞಾನಗಳು ಬೀರುವ ಪರಿಣಾಮವನ್ನು ಅರ್ಥಮಾಡಿಕೊಂಡು, ಅದಕ್ಕೆ ಅಗತ್ಯವಾದ ಕೌಶಲಗಳನ್ನು ಇಂದೇ ಬೆಳೆಸಿಕೊಳ್ಳಿ ಎಂದರು.

    ವಿಭಾಗದ ಹಿರಿಯ ವಿದ್ಯಾರ್ಥಿನಿ ಮೇಘನಾ ವೆಂಕಟೇಶ್ ಮಾತನಾಡಿ, ಅವಕಾಶಗಳನ್ನು ಸೃಷ್ಟಿಸಿಕೊಳ್ಳಲು ವಿದ್ಯಾರ್ಥಿಗಳು ಬಲವಾದ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮಕ್ಕೆ ಪರ್ಯಾಯವಿಲ್ಲ. ಫಲಿತಾಂಶದ ಬಗ್ಗೆ ಅತಿಯಾದ ಚಿಂತನೆ ನಡೆಸುವುದಕ್ಕಿಂತ ಪ್ರಕ್ರಿಯೆಯ ಮೇಲೆ ಗಮನಹರಿಸಬೇಕು. ಸಣ್ಣ ಹೆಜ್ಜೆಯಿಂದ ಆರಂಭಿಸಿದರೂ, ಆರಂಭಿಸಿದ ಕೆಲಸವನ್ನು ಪೂರ್ಣಗೊಳಿಸುವ ಗುಣ ಯಶಸ್ಸಿಗೆ ಅತ್ಯಗತ್ಯ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪರೀಕ್ಷಾ ಕೇಂದ್ರಿತ ಶಿಕ್ಷಣಕ್ಕೆ ಸೀಮಿತರಾಗದೆ, ಸಂಸ್ಥೆಯಲ್ಲಿ ದೊರೆಯುವ ವೈವಿಧ್ಯಮಯ ಅವಕಾಶಗಳನ್ನು ಅನ್ವೇಷಿಸಬೇಕು.  ಜೀವನದಲ್ಲಿ ಶಿಸ್ತು ಅತ್ಯಂತ ಮಹತ್ವದ್ದಾಗಿದ್ದು,  ಜ್ಞಾನ ಮತ್ತು ವೃತ್ತಿಪರ ಕೌಶಲಗಳ ಜೊತೆಗೆ ವಿದ್ಯಾರ್ಥಿಗಳು ತಮ್ಮ ಸಮಾಜದೊಂದಿಗೆ ಅನ್ಯೋನ್ಯವಾಗಿ ಬದುಕುವ ಕಲೆಯನ್ನು ಕರಗತಗೊಳಿಸಿಕೊಳ್ಳಬೇಕು ಎಂದರು.
    ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚರ‍್ಯ ಡಾ ಪೀಟರ್ ಫೆರ್ನಾಂಡೀಸ್ ಮಾತನಾಡಿದರು.

    ಎಂಬಿಎ ವಿಭಾಗದ ಮುಖ್ಯಸ್ಥೆ ಪ್ರಿಯಾ ಸಿಕ್ವೇರಾ ಸ್ವಾಗತಿಸಿ, ಡಾ. ಕ್ಯಾಥ್ರಿನ್ ಡೇವಿಡ್ ಕಾರ್ಯಕ್ರಮ ನಿರೂಪಿಸಿ, ಡಾ. ವಿಷ್ಣುಮೂರ್ತಿ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನ.05ರಂದು ಹೆಮ್ಮಾಡಿ ಜನತಾ ಪಿಯ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2026

    02/11/2026

    ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ

    02/11/2026

    ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ

    02/11/2026
    Leave A Reply Cancel Reply

    twenty − thirteen =

    Call us

    Click Here

    Call us

    Call us

    Call us
    Highest Viewed Recently
    • ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
    • ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ
    • ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್
    • ಎಐ ಯುಗದಲ್ಲಿ ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ ಅಗತ್ಯ: ಸುಯೋಗ್ ಶೆಟ್ಟಿ
    • ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.