Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್
    ಉಡುಪಿ ಜಿಲ್ಲೆ

    ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

    Updated:03/11/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸರಕಾರಿ ಕಚೇರಿಗಳಿಗೆ ಬಂದಾಗ ಅದಕ್ಕೆ ಸ್ಪಂದಿಸಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವುದಿಲ್ಲ ಸರಿಯಲ್ಲ. ಒಂದೊಮ್ಮೆ ನಿರ್ಲಕ್ಷ್ಯ ವಹಿಸುವುದು ಕಂಡು ಬಂದಲ್ಲಿ ಅವರು ಮೇಲೆ ಸೂಕ್ತ ಕ್ರಮ ಕೈಗೊಳ್ಳಗುವುದು ಎಂದು ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ತಿಳಿಸಿದರು.

    Click Here

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಗೆ 7 ಬಾರಿ ಭೇಟಿಯನ್ನು ನೀಡಿದ್ದೇನೆ. ಸರಕಾರಿ ಕಚೇರಿಗಳ ಕಾರ್ಯ ವೈಖರಿಗಳನ್ನು ಸೂಕ್ಷö್ಮವಾಗಿ ಗಮನಿಸುತ್ತಿದ್ದೇನೆ. ಸಾರ್ವಜನಿಕರು  ತಮ್ಮ ಕೆಲಸದ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡಿದಾಗ ನಿಯಮಾನುಸಾರ ನಿಮ್ಮ ಹಂತದಲ್ಲಿಯೇ  ಮಾಡಿಕೊಡಲು ಸಾಧ್ಯವಿದ್ದಲ್ಲಿ ಕೂಡಲೇ ಸ್ಪಂದಿಸಬೇಕು. ಒಂದೊಮ್ಮೆ  ಸರಕಾರದ ಹಂತದಲ್ಲಿ  ಆಗುವಂತದಿದ್ದ÷ಲ್ಲಿ ಮೇಲಾಧಿಕಾರಿ ಅಥವಾ ಜನಪ್ರತಿನಿಧಿಗಳ ಗಮನಕ್ಕೆ ತಂದಲ್ಲಿ ನಾವು ಅದಕ್ಕೆ ಸ್ಪಂದಿಸುತ್ತೇವೆ. ಒಂದಕ್ಕೂ ಹೆಚ್ಚು ಇಲಾಖೆಗಳಲ್ಲಿ ಕೆಲಸವಾಗಬೇಕಿದ್ದಲ್ಲಿ ಸಮನ್ವಯದೊಂದಿಗೆ ಕೆಲಸ ಕಾರ್ಯಗಳನ್ನು ಮಾಡಬೇಕು. ಒಬ್ಬರು ಇನ್ನೊಬ್ಬರ ಮೇಲೆ ಹೇಳುವುದು ಸರಿಯಲ್ಲ ಎಂದರು.

    ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ವಾಡಿಕೆ ಮಳೆಯ ಕೊರತೆ ಉಂಟಾಗಿದೆ. ಅಂತರ್ಜಲ ಮಟ್ಟವು ಕುಸಿಯುವ ಸಾಧ್ಯತೆಗಳಿದ್ದು, ಬೇಸಿಗೆಯ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇವೆ. ಈ ಬಗ್ಗೆ ಈಗಿನಿಂದಲೇ ಎಚ್ಚರ ವಹಿಸಬೇಕು. ಕಿಂಡಿ ಆಣೆಕಟ್ಟುಗಳಿಗೆ ಹಲಗೆಯನ್ನು ಅಳವಡಿಸಬೇಕು. ಪ್ರಸ್ತುತ ಮಳೆ ಬರುತ್ತಿರುವ ಬಗ್ಗೆಯೂ ಎಚ್ಚರದಿಂದಿರಬೇಕು ಎಂದರು.

    ಕಂದಾಯ ಇಲಾಖೆಯಲ್ಲಿ ನಮೂನೆ 53, 54 ಹಾಗೂ 94 ಸಿ ನಲ್ಲಿ ಸಾರ್ವಜನಿಕರು ಜಮೀನು ಹಾಗೂ ನಿವೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದು, ಕಳೆದ ಎರಡು ವರ್ಷಗಳಿಂದ ಇವುಗಳ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಅರ್ಜಿಗಳು ಪೋರ್ಟಲ್‌ಗಳಲ್ಲಿ ಸರಿಯಾಗಿ ನಮೂದಾಗದೇ ಇರುವುದು ಸಹ ಅವುಗಳ ವಿಲೇವಾರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು.  ಅರ್ಹ ಇರುವ ಅರ್ಜಿಗಳನ್ನು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಸರಕಾರದ ಮಟ್ಟದಲ್ಲಿ ಆಗುವುದಿದ್ದಲ್ಲಿ ಈ ಬಗ್ಗೆ ಉನ್ನತ ವ್ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.  

    ತುರ್ತು ಚಿಕಿತ್ಸೆ ನೀಡಲು ಅನುಕೂಲವಾಗುವ ಉದ್ದೇಶದಿಂದ 108 ಆಂಬುಲೆನ್ಸ್ ಗಳನ್ನು ನೀಡಲಾಗಿದೆ ಇವುಗಳ ನಿರ್ವಹಣೆಗೆ ಸಿಬ್ಬಂದಿಗಳ ಕೊರತೆ ಇರುವ್ಯದು ಸರಿಯಷ್ಟೇ. ಈ ಬಗ್ಗೆ ರಾಜ್ಯ ವ್ಯಾಪ್ತಿಯಲ್ಲಿ ಈ ಸಮಸ್ಯೆ ಇವೆ. ಇವುಗಳನ್ನು ಬಗೆಹರಿಸಲಾಗುವ್ಯದು. ಪ್ರಸ್ತುತ ಇರುವ ಆಂಬುಲೆನ್ಸ್ಗಳ ಸಿಬ್ಬಂದಿಗಳನ್ನು ಬಳಸಿಕೊಂಡು ಜನರಿಗೆ ಉತ್ತಮ ಸೇವೆಯನ್ನು ನೀಡಲು ಯೋಜನೆಯನ್ನು ರೂಪಿಸಿ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಡೀಮ್ಡ್ ಫಾರೆಸ್ಟ್ ಸರ್ವೇ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಬೇಕು. ಕುಡಿಯುವ ನೀರು ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆಯ ಅನುಮತಿಗಾಗಿ ಕಳುಹಿಸಿರುವ ಪ್ರಸ್ತಾವನೆಯನ್ನು ಆದ್ಯತೆಯ ಮೇಲೆ ಅನುಮತಿ ನೀಡಬೇಕು. ಈ ಸಂಬAಧ ರಾಜ್ಯ ಮಟ್ಟದಲ್ಲಿ ಬಗೆಹರಿಸುವಂತಹ ಪ್ರಸ್ತಾವನೆಗಳ ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದರು.

    ಶಾಲೆಗಳ ದುರಸ್ಥಿ ಕಾಮಗಾರಿಗಳನ್ನು ಪೂರ್ಣಪ್ರಮಾಣದಲ್ಲಿ ಕೈಗೊಳ್ಳಬೇಕು. ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳ ವಿತರಣೆ ಕಾಲಕಾಲಕ್ಕೆ ಆಗಬೇಕು. ಗುಣಮಟ್ಟದ ಶೂಗಳ ವಿತರಣೆಗೆ ಕ್ರಮವಹಿಸಬೇಕು. ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಲ್ಲಿ ಪ್ರತಿಶತಃ ನೂರರಷ್ಟು ಹಾಜರಾತಿ ಇರುವಂತೆ ನೋಡಿಕೊಳ್ಳುವುದರ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದರು.

    ವಾರಾಹಿ ಯೋಜನೆಯಡಿ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಕಾಮಗಾರಿಯನ್ನು 326 ಕೋಟಿ ವೆಚ್ಚದಲ್ಲಿ 18 ತಿಂಗಳ ಒಳಗಾಗಿ ಕೈಗೊಳ್ಳಬೇಕಿತ್ತು. ಆದರೆ ಈಗಾಗಲೆ 200 ಕೋಟಿ ರೂ. ಖರ್ಚನ್ನು ಮಾಡಿ, ಕಾಮಗಾರಿಗಳನ್ನು ಕೈಗೊಂಡು 8 ವರ್ಷ ಪೂರೈಸಿದರೂ ರೈತರಿಗೆ ನೀರಾವರಿ ಸೌಲಭ್ಯ ತಲುಪಿಲ್ಲ. ಈ ಯೋಜನೆಯು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುತ್ತಿದೆ ಎಂಬ ತಾಂತ್ರಿಕ ಕಾರಣ ಕೇಳಿ ಬರುತ್ತಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಎಂದರು.

    ಹೆಜಮಾಡಿ ಬಂದರು ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಮುದ್ರ ಕೊರತೆ ಕಾಮಗಾರಿಯನ್ನು ಕೈಗೊಳ್ಳಲು ಪ್ರಸ್ತುತ ಇರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಮೀನುಗಾರಿಕಾ ಬಂದರಿನಲ್ಲಿ ಹೂಳೆತ್ತುವ ಕಾಮಗಾರಿಗಳು ಗುಣಮಟ್ಟದಲ್ಲಿ ಆಗಬೇಕು ಎಂದರು.

    ಜನಸಾಮಾನ್ಯರು ಮನೆ ನಿರ್ಮಾಣ ಮಾಡಲು ಮರಳು ಸರಿಯಾಗಿ ಸಿಗುತ್ತಿಲ್ಲ ಹಾಗೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿರುವ ಬಗ್ಗೆ ಕೇಳಿ ಬರುತ್ತಿದೆ. ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳು ಗಮನಹರಿಸಿ, ಸಮಸ್ಯೆ ಪರಿಹರಿಸಲು ಮುಂದಾಗಬೇಕು. ಡಿ.ಎಂ.ಎಫ್ ನಿಧಿ ಹಂಚಿಕೆಗೆ ಕ್ರಮವಹಿಸಬೇಕು ಎಂದ ಅವರು, ರಾಜಸ್ವ ಸಂಗ್ರಹಣೆ ಹಣವನ್ನು ಹೆಚ್ಚಿಸಿರುವ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.

    ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ನಳ ನೀರು ಸೌಲಭ್ಯ ಕಲ್ಪಿಸುವ ಜೆ.ಜೆ.ಎಂ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದರೂ ಸಹ ನಿರಂತರ ನೀರಿನ ವ್ಯವಸ್ಥೆ ಆಗುತ್ತಿಲ್ಲ. ನೀರಿನ ಮೂಲಗಳ ಲಭ್ಯತೆಯನ್ನು ಆಧರಿಸಿ, ಕುಡಿಯುವ ನೀರು ಸರಬರಾಜು ಮಾಡಲು ಮುಂದಾಗಬೇಕು. ನಿರಂತರವಾಗಿ ಕುಡಿಯುವ ನೀರಿನ ಸ್ಯಾಂಪಲ್‌ಗಳ ಪರೀಕ್ಷೆಯನ್ನು ಕೈಗೊಳ್ಳಬೇಕು ಎಂದರು.

    ಅಂಗನವಾಡಿಯ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ಸೌಲಭ್ಯಗಳನ್ನು ವಿತರಿಸಲು ಕ್ರಮವಹಿಸಬೇಕು. ಮಕ್ಕಳು ಸೂಕ್ಷ್ಮವಾದವರು. ಅವರಿಗೆ ಕೊಡುವ ನೀರಿನ ಫಿಲ್ಟರ್ ನ ಕಾಲಕಾಲಕ್ಕೆ ಬದಲಾವಣೆ ಮಾಡಬೇಕು. ಸಕ್ಷಂ ಅಂಗನವಾಡಿ ಯೋಜನೆಯಡಿ ಪ್ರತಿ ಅಂಗನವಾಡಿಗಳಿಗೆ ನೀಡಿರುವ 1 ಲಕ್ಷ ರೂ. ಅನುದಾನವು ಸಮರ್ಪಕ ಬಳಕೆಗೆ ಒತ್ತು ನೀಡಬೇಕು ಎಂದರು.

    ಜಿಲ್ಲೆಯಲ್ಲಿ ಮಳೆಯಿಂದಾಗಿ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ಥಿ ಕಾರ್ಯಗಳನ್ನು ಆದ್ಯತೆಯ ಮೇಲೆ ಸಂಬಂಧಪಟ್ಟ ಇಲಾಖೆಯವರು ಕೈಗೊಳ್ಳಬೇಕು. ರಸ್ತೆ ಎರಡೂ ಬದಿಯ ಜಂಗಲ್ ಕ್ಲಿಯರೆನ್ಸ್ ಅನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು.

    ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ. ಸುವರ್ಣ, ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ವಿಧಾನಪರಿಷತ್ ಶಾಸಕರುಗಳಾದ ಮಂಜುನಾಥ್ ಭಂಡಾರಿ ಹಾಗೂ ಡಾ. ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿ.ಎಫ್.ಓ ರಥ್ರೇನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    03/11/2026

    ತಾರತಮ್ಯವಿಲ್ಲದ ಸರ್ವರಿಗೂ ಸಮಾನ ಅವಕಾಶ ನೀಡುವ ಸಂವಿಧಾನ: ರಿಜ್ವಾನ್ ಅರ್ಷದ್

    03/11/2026

    ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

    02/11/2026
    Leave A Reply Cancel Reply

    4 × four =

    Call us

    Click Here

    Call us

    Call us

    Call us
    Highest Viewed Recently
    • ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
    • ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ
    • ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್
    • ಎಐ ಯುಗದಲ್ಲಿ ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ ಅಗತ್ಯ: ಸುಯೋಗ್ ಶೆಟ್ಟಿ
    • ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.