ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವು ದೀಪ ಬೆಳಗಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಂಸ್ಕ್ರತಿಕ ಕಾರ್ಯಕ್ರಮಗಳು, ಭಾಷಣಗಳು, ಕನ್ನಡದ ಕಂಪನ್ನು ಪಸರಿಸಿ ನೆರೆದವರಲ್ಲಿ ಕನ್ನಡಾಭಿಮಾನವನ್ನು ಮೂಡಿಸಿದವು. ಕಾರ್ಯಕ್ರಮವು ನಾಡು ನುಡಿ ಮತ್ತು ಸಂಸ್ಕ್ರತಿಯ ಮೇಲಿನ ಗೌರವವನ್ನು ಹೆಚ್ಚಿಸುವುದರೊಂದಿಗೆ ಅರ್ಥ ಪೂರ್ಣವಾಗಿ ಸಂಪನ್ನಗೊಂಡಿತು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

















