ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟೀವ್ ಮ್ಯಾನೇಜ್ಮೆಂಟ್, ಮೂಡುಬಿದಿರೆ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿಗೆ ನವೆಂಬರ್ 14 ಕೊನೆಯ ದಿನ. ಖಾಸಗಿ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿರಲಿದ್ದು, ಬಿಪಿಎಲ್/ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಪ್ರವೇಶಾತಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದ ಅಭ್ಯರ್ಥಿಗಳು ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:7022429440, 8971361396 ಹಾಗೂ 7259729104 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಛೇರಿ ಪ್ರಕಟಣೆ ತಿಳಿಸಿದೆ.












