ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಾಲಿಗ್ರಾಮ ದೇಗುಲ ಸಮೀಪದ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ರಚನೆ ಕುರಿತಂತೆ ದೇಗುಲದ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಕೇಂದ್ರ ಸರಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಆಡಳಿತ ಮಂಡಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಬಂಟ್ವಾಳ ನರಿಕೊಂಬು ಪ್ರಕಾಶ್ ಕಾರಂತ್ ಕಲ್ಲಡ್ಕ ಪ್ರಭಾಕರ್ ಭಟ್ ರವರಿಗೆ ಪ್ರಸಾದ ನೀಡಿ ಗೌರವಿಸಿದರು. ದೇಗುಲದಲ್ಲಿ ಅರ್ಚಕರಾದ ವೇ.ಮೂ ಜನಾರ್ದನ ಅಡಿಗ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇಗುಲದ ಉಪಾಧ್ಯಕ್ಷ ಚಂದ್ರಶೇಖರ್ ಉಪಾಧ್ಯಾಯ,ಮಾಜಿ ಅಧ್ಯಕ್ಷ ಐರೋಡಿ ಜಗದೀಶ್ ಕಾರಂತ, ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಕೋಶಾಧಿಕಾರಿ ಎಂ ಲಕ್ಷ್ಮೀನಾರಾಯಣ ಹೊಳ್ಳ, ಸದಸ್ಯರಾದ ಕೆ.ತಾರಾನಾಥ ಹೊಳ್ಳ, ಪ್ರಸನ್ನ ತುಂಗ, ಪೂರ್ವ ಉಪಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಕೂಟಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಅಧ್ಯಕ್ಷ ಎಚ್ ಸತೀಶ್ ಹಂದೆ, ಸಾಲಿಗ್ರಾಮ ಅಂಗಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಹೊಳ್ಳ, ಕಾರ್ಯದರ್ಶಿ ಮಹಾಬಲ ಹೇರಳೆ, ಆಡಳಿತ ಮಂಡಳಿಯ ಪೂರ್ವ ಸದಸ್ಯ ಕೃಷ್ಣ ಹೆಬ್ಬಾರ್, ಸ್ಥಳೀಯರು ಮತ್ತಿತರರು ಉಪಸ್ಥಿತರಿದ್ದರು.

















