Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ‘ಮೌಲ್ಯ ಚಿಂತನಾ ಶಿಬಿರ’
    ಉಡುಪಿ ಜಿಲ್ಲೆ

    ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ‘ಮೌಲ್ಯ ಚಿಂತನಾ ಶಿಬಿರ’

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಇಲ್ಲಿನ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ವತಿಯಿಂದ ಪಂಚಮ ವರ್ಷಾಚರಣೆ ಕಾರ್ಯಕ್ರಮ ಸರಣಿ 3ರ ಅಂಗವಾಗಿ ‘ಮೌಲ್ಯ ಚಿಂತನಾ ಶಿಬಿರʼ ಕಾಲೇಜಿನ ಅಮೃತ ಮಹೋತ್ಸವದ ಕಟ್ಟಡದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

    Click Here

    Click Here

    Call us

    Click Here

    ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಶ್ರೀ ಯುಗೇಶಾನಂದಜಿ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಸ್ವಾಮಿ ಯುಗೇಶಾನಂದಜಿ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

    ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತಾಧಿಕಾರಿ ಡಾ. ಕೆ. ಶ್ರೀಧರ ಆರ್. ಪೈ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಜಿ. ಪೈ, ಉಪಪ್ರಾಂಶುಪಾಲರು ಹಾಗು ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ, ಬಿಕಾಂ,ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ, ಮಾಲತಿ ದೇವಿ ಪ್ರಾಂಶುಪಾಲರು ಎಂಜಿಎಂ ಪದವಿಪೂರ್ವ ಕಾಲೇಜು, ಟಿ ಮೋಹನದಾಸ್ ಪೈ ಕೌಶಲ್ಯ ಕೇಂದ್ರದ ನಿರ್ದೇಶಕರಾದ ಟಿ. ರಂಗ ಪೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

    ಮಹಾತ್ಮ ಗಾಂಧಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಪೂರ್ವಾಹ್ನ ನಡೆದ ಪ್ರಥಮ ಗೋಷ್ಠಿಯಲ್ಲಿ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಪತ್ರಕರ್ತರಾದ ಡಾ. ನರೇಂದ್ರ ರೈ ದೇರ್ಲ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ‘ಶಿಕ್ಷಣ-ಜೀವನ ಮೌಲ್ಯಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಶಿಕ್ಷಣವು ಕೇವಲ ಅಂಕಗಳಿಕೆ ಮತ್ತು ಪದವಿ ಪಡೆಯುವುದಕ್ಕೆ  ಸೀಮಿತವಾಗದೆ, ವ್ಯಕ್ತಿಯ ವ್ಯಕ್ತಿತ್ವ ವಿಕಸನ ಹಾಗೂ ಜೀವನ ಮೌಲ್ಯಗಳ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ತಮ್ಮ ವಿಚಾರಗಳ ಮೂಲಕ ತಿಳಿಸಿದರು.

    ಮಧ್ಯಾಹ್ನ ನಡೆದ ದ್ವಿತೀಯ ಗೋಷ್ಠಿಯಲ್ಲಿ ಮಂಗಳೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಓ. ಆರ್. ಪ್ರಕಾಶ್ ಅವರು ‘ಜೀವನ ಕೌಶಲಗಳು – ಪ್ರಕರಣ ಅಧ್ಯಯನ’ ಎಂಬ  ವಿಷಯದ ಕುರಿತು ಮಾತನಾಡಿದರು. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಆತ್ಮವಿಶ್ವಾಸ, ಧೈರ್ಯ ಮತ್ತು ಸಕಾರಾತ್ಮಕ ಮನೋಭಾವದಿಂದ ಎದುರಿಸುವ ಅಗತ್ಯವನ್ನು ವಿವರಿಸಿದರು. ಅಪರಾಹ್ನ ನಡೆದ ಸಂವಾದ ಕಾರ್ಯಕ್ರಮದಲ್ಲಿ ‘ಸ್ಪರ್ಧಾತ್ಮಕ ಜಗತ್ತು– ಮೌಲ್ಯಗಳ ಮಹತ್ವ’ ಎಂಬ ವಿಷಯದ ಕುರಿತು ಚರ್ಚೆ ನಡೆಯಿತು. ಪ್ರೊ. (ಡಾ.) ವರದೇಶ ಹಿರೇಗಂಗೆ ಅವರು ಸಮನ್ವಯಕಾರರಾಗಿ ಕಾರ್ಯನಿರ್ವಹಿಸಿದರು. ಡಾ. ಗಣನಾಥ ಎಕ್ಕಾರ್ ಹಾಗೂ ಡಾ. ಪಾರ್ವತಿ ಜಿ. ವಾತಾಳ ಅವರು ಸಂವಾದದಲ್ಲಿ ಭಾಗವಹಿಸಿ ತಮ್ಮ ವಿಚಾರಗಳನ್ನು ಹಂಚಿಕೊಂಡರು.

    Click here

    Click here

    Click here

    Call us

    Call us

    ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಶಿಬಿರದಲ್ಲಿ ಆತ್ಮಜ್ಞಾನ, ಪರಾನುಭೂತಿ, ವಿಮರ್ಶಾತ್ಮಕ ಚಿಂತನೆ, ಸೃಜನಾತ್ಮಕ ಚಿಂತನೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಸಮಸ್ಯೆ ಪರಿಹಾರ, ಪರಿಣಾಮಕಾರಿ ಸಂವಹನ, ಪರಸ್ಪರ ಸಂಬಂಧಗಳ ನಿರ್ವಹಣೆ, ಒತ್ತಡ ನಿರ್ವಹಣೆ ಹಾಗೂ ಭಾವನೆಗಳನ್ನು ನಿಭಾಯಿಸುವುದು ಸೇರಿದಂತೆ ಹತ್ತು ಪ್ರಮುಖ ಜೀವನ ಕೌಶಲಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಇಂದಿನ ಸ್ಪರ್ಧಾತ್ಮಕ ಬದುಕಿನಲ್ಲಿ ಮಾನವೀಯತೆ, ನೈತಿಕತೆ, ಸಾಮಾಜಿಕ ಜವಾಬ್ದಾರಿ ಹಾಗೂ ಜೀವನ ಮೌಲ್ಯಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿತ್ತು. ವಿವಿಧ ಅಧಿವೇಶನಗಳು ಮತ್ತು ಸಂವಾದ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಚಿಂತನೆ ಹಾಗೂ ಜೀವನದ ಬಗ್ಗೆ ಸಕಾರಾತ್ಮಕ ದೃಷ್ಟಿಕೋನ ಬೆಳೆಸಲು ಶಿಬಿರವು ಪೂರಕವಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿ: ಅರ್ಜಿ ಆಹ್ವಾನ

    04/11/2026

    ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

    03/11/2026

    ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

    03/11/2026
    Leave A Reply Cancel Reply

    seventeen + 6 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ‘ಮೌಲ್ಯ ಚಿಂತನಾ ಶಿಬಿರ’
    • ರಾಜ್ಯ ಮಟ್ಟದ ಬಾಲಕಿಯರ ಖೋ-ಖೋ ಪಂದ್ಯಾಟ: ಆಳ್ವಾಸ್‌ ಬಾಲಕಿಯರ ತಂಡ ಚಾಂಪಿಯನ್
    • ಸಾಲಿಗ್ರಾಮ ದೇಗುಲಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ
    • ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿ: ಅರ್ಜಿ ಆಹ್ವಾನ
    • ನಕಲಿ ದಾಖಲೆ ಸೃಷ್ಟಿಸಿ ಎಂ.ಸಿ.ಸಿ ಬ್ಯಾಂಕ್‌ಗೆ 98.99 ಲಕ್ಷ ರೂ. ವಂಚನೆ – ಮೂರು ಪ್ರತ್ಯೇಕ ಪ್ರಕರಣ ದಾಖಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.