ಕುಂದಾಪ್ರ ಡಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಮತ್ತು ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ) ತೆಕ್ಕಟ್ಟೆ ಇದರ ಸಹಯೋಗದೊಂದಿಗೆ ತೆಕ್ಕಟ್ಟೆಯ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ನಡೆದ 2026-27ನೇ ಸಾಲಿನ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.












