ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗಾಗಿ “ಇನೋವೆಷನ್ ಅಂಡ್ ಡಿಸೈನ್ ಥಿಂಕಿಂಗ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ನಾವೀನ್ಯತೆಯ ಮಹತ್ವ, ಸೃಜನಶೀಲ ಚಿಂತನೆ ಹಾಗೂ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವಲ್ಲಿ ವಿನ್ಯಾಸ ಚಿಂತನೆಯ ಪಾತ್ರದ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಈ ಕಾರ್ಯಕ್ರಮದಲ್ಲಿ ಎಂಬಿಎ ಮತ್ತು ಎಂಸಿಎ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಎಂಬಿಎ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ, ಎಂಸಿಎ ಉಪನ್ಯಾಸಕರಾದ ಪ್ರಸನ್ನ ಕುಮಾರ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.
ಎಂಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಅದಿತಿ ಕಾರ್ಯಕ್ರಮವನ್ನು ನಿರೂಪಿಸಿದರು.

















