Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳಿಗೆ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ: ತನ್ವೀರ್ ಸೇಠ್
    ಉಡುಪಿ ಜಿಲ್ಲೆ

    ವಿದ್ಯಾರ್ಥಿಗಳಿಗೆ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ: ತನ್ವೀರ್ ಸೇಠ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಸತಿಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಾಂಗ ಮಾಡಲು ಪೋಷಕರು ತಮ್ಮ ಮಕ್ಕಳನ್ನು ವಿಶ್ವಾಸದಿಂದ ಕಳುಹಿಸುತ್ತಾರೆ. ವಿದ್ಯಾರ್ಥಿಗಳ ಜವಾಬ್ದಾರಿ ನಿಮ್ಮ ಮೇಲೆ ಇರುತ್ತದೆ. ಅವರ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ, ಉತ್ತಮ ಶಿಕ್ಷಣವಂತರನ್ನಾಗಿಸಬೇಕು. ಈ ಕಾರ್ಯ ಕೈಗೊಳ್ಳಲು ಯಾವುದೇ ರೀತಿಯ ಮೂಲ ಸೌಲಭ್ಯಗಳ ನ್ಯೂನ್ಯತೆಗಳಿದ್ದಲ್ಲಿ ಸಮಿತಿಯ ಗಮನಕ್ಕೆ ತರಬೇಕು ಎಂದು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಹೇಳಿದರು.

    Click Here

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಮುದಾಯದವರ ಕಲ್ಯಾಣಕ್ಕಾಗಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ/ ಕಾರ್ಯಕ್ರಮ/ ಸೌಲಭ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ. ಇಲ್ಲಿ ಶೈಕ್ಷಣಿಕ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೊರಜಿಲ್ಲೆಗಳಿಂದ ವ್ಯಾಸಾಂಗಕ್ಕಾಗಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ, ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ. ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶವನ್ನು ಸಹ ಹೊಂದಿದೆ. ಇದನ್ನು ಮತ್ತಷ್ಟು ಪರಿಶ್ರಮದಿಮದ ಮುಂದುವರೆಸಿಕೊಂಡು ಹೋಗಬೇಕು. ವಸತಿಶಾಲೆ ಹಾಗೂ ವಿದ್ಯಾರ್ಥಿನಿಲಯಗಳ ನಿರ್ವಹಣೆಯಲ್ಲಿ ಲೋಪಗಳು ಬಂದಲ್ಲಿ ಸರಿಪಡಿಸಿಕೊಳ್ಳಬೇಕು ಎಂದರು.

    ಪೋಷಕರುಗಳು ತಮ್ಮ ಮಕ್ಕಳು ಇಂತಹ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡಿದರೆ ಉತ್ತಮ ಶಿಕ್ಷಣ ಪಡೆದು ಉದ್ಯೋಗವಂತರಾಗುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡು, ಅಧಿಕಾರಿಗಳು ಹಾಗೂ ಹಾಸ್ಟೆಲ್ ಸಿಬ್ಬಂದಿಗಳ ಮೇಲೆ ವಿಶ್ವಾಸ ಹೊಂದಿ ವಸತಿ ಶಾಲೆ ಹಾಗೂ ಹಾಸ್ಟೆಲ್‌ಗಳಿಗೆ ಕಳುಹಿಸುತ್ತಾರೆ. ಅಧಿಕಾರಿಗಳು ಹಾಗೂ ಹಾಸ್ಟೆಲ್ ಸಿಬ್ಬಂದಿಗಳು ಆ ವಿಶ್ವಾಸವನ್ನು ಕಳೆದುಕೊಳ್ಳದೇ ಆ ಮಕ್ಕಳಿಗೆ ಪೋಷಕರಾಗಿ ನಿಂತು ಅವರ ಸಾಧಕ-ಬಾಧಕಗಳನ್ನು ಅರಿತುಕೊಳ್ಳಬೇಕು ಎಂದರು.

    ಇಲಾಖೆಗಳು ಬರೀ ಕಟ್ಟಡ ಕಟ್ಟುವ ಕೆಲಸದ ಬದಲು ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕು. ತಪ್ಪುಗಳು ಸಹಜ. ಆದರೆ ಆ ತಪ್ಪಗಳಿಗೆ ಅಧಿಕಾರಿಗಳು ಕಾರಣವಾಗಬಾರದು. ಆ ತಪ್ಪುಗಳನ್ನು ತಡೆಯುವ ಕೆಲಸ ಅಧಿಕಾರಿಗಳಿಂದ ಆಗಬೇಕು ಎಂದರು.

    Click here

    Click here

    Click here

    Call us

    Call us

    ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಹಾಸ್ಟೆಲ್‌ಗಳಲ್ಲಿ ಸೀಟು ಸಿಗುತ್ತಿಲ್ಲ ಎಂಬ ದೂರುಗಳು ಇವೆ. ಇದನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು. ಬೇಡಿಕೆಗೆ ಅನುಗುಣವಾಗಿ ಹಾಸ್ಟಲ್‌ಗಳಲ್ಲಿ ಸೀಟುಗಳು ಲಭ್ಯವಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

    ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಬಿಸಿ ನೀರು, ಊಟೋಪಹಾರ, ಸ್ವಚ್ಛತೆ, ಸೋಪ್ ಕಿಟ್ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ಸಕಾಲಕ್ಕೆ ದೊರೆಯುವಂತೆ ನೋಡಿಕೊಳ್ಳಬೇಕು. ಹಾಸ್ಟಲ್‌ಗಳ ಸಂಖ್ಯೆ ಹೆಚ್ಚಿದ್ದು, ವಾರ್ಡನ್, ರಾತ್ರಿ ಕಾವಲುಗಾರ ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದನ್ನು ಸರಿದೂಗಿಸಲು ಮುಂದಾಗಬೇಕು. ಹೊಸದಾಗಿ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡುವಾಗ ಬೆಳಕಿನ ವ್ಯವಸ್ಥೆ, ಪ್ಯಾನ್, ಬಿಸಿ ನೀರು, ಹಾಸ್ಟೆಲ್ ಸಿಬ್ಬಂದಿ, ಅಡುಗೆ ತಯಾರಕರು, ಸಹಾಯಕರು, ರಾತ್ರಿ ಕಾವಲುಗಾರರನ್ನು ಸಹ ನೇಮಿಸುವ ಅವಶ್ಯಕತೆ ಇದೆ ಎಂದರು.

    ಸಮುದಾಯಗಳ ಮಕ್ಕಳ ಪೋಷಣೆಯನ್ನು ಸಹ ನಿರಂತರವಾಗಿ ಮಾಡಬೇಕು. ಸರಕಾರಿ ಹಾಗೂ ಖಾಸಗಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ಪೋಷಣೆ ಮಾಡಲಾಗುತ್ತದೆ, ನಿರ್ವಹಣೆ ಯಾವ ರೀತಿಯ ನಡೆಯುತ್ತದೆ ಎಂಬ ಹೋಲಿಕೆ ಮಾಡಿ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು ಎಂದರು.

    ವಿಧಾನಪರಿಷತ್ತಿನ ಸದಸ್ಯರಾದ ಕೇಶವ ಪ್ರಸಾದ್ ಎಸ್ ಮಾತನಾಡಿ, ಜಿಲ್ಲೆಯು ಉತ್ತಮ ಫಲಿತಾಂಶ ಹೊಂದಲು ಕಾರಣವಾದ ಪ್ರಮುಖ ಅಂಶಗಳೇನು ಎಂಬುದನ್ನು ಮನಗಾಣಬೇಕು. ಮುಸ್ಲಿಂ, ಕ್ರಿಶ್ಚಿಯನ್ ಹೊರತುಪಡಿಸಿ, ಉಳಿದ ಅಲ್ಪಸಂಖ್ಯಾತ ಸಮುದಾಯದವರಿಗೆ ಸರಕಾರದ ಯೋಜನೆಗಳು ತಲುಪಿದೆಯೇ ಎಂಬುದನ್ನು ವಿಮರ್ಶಿಸಬೇಕು ಎಂದರು.

    ವಿಧಾನಸಭೆ ಸದಸ್ಯರಾದ ಚನ್ನಬಸಪ್ಪ ಮಾತನಾಡಿ, ವಿದ್ಯಾಭ್ಯಾಸಕ್ಕಾಗಿ ಉತ್ತರ ಕರ್ನಾಟಕ ಸೇರಿದಂತೆ ಹೊರ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ದಾಖಲಾಗುತ್ತಾರೆ. ವಿದ್ಯಾರ್ಥಿಗಳಿಗೆ ಅನುಗುಣವಾಗಿ ಹಾಸ್ಟಲ್‌ಗಳಲ್ಲಿ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದ ಅವರು, ಯಾವ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ತೆರಳುತ್ತಾರೋ ಅಂತಹ ಜಿಲ್ಲೆಗಳಲ್ಲಿ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

    ವಿಧಾನಸಭೆ ಸದಸ್ಯರಾದ ಹೆಚ್.ಎ ಇಕ್ಬಾಲ್ ಹುಸೇನ್ ಮಾತನಾಡಿ, ವಸತಿ ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿದಾಗ ವಿದ್ಯಾರ್ಥಿಗಳು ಹೆಚ್ಚು ದಾಖಲು ಆಗುತ್ತಾರೆ. ವಿದ್ಯಾರ್ಥಿಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ ಖಾಸಗಿಯಾಗಿ ದಾನಿಗಳು ಹೆಚ್ಚು ಕೊಡುಗೆ ನೀಡುತ್ತಾರೆ ಎಂದು ಹೇಳುತ್ತಿದ್ದೀರಿ, ಇನ್ನಷ್ಟು ದಾನಿಗಳನ್ನು ಅಪ್ರೋಚ್ ಮಾಡಿಸುವ ಕೆಲಸ ಮಾಡಬೇಕು ಎಂದ ಅವರು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಸಣ್ಣ ಸಣ್ಣ ಶಾಲೆಗಳನ್ನು ಒಟ್ಟುಗೂಡಿಸಿ, ಈ ಶಾಲೆಗಳ ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ವಿದ್ಯಾಭ್ಯಾಸ ಕಲ್ಪಿಸಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಸರಕಾರದ ಜೊತೆಗೆ ಹೆಚ್ಚಾಗಿ ಖಾಸಗಿ ದಾನಿಗಳು ಸಿ.ಆರ್.ಎಸ್ ಅನುದಾನ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಪ್ರೇರಿತವಾಗಿ ಮುಂದೆ ಬರುತ್ತಾರೆ. ಶಾಲೆಯ ಹಳೆಯ ವಿದ್ಯಾರ್ಥಿಗಳು ಸಹ ನಮ್ಮ ಶಾಲೆಯೆಂಬ ಅಭಿಮಾನದಿಂದ ಸಹಾಯಹಸ್ತ ನೀಡುತ್ತಾರೆ. ನಿವೃತ್ತಿ ಹೊಂದಿದ ಶಿಕ್ಷಕರೂ ವಿದ್ಯಾರ್ಥಿಗಳ ಕಲಿಕೆಗೆ ಮುಂದಾಗುತ್ತಾರೆ. 29 ಸರ್ಕಾರಿ ಶಾಲೆಗಳ ಶೌಚಾಲಯಗಳ ಶುಚಿತ್ವವನ್ನು ಕೈಗೊಳ್ಳಲು ದಾನಿಯೊಬ್ಬರು ತಮ್ಮದೇ ಸಿಬ್ಬಂದಿ, ವಾಹನ, ಸ್ವಚ್ಚತಾ ಪರಿಕರಗಳು, ನೀರಿನೊಂದಿಗೆ ಬಂದು ನಿರಂತರವಾಗಿ ಸ್ವಚ್ಚತಾ ಕಾರ್ಯವನ್ನು ನಡೆಸುತ್ತಿರುವುದು ಉದಾಹರಣೆಗಳು ಇವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಫಲಿತಾಂಶವು ಉತ್ತಮ ವಾಗಿದೆ ಎಂದು ಸಮಿತಿಯ ಗಮನಕ್ಕೆ ತಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯ ವಿದ್ಯಾರ್ಥಿನಿಲಗಳಿಗೆ ವಿದ್ಯಾಭ್ಯಾಸಕ್ಕಾಗಿ ಉತ್ತರ ಕನ್ನಡ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಆರಂಭಿಕ ಹಂತವಾದ 7 ರಿಂದ 9 ನೇ ತರಗತಿಯ ವರೆಗೆ ಅವರಿಗೆ ಅಕ್ಷರಾಭ್ಯಾಸ, ಓದುವುದು, ಬರೆಯುವುದು ಸೇರಿದಂತೆ ತಳಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಶಾಲಾ ಶಿಕ್ಷಕರು ವಿಶೇಷ ಕಾಳಜಿ ವಹಿಸಿ, ಈ ಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಫಲಿತಾಂಶ ಉತ್ತಮ ರೀತಿಯಲ್ಲಿ ಬರುತ್ತಿದೆ ಎಂದರು. 

    ಸಭೆಯಲ್ಲಿ ವಿಧಾನಸಭೆ ಸದಸ್ಯರುಗಳಾದ ಕಟಕದೊಂಡ ವಿಠ್ಠಲ್ ದೊಂಡಿಬಾ, ಬಿ.ಪಿಹರೀಶ್, ರಾಜೇಶ್ ನಾಯಕ್ ಯು ಹಾಗೂ ಕರೆಮ್ಮ ಜಿ ನಾಯ್ಕ, ವಿಧಾನಪರಿಷತ್ತಿನ ಸದಸ್ಯರುಗಳಾದ ಕೆ ಅಬ್ದುಲ್ ಜಬ್ಬರ್, ಇಲಾಖೆಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಜಂಟಿ ಕಾರ್ಯದರ್ಶಿ ಶಿವರಾಮಾಚಾರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ‘ಮೌಲ್ಯ ಚಿಂತನಾ ಶಿಬಿರ’

    04/11/2026

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿ: ಅರ್ಜಿ ಆಹ್ವಾನ

    04/11/2026

    ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

    03/11/2026
    Leave A Reply Cancel Reply

    14 − four =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ʼವಿಕ್ಟರಿ 2026ʼ ಉದ್ಘಾಟನೆ
    • ಆಳ್ವಾಸ್: ಆರೋಗ್ಯಕರ ನಡವಳಿಕೆ ಹಾಗೂ ಎಚ್‌ಐವಿ ಏಡ್ಸ್ ಕುರಿತು ಜಾಗೃತಿ ಉಪನ್ಯಾಸ
    • ವಿದ್ಯಾರ್ಥಿಗಳಿಗೆ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ: ತನ್ವೀರ್ ಸೇಠ್
    • ಕೋಟ: ಹಣ ದುಪ್ಪಟ್ಟು ಮಾಡುವ ಆಮಿಷವೊಡ್ಡಿ ಹೊಟೇಲ್ ಉದ್ಯಮಿಗೆ 5.76 ಲಕ್ಷ ರೂ. ವಂಚನೆ
    • ಮೂಡ್ಲಕಟ್ಟೆ: ʼಇನೋವೆಷನ್ ಅಂಡ್‌ ಡಿಸೈನ್ ಥಿಂಕಿಂಗ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.